ವಿದ್ಯುತ್ ದರ ಹೆಚ್ಚಳ ವಾಪಸಾತಿಗೆ ಆಗ್ರಹ: ಉತ್ತರ ಕರ್ನಾಟಕ ಬಂದ್ ಯಶಸ್ವಿ
ಅಂಗಡಿ-ಮುಂಗಟ್ಟು ಮುಚ್ಚಿ ಆಕ್ರೋಶ
Team Udayavani, Jun 23, 2023, 7:03 AM IST
ಹುಬ್ಬಳ್ಳಿ: ವಿದ್ಯುತ್ ದರ ಏರಿಕೆ ಖಂಡಿಸಿ ರಾಜ್ಯದ ಮುಕ್ಕಾಲು ಭಾಗದ ವ್ಯಾಪಾರ-ವಹಿವಾಟು ಗುರುವಾರ ಅಕ್ಷರಶಃ ಸ್ತಬ್ಧವಾಗಿತ್ತು. ಉತ್ತರ ಕರ್ನಾಟಕ, ಮಧ್ಯ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದ ವಿವಿಧ ವ್ಯಾಪಾರೋದ್ಯಮಿಗಳು ತಮ್ಮ ವ್ಯಾಪಾರ -ವಹಿವಾಟು ಮುಚ್ಚಿ “ಕರ್ನಾಟಕ ಬಂದ್’ ಆಚರಿಸಿದರು. ಏಕಾಏಕಿ ನೀಡಿದ ವಿದ್ಯುತ್ ದರ ಏರಿಕೆಯ ಆಘಾತದಿಂದ ಎದುರಾಗಿರುವ ಸಂಕಷ್ಟಕ್ಕೆ ಪರಿಹಾರ ನೀಡುವಂತೆ ಒಕ್ಕೊರಲಿನಿಂದ ಆಗ್ರಹಿಸಿದರು.
ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಹಾವೇರಿ, ಕೊಪ್ಪಳ, ಉತ್ತರ ಕನ್ನಡ, ಗದಗ, ವಿಜಯಪುರ, ಬಳ್ಳಾರಿ, ಬೀದರ್, ಕಲಬುರಗಿ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ವಿವಿಧ ವರ್ತಕರು, ವ್ಯಾಪಾರಿಗಳು ಅಂಗಡಿ- ಮುಂಗಟ್ಟುಗಳನ್ನು ಬಂದ್ ಮಾಡಿ ಬೀದಿಗಿಳಿದು ಕಾಂಗ್ರೆಸ್ ಸರಕಾರದ ವಿರುದ್ಧ ಘೋಷಣೆ ಕೂಗಿದರು. ಕೋವಿಡ್‌ನಂಥ ಕ್ಲಿಷ್ಟಕರ ಪರಿಸ್ಥಿತಿಯಿಂದ ಈಗಷ್ಟೇ ಚೇತರಿಸಿಕೊಳ್ಳುತ್ತಿದ್ದೇವೆ. ವಿದ್ಯುತ್ ದರ ಏರಿಕೆಯಿಂದ ಮತ್ತೆ ಬರೆ ಎಳೆಯಲಾಗುತ್ತಿದೆ. ಇದರಿಂದ ಕೈಗಾರಿಕೆಗಳು, ಅಂಗಡಿ-ಮುಂಗಟ್ಟು ಗಳನ್ನು ನಡೆಸುವುದೇ ಕಷ್ಟವಾಗಿದೆ. ತತ್‌ಕ್ಷಣವೇ ದರ ಏರಿಕೆಯನ್ನು ವಾಪಸ್ ಪಡೆಯುವಂತೆ ಆಗ್ರಹಿಸಿದರು.
ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು. ಕಂಪ್ಲಿಯಲ್ಲಿ ಮಾನವ ಸರಪಳಿ ನಿರ್ಮಿಸಿದರೆ, ಸಿರಗುಪ್ಪದಲ್ಲಿ ಅಕ್ಕಿ ಗಿರಣಿ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಲಾಗಿದೆ.
ಕರಾವಳಿಯಲ್ಲಿಲ್ಲ
ಮಂಗಳೂರು/ ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಉದ್ದಿಮೆಗಳು ಬಂದ್ ಆಚ ರಿಸಲಿಲ್ಲ. ಆದರೆ ಹೆಚ್ಚು ಮಾಡಿರುವ ವಿದ್ಯುತ್ ದರವನ್ನು ಇಳಿಸುವಂತೆ ಕೈಗಾರಿಕಾ ಮುಖಂಡರು ದ.ಕ. ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ವಿದ್ಯುತ್ ದರ ಹೆಚ್ಚಳ ಖಂಡಿಸಿ ಉಡುಪಿ ಚೇಂಬರ್ ಆಫ್ ಕಾಮರ್ಸ್ ವತಿಯಿಂದ ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸ ಲಾಗಿದ್ದು, ಈ ಕಾರಣಕ್ಕೆ ಬುಧವಾರ ಪ್ರತಿಭಟನೆ ನಡೆಸಿಲ್ಲ ಎಂದು ಅಧ್ಯಕ್ಷ ಅಂಡಾರು ದೇವಿಪ್ರಸಾದ್ ಶೆಟ್ಟಿ ತಿಳಿಸಿದ್ದಾರೆ.
ಇಂದು ಸಿಎಂ ಸಭೆ
ಬೆಂಗಳೂರು: ಕೈಗಾರಿಕೋದ್ಯಮಿ ಗಳು ನಡೆಸುತ್ತಿರುವ ಪ್ರತಿಭಟನೆ ರಾಜ್ಯ ಸರಕಾರಕ್ಕೆ ಬಿಸಿತುಪ್ಪವಾಗಿ ಪರಿಣಮಿಸಿದ್ದು, ಕೈಗಾರಿಕೋದ್ಯಮಿ ಗಳ ಜತೆ ಸಿಎಂ ಸಿದ್ದರಾಮಯ್ಯ ಶುಕ್ರವಾರ ಮಹತ್ವದ ಸಭೆ ನಡೆಸ ಲಿದ್ಧಾರೆ. ವಿಧಾನಸೌಧದಲ್ಲಿ ಮಾತ ನಾಡಿದ ಸಣ್ಣ ಕೈಗಾರಿಕೆ ಸಚಿವ ಶರಣ ಬಸಪ್ಪ ದರ್ಶನಾಪುರ, ರಾಜ್ಯದ ಕೆಲವೆಡೆ ಸಣ್ಣ ಕೈಗಾರಿಕೆಗಳ ಸಂಘಗಳು ಪ್ರತಿಭಟನೆ ಮಾಡು ತ್ತಿವೆ. ದರ ಪರಿಷ್ಕರಣೆ ನಿರ್ಧಾರ ಸರಕಾರದ್ದಲ್ಲ. ಕೆಇಆರ್‌ಸಿ ವಿದ್ಯುತ್ ದರ ಹೆಚ್ಚಳ ಮಾಡಿದೆ. ಈ ಸಂಬಂಧ ಸಿಎಂ ಜತೆ ಶುಕ್ರವಾರ ಸಭೆ ಕರೆಯಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.