ದೆಹಲಿ ಪ್ರವಾಸ ಯಶಸ್ವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Team Udayavani, Nov 12, 2021, 1:21 PM IST
ಬೆಂಗಳೂರು: ತಮ್ಮ ಎರಡು ದಿನಗಳ ದೆಹಲಿ ಪ್ರವಾಸ ಯಶಸ್ವಿಯಾಗಿದೆ. ವಿಶೇಷವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಂದಿಗಿನ ಭೇಟಿ, ಮುಂಬರುವ ದಿನಗಳಲ್ಲಿ ಇನ್ನಷ್ಟು ಜನಪರ ಕಾರ್ಯ ಕೈಗೊಳ್ಳುವ ವಿಶ್ವಾಸ ಮೂಡಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ಅವರು ತಮ್ಮ ಎರಡು ದಿನಗಳ ದೆಹಲಿ ಪ್ರವಾಸದಿಂದ ಹಿಂದಿರುಗಿದ ನಂತರ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ಪ್ರಧಾನಮಂತ್ರಿಯವರು ಕಳೆದ ನೂರು ದಿನಗಳಲ್ಲಿ ಕೈಗೊಂಡ ನಿರ್ಣಯಗಳು, ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಹಾಗೂ ಹಲವು ಯೋಜನೆಗಳ ಕುರಿತು ಸಂಪೂರ್ಣ ಮಾಹಿತಿ ಪಡೆದರು. ವಿಶೇಷವಾಗಿ ಕೆಟಿಪಿಪಿ ಕಾಯ್ದೆ ತಿದ್ದುಪಡಿ ಕುರಿತು ಮಾಹಿತಿಯನ್ನು ಇತರ ರಾಜ್ಯಗಳೊಂದಿಗೆ ಹಂಚಿಕೊಂಡು ಅನುಷ್ಠಾನಗೊಳಿಸಲು ಸಲಹೆ ನೀಡುವುದಾಗಿ ತಿಳಿಸಿದರು.
ಇದನ್ನೂ ಓದಿ: ಹತ್ಯೆಗೀಡಾದ ಉಗ್ರ ಶ್ರೀನಗರದಲ್ಲಿ ಆತ್ಮಾಹುತಿ ದಾಳಿಗೆ ಸಿದ್ದನಾಗಿದ್ದ!
ಒಡಿಶಾದಿಂದ ಕಲ್ಲಿದ್ದಲು
ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಕಲ್ಲಿದ್ದಲು ಕೊರತೆಯಾಗುವುದಿಲ್ಲ. ಕೇಂದ್ರ ಸರ್ಕಾರವು ಒಡಿಶಾದ ಮಂದಾಕಿನಿ ಗಣಿಯಿಂದ ಕಲ್ಲಿದ್ದಲು ಪಡೆಯಲು ಅನುಮತಿ ನೀಡಿದೆ. ಮಹಾರಾಷ್ಟ್ರದಿಂದಲೂ ಕಲ್ಲಿದ್ದಲು ದೊರೆಯಲಿದೆ ಎಂದು ತಿಳಿಸಿದರು.
ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಗೆ ಸಂಬಂಧಿಸಿದಂತೆ ಕೇಂದ್ರದಿಂದ ಸುಮಾರು 2100 ಕೋಟಿ ರೂ ಬಾಕಿ ಇರುವ ಕುರಿತು ಚರ್ಚಿಸಲಾಗಿದ್ದು ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು ಈ ಅನುದಾನ ಬಿಡುಗಡೆ ಮಾಡಲು ಕ್ರಮ ವಹಿಸುವುದಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gangolli: ಬೈಕ್‌ಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ
Udupi: ಪಿಕಪ್ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.