ಅವ್ಯವಸ್ಥೆಯ ಕುರಿತು ದೂರು : ದೆಹಲಿ ವಿಮಾನ ನಿಲ್ದಾಣದಲ್ಲಿ 20 ಪರೀಕ್ಷಾ ಕೌಂಟರ್
Team Udayavani, Dec 4, 2021, 6:53 PM IST
ನವದೆಹಲಿ : ಹೊಸ ಪ್ರಯಾಣ ಮಾರ್ಗಸೂಚಿಗಳ ಅನುಷ್ಠಾನದ ನಂತರ ಟರ್ಮಿನಲ್ನಲ್ಲಿ ಅವ್ಯವಸ್ಥೆ ಮತ್ತು ಜನಸಂದಣಿಯ ಕುರಿತು ಅನೇಕ ವಿಮಾನ ಪ್ರಯಾಣಿಕರು ದೂರಿದ ನಂತರ ದೆಹಲಿ ವಿಮಾನ ನಿಲ್ದಾಣದಲ್ಲಿ 20 ಕೋವಿಡ್ ಪರೀಕ್ಷಾ ಕೌಂಟರ್ಗಳನ್ನು ಸ್ಥಾಪಿಸಲಾಗಿದೆ.
ಒಮಿಕ್ರಾನ್ ಹಬ್ಬುತ್ತಿರುವ “ ಅಪಾಯಕಾರಿ ಎನಿಸಿರುವ” ದೇಶಗಳಿಂದ ಆಗಮಿಸುವ ಪ್ರಯಾಣಿಕರ ಕಡ್ಡಾಯ ಕೋವಿಡ್-19 ಪರೀಕ್ಷೆಯನ್ನು ಮೊದಲೇ ಕಾಯ್ದಿರಿಸಿದ ಪ್ರಯಾಣಿಕರಿಗಾಗಿ 20 ಮೀಸಲಾದ ಕೌಂಟರ್ಗಳನ್ನು ಸ್ಥಾಪಿಸಲಾಗಿದೆ ಎಂದು ದೆಹಲಿ ವಿಮಾನ ನಿಲ್ದಾಣದ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ದೆಹಲಿ ವಿಮಾನ ನಿಲ್ದಾಣದಲ್ಲಿ ಅವ್ಯವಸ್ಥೆಯಾಗದಂತೆ ನೋಡಿಕೊಳ್ಳಲು ಈ ಕೌಂಟರ್ಗಳನ್ನು ಸ್ಥಾಪಿಸಲಾಗಿದೆ.
ಈ ವಾರದ ಆರಂಭದಲ್ಲಿ ಕೇಂದ್ರ ಆರೋಗ್ಯ ಸಚಿವಾಲಯ ಹೊರಡಿಸಿದ ಹೊಸ ಮಾರ್ಗಸೂಚಿಗಳ ಪ್ರಕಾರ, “ಅಪಾಯಕಾರಿ ಎನಿಸಿಕೊಂಡಿರುವ ದೇಶಗಳಿಂದ ಬರುವ ಎಲ್ಲಾ ಪ್ರಯಾಣಿಕರು ಕಡ್ಡಾಯವಾಗಿ ಆರ್ ಟಿಪಿಸಿಆರ್ ಪರೀಕ್ಷೆಗೆ ಒಳಗಾಗಬೇಕಾಗುತ್ತದೆ ಮತ್ತು ಇತರ ದೇಶಗಳಿಂದ ಬರುವ ಶೇಕಡಾ ಐದು ಪ್ರಯಾಣಿಕರು ಸಹ ರಾಂಡಮ್ ಆಧಾರದ ಮೇಲೆ ಪರೀಕ್ಷೆಯನ್ನು ಮಾಡಿಸಿಕೊಳ್ಳಬೇಕಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.