Karnataka: ಸಚಿವರಿಗೆ ದಿಲ್ಲಿ ಪಾಠ- ರಾಹುಲ್, ಖರ್ಗೆ ಅವರಿಂದ ಮಾರ್ಗದರ್ಶನ
Team Udayavani, Jun 14, 2023, 7:15 AM IST
ಬೆಂಗಳೂರು: ರಾಜ್ಯದ ನೂತನ ಸಚಿವರಿಗೆ ಈ ವಾರಾಂತ್ಯ ದಿಲ್ಲಿಯಲ್ಲಿ “ನೀತಿ ಪಾಠ” ನಡೆಯಲಿದೆ. ಸರಕಾರ ಹಾಗೂ ಪಕ್ಷದ ನಡುವಿನ ಸಮನ್ವಯ ಮತ್ತು ಸಚಿವರ ಕಾರ್ಯವೈಖರಿ ಹೇಗಿರಬೇಕು ಎಂಬ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರು ಬೋಧಿಸಲಿದ್ದಾರೆ.
ಸರಕಾರದ ಬಗ್ಗೆ ರಾಜ್ಯದ ಜನತೆ, ವಿಶೇಷವಾಗಿ ಕಾಂಗ್ರೆಸ್ ಹೈಕಮಾಂಡ್ ಬಹಳ ನಿರೀಕ್ಷೆ ಇರಿಸಿಕೊಂಡಿದೆ. ಜತೆಗೆ ರಾಜ್ಯ ಸರಕಾರದ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನವನ್ನು ವಿವಿಧ ರಾಜ್ಯಗಳು ಗಮನಿಸುತ್ತಿವೆ. ಇದೊಂದು ಯಶಸ್ವೀ ಸರಕಾರ ಆಗಬೇಕೆಂಬುದು ಹೈಕಮಾಂಡ್ ಸಂಕಲ್ಪ.
ಏನೇನು ಸಲಹೆ ಸೂಚನೆ?
ಅಧಿಕಾರದಲ್ಲಿ ಇರುವವರು ಯಾವ ಕಾರಣಕ್ಕೂ ಪಕ್ಷವನ್ನು ಮರೆಯಬಾರದು ಹಾಗೂ ನಿರ್ಲಕ್ಷ é ಮಾಡಬಾರದು, ಸರಕಾರ ಹಾಗೂ ಪಕ್ಷದ ನಡುವೆ ಸಮನ್ವಯ ಇರಬೇಕು, ತಿಂಗಳಿಗೊಮ್ಮೆ ಸಚಿವರು ಕಡ್ಡಾಯವಾಗಿ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರ ಅಹವಾಲುಗಳಿಗೆ ಸ್ಪಂದಿಸಬೇಕು, ಜಿಲ್ಲಾ ಕೇಂದ್ರಗಳಿಗೆ ತೆರಳಿದಾಗ ಜಿಲ್ಲಾ ಕಾಂಗ್ರೆಸ್ ಕಚೇರಿಗಳಿಗೆ ಭೇಟಿ ನೀಡಬೇಕು. ವಿಶೇಷವಾಗಿ ತಾವು ನಿರ್ವಹಿಸುತ್ತಿರುವ ಇಲಾಖೆಗಳಲ್ಲಿ ಯಾವುದೇ ವಿವಾದಕ್ಕೆ ಎಡೆ ಮಾಡಿಕೊಡದೆ ಉತ್ತಮ ರೀತಿಯಲ್ಲಿ ಆಡಳಿತ ಒದಗಿಸಬೇಕು, ಸಾರ್ವಜನಿಕರ ಜತೆ ಸಂಪರ್ಕ ಇರಿಸಿಕೊಂಡು ಕೆಲಸ ಮಾಡಬೇಕು ಎಂಬಿತ್ಯಾದಿಗಳ ಬಗ್ಗೆ ಹೈಕಮಾಂಡ್ ಸಚಿವರಿಗೆ ಪಾಠ ಮಾಡಲಿದೆ.
ದೂರುಗಳ ಹಿನ್ನೆಲೆಯಲ್ಲಿ ಕ್ರಮ
ಕೆಲವು ಸಚಿವರ ಬಗ್ಗೆ ದೂರುಗಳು ದಿಲ್ಲಿ ತಲುಪಿದ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಹೈಕಮಾಂಡ್ ಈಗ ಎಲ್ಲ ಸಚಿವರಿಗೆ ಸರಕಾರದ ಕಾರ್ಯವೈಖರಿ, ಜನಸಂಪರ್ಕ ಹೇಗಿರಬೇಕು ಎಂಬ ಬಗ್ಗೆ ಮಾರ್ಗದರ್ಶನ ನೀಡಲು ಮುಂದಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi case:ಬೆಳಗಾವಿ ಕೋರ್ಟ್ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ
Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ
ಭದ್ರಾವತಿಯ ರೈಸ್ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
Akhila Bharata Kannada Sahitya Sammelana: ಹಚ್ಚೇವು ಕನ್ನಡದ ದೀಪ
Sullia: ವಿಎಒ ಹೊಸ ಕಟ್ಟಡಕ್ಕೆ ಅನುದಾನವಿಲ್ಲ !
CT Ravi case:ಬೆಳಗಾವಿ ಕೋರ್ಟ್ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ
Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್ಲೆಸ್ ಅನಿಸಿತು…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.