ಜಿಲ್ಲೆಯ ಸೋಮೇಶ್ವರ, ಸುರತ್ಕಲ್ ಬೀಚ್ ಅಭಿವೃದ್ಧಿ
ದ. ಕ.: ಅಕ್ಟೋಬರ್ 1ರಿಂದ ಕಾಮಗಾರಿ ಆರಂಭ
Team Udayavani, Jun 26, 2020, 6:18 AM IST
ವಿಶೇಷ ವರದಿ- ಮಹಾನಗರ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಕ್ಷೇತ್ರವನ್ನು ಮತ್ತಷ್ಟು ಉತ್ತೇಜಿಸುವ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆ ಮುಂದಾ ಗಿದ್ದು, ಮುಂದಿನ ದಿನಗಳಲ್ಲಿ ಉಳ್ಳಾಲದ ಸೋಮೇಶ್ವರ ಮತ್ತು ಸುರತ್ಕಲ್ ಬೀಚ್ ಮತ್ತಷ್ಟು ಅಭಿವೃದ್ಧಿಯಾಗಲಿವೆ.
ಕೋವಿಡ್ 19 ಹಾವಳಿಯ ನೇರ ಪರಿಣಾಮ ಪ್ರವಾಸೋದ್ಯಮ ಕ್ಷೇತ್ರ ದತ್ತ ಬೀರಿದೆ. ಈ ನಿಟ್ಟಿನಲ್ಲಿ ಕಳೆದ ಕೆಲ ತಿಂಗಳಿ ನಿಂದ ಜಿಲ್ಲೆಯ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಯಾವುದೇ ಚಟುವಟಿಕೆ ನಡೆಯ ಲಿಲ್ಲ. ಮುಂದಿನ ದಿನಗಳಲ್ಲಿ ಈ ಕ್ಷೇತ್ರ ವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸಾರ್ವ ಜನಿಕ ಮತ್ತು ಖಾಸಗಿ ಸಹ ಭಾಗಿತ್ವ (ಪಿಪಿಪಿ) ಮಾದರಿಯಲ್ಲಿ ಜಿಲ್ಲೆಯ ಎರಡು ಬೀಚ್‌ಗಳ ಅಭಿವೃದ್ಧಿ ಮಾಡಲು ಪ್ರವಾಸೋದ್ಯಮ ಇಲಾಖೆ ಮುಂದಾಗಿದೆ.
ಕರಾವಳಿಯಲ್ಲಿ ಇದೀಗ ಮಳೆಗಾಲ ಆರಂಭವಾಗಿದ್ದು, ಈ ವೇಳೆ ಸಾಮಾನ್ಯ ವಾಗಿ ಪ್ರವಾಸಿಗರ ಸಂಖ್ಯೆ ಕಡಿಮೆ ಇರುತ್ತದೆ. ಈ ನಿಟ್ಟಿನಲ್ಲಿ ಅಕ್ಟೋಬರ್ 1ರಿಂದ ಬೀಚ್ ಅಭಿವೃದ್ಧಿ ಕಾರ್ಯ ಆರಂಭ ವಾಗಲಿದೆ. ಪ್ರವಾಸಿಗರಿಗೆ ಅಗತ್ಯ ಸೌಕ ರ್ಯ ವಾದ ಬೀಚ್‌ಗಳಲ್ಲಿ ಸೂಚನಾ ಫಲಕ, ಲೈಫ್‌ಗಾರ್ಡ್ ನೇಮಕ, ನೀರಿನ ಕ್ರೀಡೆಗಳಿಗೆ ಆದ್ಯತೆ ನೀಡಲಾಗುತ್ತದೆ. ಉಳಿ ದಂತೆ ಯಾವೆಲ್ಲ ರೀತಿಯ ಅಭಿ ವೃದ್ಧಿ ಕಾರ್ಯ ನಡೆಸಬಹುದು ಎಂಬ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ.
ಪ್ರವಾಸಿಗರಿಗೆ ಜಿಲ್ಲಾ ಕೈಪಿಡಿ
ದಕ್ಷಿಣ ಕನ್ನಡ ಜಿಲ್ಲೆಗೆ ಹೊರ ಜಿಲ್ಲೆ, ರಾಜ್ಯ ಸೇರಿದಂತೆ ವಿದೇಶದಿಂದ ಪ್ರವಾಸಿ ಗರು ಆಗಮಿಸುತ್ತಾರೆ. ಈ ವೇಳೆ ಪ್ರವಾಸಿಗರಿಗೆ ಜಿಲ್ಲೆಯ ಸಮಗ್ರ ಮಾಹಿತಿ ನೀಡುವ ನಿಟ್ಟಿನಲ್ಲಿ ಕೈಪಿಡಿ ಮಾಡಲು ಪ್ರವಾಸೋದ್ಯಮ ಇಲಾಖೆ ಮುಂದಾ ಗಿದೆ. ಪ್ರವಾಸಿ ತಾಣಗಳ ಫೋಟೊ ಮತ್ತು ವಿಡಿಯೋ ಚಿತ್ರೀಕರಣಕ್ಕೆ ಈಗಾಗಲೇ ಟೆಂಡರ್ ಕರೆಯಲಾಗಿದೆ. ಈ ಕೈಪಿಡಿ ಯಲ್ಲಿ ಜಿಲ್ಲೆಯ 50 ಪ್ರವಾಸಿ ತಾಣ ಗಳ ಮಾಹಿತಿ, ಫೋಟೊ ಇರಲಿದೆ. ಅಲ್ಲದೆ, ಕರಾವಳಿಯ ಸಂಸ್ಕೃತಿ, ಹಬ್ಬಗಳು ಸೇರಿದಂತೆ ಪ್ರಮುಖ ವಿಷಯಗಳನ್ನು ಒಳಗೊಂಡಿರಲಿದೆ.
