ಬೈಂದೂರು ಯೋಜನಾ ಪ್ರಾಧಿಕಾರ ರಚನೆ ವಿಳಂಬಕ್ಕೆ ತರಾಟೆ
Team Udayavani, Mar 4, 2021, 4:40 AM IST
ಕುಂದಾಪುರ/ಕೊಲ್ಲೂರು: ಬೈಂದೂರು ಪಟ್ಟಣ ಪಂಚಾಯತ್‌ಗೆ ಸ್ಥಳೀಯ ಯೋಜನಾ ಪ್ರಾಧಿಕಾರ ರಚನೆಗೆ ಗೆಜೆಟ್ ಸುತ್ತೋಲೆ ಹೊರಡಿಸಿ, 6 ತಿಂಗಳುಗಳು ಕಳೆದರೂ ಇನ್ನೂ ಪ್ರಾಧಿಕಾರ ಆರಂಭವಾಗದ ಕುರಿತಂತೆ ಸಂಸದ ಬಿ.ವೈ. ರಾಘವೇಂದ್ರ ಅವರು ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡ ಪ್ರಸಂಗ ಬುಧವಾರ ಕೊಲ್ಲೂರಿನಲ್ಲಿ ನಡೆಯಿತು.
ಕೊಲ್ಲೂರಿನ ಅಮ್ಮ ವಿಶ್ರಾಂತಿ ಗೃಹದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರ ಹಾಗೂ ಪ.ಪಂ. ವ್ಯಾಪ್ತಿಯ ಅಭಿವೃದ್ಧಿ ಕಾಮಗಾರಿ ಕುರಿತ ಪ್ರಗತಿ ಪರಿಶೀಲನ ಸಭೆಯಲ್ಲಿ ಸಂಸದರು ಕೆಲವೊಂದು ವಿಚಾರಗಳ ಕುರಿತಂತೆ ಆಕ್ರೋಶ ವ್ಯಕ್ತಪಡಿಸಿದರು.
ಬೈಂದೂರು ಸ್ಥಳೀಯಾಭಿವೃದ್ಧಿ ಯೋಜನಾ ಪ್ರಾಧಿಕಾರವನ್ನು ರಚಿಸುವಲ್ಲಿ ಶೀಘ್ರ ಕ್ರಮ ಕೈಗೊಳ್ಳಬೇಕು. ಎಸಿ ಹಾಗೂ ಡಿಸಿಯವರು ಈ ಬಗ್ಗೆ ಪರಿಶೀಲನೆ ನಡೆಸಸಲು ಸೂಚಿಸಿದರು.
ಬೈಂದೂರು ಪ. ಪಂ. ವ್ಯಾಪ್ತಿಯನ್ನು ಸಿಆರ್‌ಝಡ್-2 ವಲಯ ವ್ಯಾಪ್ತಿಗೆ ಸೇರ್ಪಡೆ ಮಾಡಲು ಚೆನ್ನೈಗೆ ಪ್ರಸ್ತಾವನೆ ಕಳುಹಿಸಲಾಗಿದೆ ಎಂದು ಸಿಆರ್‌ಝಡ್ ಉಡುಪಿಯ ಪ್ರಾದೇಶಿಕ ನಿರ್ದೇಶಕರು ಮಾಹಿತಿ ನೀಡಿದರು.
ಮೂಲ ಸೌಲಭ್ಯಕ್ಕೆ ಕ್ರಮ
ಶ್ಮಶಾನಕ್ಕೆ ಐದೂವರೆ ಸೆಂಟ್ಸ್ ಜಾಗ ಗುರುತಿಸಲಾಗಿದ್ದು, ಶೀಘ್ರ ಮೂಲ ಸೌಲಭ್ಯಗಳನ್ನು ಕಲ್ಪಿಸಿಕೊಡಲು ಸೂಚಿಸಿದರು.
ಘನ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣಕ್ಕೆ ಎಂಟೂವರೆ ಸೆಂಟ್ಸ್ ಜಾಗ ಗುರುತಿಸಿದ್ದು ಅನುದಾನಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಶಾಸಕ ಬಿ.ಎಂ. ಸುಕುಮಾರ್ ಶೆಟ್ಟಿ ಕೊಲ್ಲೂರು ರಿಂಗ್ ರೋಡ್ ರಚನೆ, ಆಗಬೇಕಾದ ತುರ್ತು ಕೆಲಸಗಳ ಬಗ್ಗೆ ಗಮನಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭ ಜಿ.ಪಂ. ಸದಸ್ಯರಾದ ಬಾಬು ಶೆಟ್ಟಿ, ಶಂಕರ ಪೂಜಾರಿ, ರೋಹಿತ್ ಕುಮಾರ್ ಶೆಟ್ಟಿ, ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್, ಕುಂದಾಪುರ ಉಪ ವಿಭಾಗದ ಸಹಾಯಕ ಆಯುಕ್ತ ಕೆ. ರಾಜು, ಕುಂದಾಪುರ ಡಿಎಫ್‌ಒ ಆಶೀಶ್ ರೆಡ್ಡಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅರುಣ ಪ್ರಭಾ, ಸಿಆರ್‌ಝಡ್ ಉಡುಪಿಯ ಪ್ರಾದೇಶಿಕ ನಿರ್ದೇಶಕ ದಿನೇಶ್, ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ವಿವಿಧ ಇಲಾಖಾ ಅಧಿಕಾರಿಗಳು ಮತ್ತಿತರರಿದ್ದರು.
