South Korea: ಅಧ್ಯಕ್ಷ ಯೂನ್ ರನ್ನು ಕೂಡಲೇ ಬಂಧಿಸಿ: ಪೊಲೀಸರಿಗೆ ದಕ್ಷಿಣ ಕೊರಿಯಾ!
ಯೂನ್ ವಿರುದ್ಧ ಪೊಲೀಸರು, ರಕ್ಷಣಾ ಸಚಿವಾಲಯ ಸೇರಿ ತನಿಖೆ ನಡೆಸುತ್ತಿತ್ತು
Team Udayavani, Jan 6, 2025, 2:26 PM IST
ದಕ್ಷಿಣ ಕೊರಿಯಾ: ವಾಗ್ದಂಡನೆಗೆ ಗುರಿಯಾಗಿರುವ ದಕ್ಷಿಣ ಕೊರಿಯಾದ ಅಧ್ಯಕ್ಷ ಯೂನ್ ಸುಕ್ ಯೋಲ್ ಅವರನ್ನು ಬಂಧಿಸಲು ಪೊಲೀಸರು ನೆರವಾಗಬೇಕೆಂದು ದಕ್ಷಿಣ ಕೊರಿಯಾದ ಭ್ರಷ್ಟಾಚಾರ ನಿಗ್ರಹ ಪಡೆ ಸೂಚನೆ ನೀಡಿರುವುದಾಗಿ ವರದಿ ತಿಳಿಸಿದೆ.
ಯೂನ್ ಅವರ ಬಂಧನಕ್ಕೆ ಹೊರಡಿಸಿರುವ ವಾರಂಟ್ ಅವಧಿ ಸೋಮವಾರ ಸಂಜೆ ಮುಕ್ತಾಯಗೊಳ್ಳಲಿರುವ ಹಿನ್ನೆಲೆಯಲ್ಲಿ, ಅಧ್ಯಕ್ಷ ಯೂನ್ ಅವರನ್ನು ಬಂಧಿಸಲು ಸಹಕರಿಸುವಂತೆ ಭ್ರಷ್ಟಾಚಾರ ನಿಗ್ರಹ ಉನ್ನತ ತನಿಖಾಧಿಕಾರಿ ಪತ್ರ ಮುಖೇನ ಭಾನುವಾರ ಮನವಿ ಮಾಡಿಕೊಂಡಿರುವುದಾಗಿ ವರದಿ ವಿವರಿಸಿದೆ.
ಅಧ್ಯಕ್ಷರ ನಿವಾಸದಲ್ಲಿ ಅಧ್ಯಕ್ಷ ಯೂನ್ ಭದ್ರತಾ ಸಿಬಂದಿಗಳು ಮತ್ತು ಭ್ರಷ್ಟಾಚಾರ ನಿಗ್ರಹ ಅಧಿಕಾರಿಗಳ ನಡುವೆ ಸಂಘರ್ಷ ನಡೆದ ನಂತರ ಕಳೆದ ಶುಕ್ರವಾರ ಬಂಧನ ವಾರಂಟ್ ಜಾರಿಗೊಳಿಸಲು ತಡೆ ನೀಡಿತ್ತು.
ದಕ್ಷಿಣ ಕೊರಿಯಾದಲ್ಲಿ ಡಿಸೆಂಬರ್ 3ರಂದು ದಿಢೀರನೆ ಮಿಲಿಟರಿ ಆಡಳಿತ ಜಾರಿಗೊಳಿಸಿದ್ದ ಯೂನ್ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿದ್ದ ನಂತರ ಭ್ರಷ್ಟಾಚಾರ ನಿಗ್ರಹ ಪಡೆ ಮತ್ತು, ಪೊಲೀಸರು, ರಕ್ಷಣಾ ಸಚಿವಾಲಯ ಸೇರಿ ತನಿಖೆ ನಡೆಸುತ್ತಿತ್ತು ಎಂದು ವರದಿ ತಿಳಿಸಿದೆ.
ಯೂನ್ಸ್ ವಿರುದ್ಧ ಹೊರಡಿಸಿದ್ದ ವಾರಂಟ್ ಕಾನೂನು ಬಾಹಿರ ಮತ್ತು ಅಸಿಂಧು ಎಂದು ಯೂನ್ಸ್ ಅವರ ಕಾನೂನು ತಜ್ಞರ ತಂಡ ತಿಳಿಸಿದೆ. ದೇಶದಲ್ಲಿ ಮಿಲಿಟರಿ ಆಡಳಿತ ಘೋಷಿಸಿದ್ದ ಯೂನ್ಸ್ ವಿರುದ್ಧ ತನಿಖೆ ನಡೆಸುವ ಅಧಿಕಾರ ಭ್ರಷ್ಟಾಚಾರ ನಿಗ್ರಹ ಪಡೆಗಿಲ್ಲ ಎಂದು ತಿರುಗೇಟು ನೀಡಿದೆ.
“ತನ್ನನ್ನು ಬಂಧಿಸಲು ಹಾಗೂ ಅಧ್ಯಕ್ಷರ ನಿವಾಸವನ್ನು ಶೋಧಿಸಲು ಹೊರಡಿಸಿರುವ ವಾರಂಟ್ ಗೆ ನಿರ್ಬಂಧ ಹೇರಬೇಕೆಂದು ಕೋರಿ ಯೂನ್ ಭಾನುವಾರ ಸಿಯೋಲ್ ಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿತ್ತು”.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ
ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 95ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ
Updated: ಕೆನಡಾ ಮುಂದಿನ ಪ್ರಧಾನಿ ರೇಸ್ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!
Facing Dissent: ಕೆನಡಾ ಪ್ರಧಾನಿ ಹುದ್ದೆಗೆ ಟ್ರುಡೋ ರಾಜೀನಾಮೆ
ಬ್ರಹ್ಮಪುತ್ರ ಅಣೆಕಟ್ಟಿಂದ ಭಾರತಕ್ಕೆ ಧಕ್ಕೆ ಆಗದು: ಚೀನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Waqf Report: ಅಮಿತ್ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್ ರಿಜಿಜು ಮೂಲಕ ಸಲ್ಲಿಕೆ
Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ
ಮಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ
Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ
Train; ಗೋಮಟೇಶ್ವರ ಎಕ್ಸ್ಪ್ರೆಸ್ ಮಂಗಳೂರು ಸೆಂಟ್ರಲ್ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.