ಈ ಕೈಪಿಡಿಯನ್ನು ಪ್ರಮುಖವಾಗಿ ಎನ್‌ಎಂಪಿಟಿ, ಬಸ್ ನಿಲ್ದಾಣ, ರೈಲ್ವೇ ನಿಲ್ದಾಣ, ವಿಮಾನ ನಿಲ್ದಾಣಗಳಲ್ಲಿ ಪ್ರವಾಸಿಗರಿಗೆ ಮತ್ತು ಸಾರ್ವಜನಿಕರಿಗೆ ನೀಡಲು ಪ್ರವಾಸೋದ್ಯಮ ಇಲಾಖೆ ಮುಂದಾಗಿದೆ. ಮುಂದಿನ ದಿನಗಳಲ್ಲಿ ಮೊಬೈಲ್ ಆ್ಯಪ್ ನಿರ್ಮಾಣದ ಮುಖೇನ ಪ್ರವಾಸಿಗರಿಗೆ ಮತ್ತಷ್ಟು ಹತ್ತಿರವಾಗಲು ಮುಂದಾಗಿದೆ.
ಸ್ಕೂಬಾ ಡೈವ್ ಆರಂಭಕ್ಕೆ ಉತ್ಸುಕ
ಪ್ರವಾಸಿಗರನ್ನು ಮತ್ತಷ್ಟು ಸೆಳೆಯುವ ಉದ್ದೇಶದಿಂದ ದ.ಕ. ಜಿಲ್ಲೆಗೆ ಸ್ಕೂಬಾ ಡೈವ್ ಪರಿಚಯಿಸಲು ಪ್ರವಾಸೋದ್ಯಮ ಇಲಾಖೆ ಮುಂದಾಗಿದೆ. ಈ ನಿಟ್ಟಿನಲ್ಲಿ ಉಳ್ಳಾಲದ ಸೋಮೇಶ್ವರ ಬೀಚ್ ಅಥವಾ ಪಣಂಬೂರು ಬೀಚ್‌ನಲ್ಲಿ ಸ್ಕೂಬಾ ಡೈವ್ ಆರಂಭಿಸಲು ಚಿಂತಿಸಲಾಗಿದೆ. ಈ ಬಗ್ಗೆ ಈಗಾಗಲೇ ಖಾಸಗಿ ಸಂಸ್ಥೆಯೊಂದು ಮುಂದೆ ಬಂದಿದ್ದು, ಮುಂದಿನ ದಿನಗಳಲ್ಲಿ ಟೆಂಡರ್ ಪ್ರಕ್ರಿಯೆ ಆರಂಭವಾಗಲಿದೆ ಎಂದು ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಬೀಚ್ ಅಭಿವೃದ್ಧಿ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಕ್ಷೇತ್ರಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಇಲಾಖೆ ಮುಂದಾಗಿದೆ. ಈ ನಿಟ್ಟಿನಲ್ಲಿ ಪಿಪಿಪಿ ಮಾದರಿಯಲ್ಲಿ ಜಿಲ್ಲೆಯ ಎರಡು ಬೀಚ್‌ಗಳ ಅಭಿವೃದ್ಧಿಯಾಗಲಿವೆ. ಹೊರ ರಾಜ್ಯ, ವಿದೇಶಿಗರಿಗೆ ದ.ಕ. ಜಿಲ್ಲೆಯ ಪ್ರವಾಸಿ ತಾಣಗಳು, ಇಲ್ಲಿನ ಸಂಸ್ಕೃತಿಯ ಬಗ್ಗೆ ಮಾಹಿತಿ ನೀಡುವ ನಿಟ್ಟಿನಲ್ಲಿ ಕೈಪಿಡಿ ಹೊರತರಲಾಗುತ್ತದೆ.
- ಸುಧೀರ್ ಗೌಡ, ದ.ಕ. ಜಿಲ್ಲಾ ಪ್ರವಾಸೋದ್ಯಮ ಸಮಾಲೋಚಕರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Commonwealth ಸಂಸದೀಯ ಸಭೆ; ಸ್ಪೀಕರ್ ಯು.ಟಿ. ಖಾದರ್ ಭಾಗಿ
Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ
Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ
Mangaluru: ಪಿಲಿಕುಳ ಮೃಗಾಲಯಕ್ಕೆ “ಏಷ್ಯಾಟಿಕ್ ಗಂಡು ಸಿಂಹ’ ಆಗಮನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.