ಸಾಫ್ಟ್‌ವೇರ್ ಸಮಸ್ಯೆ
ಬೈಂದೂರು ಪ.ಪಂ.ವ್ಯಾಪ್ತಿಯ ಬಡವರಿಗೆ ಮನೆ ಕಟ್ಟಲು ಅನುಕೂಲವಾಗುವಂತೆ ಪಿಎಂಎವೈ ಸೌಲಭ್ಯ ಕಲ್ಪಿಸಲು ಹಾಗೂ ಅದಕ್ಕಿರುವ ತಾಂತ್ರಿಕ ತೊಂದರೆ ನಿವಾರಿಸಲು ಸಂಸದರು ಸೂಚಿಸಿದರು. ಇದಕ್ಕುತ್ತರಿಸಿದ ಅಧಿಕಾರಿಗಳು ಬೈಂದೂರು ಪಟ್ಟಣ ಪಂಚಾಯತ್ ರಚನೆಯಾಗಿದ್ದರೂ ಕೇಂದ್ರ ನಗರಾಭಿವೃದ್ಧಿ ಸಚಿವಾಲಯದಲ್ಲಿ ಇನ್ನೂ ನೋಂದಣಿಯಾಗದ್ದರಿಂದ ಯೋಜನೆಯಲ್ಲಿ ಸೇರ್ಪಡೆಗೊಳಿಸಲು ತಾಂತ್ರಿಕ ತೊಂದರೆ ಯಾಗಿದೆ. ಇದನ್ನು ಕೂಡಲೇ ಸರಿಪಡಿಸುವಂತೆ ಎಸಿಯವರಿಗೆ ಸಂಸದರು ತಿಳಿಸಿದರು.
ರಿಂಗ್ ರೋಡ್ ಪ್ರಸ್ತಾವನೆ
ಸಂಸದ ಬಿ.ವೈ. ರಾಘವೇಂದ್ರ ಮಾತನಾಡಿ, ಕೊಲ್ಲೂರಿನಲ್ಲಿ ರಿಂಗ್ ರೋಡ್ ನಿರ್ಮಾಣಕ್ಕೆ ತೀರ್ಮಾನಿ ಸಲಾಗಿದೆ. ಇದರ ನಿರ್ಮಾಣ ಕಾಮಗಾರಿ ಹೆದ್ದಾರಿ ಇಲಾಖೆ ಹಾಗೂ ಭೂಸ್ವಾಧೀನ ಕಾರ್ಯ ಲೋಕೋಪಯೋಗಿ ಇಲಾಖೆಯಿಂದ ಆಗಲಿದೆ ಎಂದರು. ಇದಕ್ಕಾಗಿ ಈಗಾಗಲೇ ಕರಡು ಯೋಜನೆ ಸಿದ್ಧಪಡಿಸಲಾಗಿದೆ. 6.5 ಕೋ.ರೂ. ವೆಚ್ಚದ ಪ್ರಸ್ತಾವನೆ ಸರಕಾರಕ್ಕೆ ಕಳುಹಿಸಲಾಗಿದೆ. ಇದರಲ್ಲಿ 3 ಕೋ.ರೂ. ಭೂಸ್ವಾಧೀನಕ್ಕೆ ಬೇಕಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundapura: ಅಂಬರ್‌ಗ್ರೀಸ್ ಮಾರಾಟ ಜಾಲ: ಅಧಿಕಾರಿಗಳಿಗೆ ಹಲ್ಲೆಗೈದ ನಾಲ್ವರ ಬಂಧನ
Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!
Shiroor: ಡಿವೈಡರ್‌ಗೆ ಕಾರು ಢಿಕ್ಕಿ
Kundapura: ಕಸದಿಂದಲೇ ಕಲಾಕೃತಿ; ಕಾಲ್ತೋಡಿನಲ್ಲೊಂದು ಸುಂದರ ಅಂಗನವಾಡಿ
ಹೆಬ್ಬಾಗಿಲಿನಲ್ಲಿ ಆರಂಭವಾದ ಶಾಲೆ ಇಂದು ಈ ಊರ ಮಕ್ಕಳ ಪಾಲಿನ ಶಿಕ್ಷಣದ ಹೆಬ್ಬಾಗಿಲೇ ಆಗಿದೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.