ದೆಹಲಿಯಲ್ಲಿ 72 ವರ್ಷಗಳಲ್ಲಿಯೇ ಗರಿಷ್ಠ ತಾಪಮಾನ ದಾಖಲು
Team Udayavani, Apr 10, 2022, 12:19 PM IST
ನವದೆಹಲಿ: ರಾಷ್ಟ್ರ ರಾಜಧಾನಿ ಮತ್ತು ಅಕ್ಕಪಕ್ಕದ ಪ್ರದೇಶಗಳಲ್ಲಿ ಬಿರು ಬೇಸಗೆಯ ಬಿಸಿಯ ಅಲೆ ಮತ್ತಷ್ಟು ತೀವ್ರಗೊಂಡಿದ್ದು, ಏಪ್ರಿಲ್ 9 ರಂದು ಗರಿಷ್ಠ ತಾಪಮಾನ 42.4 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆಯಾಗಿದೆ.
ಇದು ದೆಹಲಿಯಲ್ಲಿ 1950 ರ ಬಳಿಕ ಏಪ್ರಿಲ್‌ನಲ್ಲಿ ದಾಖಲಾದ ಗರಿಷ್ಠ ತಾಪಮಾನವಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) 72 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಏಪ್ರಿಲ್ ಮೊದಲಾರ್ಧದಲ್ಲಿ ದೆಹಲಿಯಲ್ಲಿ ಇಷ್ಟು ಹೆಚ್ಚಿನ ತಾಪಮಾನ ದಾಖಲಾಗಿದೆ ಎಂದು ಹೇಳಿದೆ.
ಶನಿವಾರದ ಗರಿಷ್ಠ ತಾಪಮಾನವು ವರ್ಷದ ಈ ಸಮಯದಲ್ಲಿ ಸಾಮಾನ್ಯಕ್ಕಿಂತ ಎಂಟು ಡಿಗ್ರಿಗಳಷ್ಟು ಹೆಚ್ಚಾಗಿದೆ. , ಹವಾಮಾನ ಇಲಾಖೆಯು ಭಾನುವಾರದಂದು ರಾಷ್ಟ್ರ ರಾಜಧಾನಿಗೆ ಆರೆಂಜ್ ಅಲರ್ಟ್ ನೀಡಿದೆ ಮತ್ತು ತೀವ್ರತರವಾದ ಶಾಖದ ಪರಿಸ್ಥಿತಿಗಳು ಈ ಪ್ರದೇಶದಲ್ಲಿ ಮುಂದುವರಿಯುವ ನಿರೀಕ್ಷೆಯಿದೆ ಎಂದು ಎಚ್ಚರಿಕೆ ನೀಡಿದೆ.
ಬಿಸಿಗಾಳಿ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಐಎಮ್‌ಡಿ ಅಧಿಕಾರಿಗಳು ಸುದೀರ್ಘ ಶುಷ್ಕ ವಾಯುವ್ಯ ಭಾರತದಲ್ಲಿ ತೀವ್ರ ಬಿಸಿ ವಾತಾವರಣಕ್ಕೆ ಕಾರಣವಾಗಿದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
BBK11: ಕ್ಯಾಪ್ಟನ್ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.