ವಿಚಾರಣೆಗೆ ಹಾಜರಾಗುವಂತೆ ದಿನೇಶ್ ಕಲ್ಲಹಳ್ಳಿಗೆ ನೋಟಿಸ್
Team Udayavani, Mar 3, 2021, 10:41 PM IST
ಬೆಂಗಳೂರು: ರಮೇಶ್ ಜಾರಕಿಹೊಳಿಗೆ ಸಂಬಂಧಿಸಿದ ಅಶ್ಲೀಲ ವೀಡಿಯೋ ಸಂಬಂಧ ಕಬ್ಬನ್ ಪಾರ್ಕ್ ಪೊಲೀಸರು ದೂರುದಾರ ದಿನೇಶ್ ಕಲ್ಲಹಳ್ಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದು, ಗುರುವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಠಾಣೆಗೆ ಬರುವಂತೆ ಸೂಚಿಸಲಾಗಿದೆ.
ಮಂಗಳವಾರ ನೀಡಿದ ದೂರಿನಲ್ಲಿ ದಿನೇಶ್ ಕಲ್ಲಹಳ್ಳಿ ಪೂರ್ಣವಾಗಿ ಮಾಹಿತಿ ನೀಡಿಲ್ಲ. ಸಂತ್ರಸ್ತೆ ಬಗ್ಗೆಯಾಗಲಿ, ಆಕೆಯ ಕುಟುಂಬ ಸದಸ್ಯರ ಬಗ್ಗೆಯಾಗಲಿ ಅಥವಾ ಕೃತ್ಯ ಎಲ್ಲೆಲ್ಲಿ ನಡೆದಿದೆ ಎಂಬ ಕುರಿತು ಉಲ್ಲೇಖೀಸಿಲ್ಲ. ಮತ್ತೂಂದೆಡೆ ವಿಚಾರಣೆ ಸಂದರ್ಭದಲ್ಲೂ ಪೂರ್ಣಮಾಹಿತಿ ನೀಡಲಿಲ್ಲ. ಈ ಹಿನ್ನೆಲೆ ಪೂರ್ಣ ಮಾಹಿತಿ ನೀಡುವಂತೆ ಸೂಚಿಸಲಾಗಿತ್ತು.
ರಷ್ಯಾದಲ್ಲಿ ಅಪ್‌ಲೋಡ್?
ವೀಡಿಯೋದ 10 ನಿಮಿಷದ ತುಣುಕು ಮಂಗಳವಾರ ಮಧ್ಯಾಹ್ನ 2.30ರ ಸುಮಾರಿಗೆ ಯುಟ್ಯೂಬ್ ಚಾನೆಲ್ನಲ್ಲಿ ಅಪ್ ಲೋಡ್ ಆಗಿದೆ. ದಿನೇಶ್ ಕಲ್ಲಹಳ್ಳಿ ದೂರಿನ ಮೇರೆಗೆ ಸೈಬರ್ ಕ್ರೈಂ ಪೊಲೀಸರ ಜತೆ ತಾಂತ್ರಿಕ ತನಿಖೆ ನಡೆಸಿದಾಗ ಈ ಮಾಹಿತಿ ಬಹಿರಂಗವಾಗಿದೆ. ಆದರೆ, ಈ ಯುಟ್ಯೂಬ್‌ನ ಐಪಿ ವಿಳಾಸ ಪತ್ತೆ ಹಚ್ಚಿದಾಗ ಅದು ರಷ್ಯಾದಲ್ಲಿ ತೋರಿಸುತ್ತಿದೆ. ಇದೊಂದು ಪೂರ್ವ ನಿಯೋಜಿತ ಕೃತ್ಯ, ತಾಂತ್ರಿಕವಾಗಿ ಹೆಚ್ಚಿನ ಜ್ಞಾನ ಹೊಂದಿರುವ ವ್ಯಕ್ತಿಗಳೇ ಪ್ರಭಾವಿಗಳ ಜತೆ ಸೇರಿ ಈ ಕೃತ್ಯ ಎಸಗಿದ್ದಾರೆ. ಆದರೆ, ಯಾವ ಖಾತೆಯಿಂದ ಯಾರು ಅಪ್‌ಲೋಡ್ ಮಾಡಿದ್ದಾರೆ ಎಂಬುದು ಪತ್ತೆಯಾಗಿಲ್ಲ. ನಕಲಿ ಖಾತೆ ಸೃಷ್ಟಿಸಿಯೂ ಕೃತ್ಯ ಎಸಗಿರುವ ಸಾಧ್ಯತೆಗಳಿವೆ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ :ರಾಜಕೀಯ ನಿವೃತ್ತಿ ಘೋಷಿಸಿದ ಶಶಿಕಲಾ ನಟರಾಜನ್ : ತಮಿಳುನಾಡು ರಾಜಕೀಯದಲ್ಲಿ ಬಿಗ್ ಟ್ವಿಸ್ಟ್
ದಿನೇಶ್ ಕಲ್ಲಹಳ್ಳಿ ವಿರುದ್ಧ ದೂರು
ಕರ್ನಾಟಕ ಕನ್ನಡ ಪರ ಸಂಘಟನೆಗಳ ಒಕ್ಕೂಟ ಅಧ್ಯಕ್ಷ ಎನ್.ಪುಟ್ಟೇಗೌಡ ಬುಧವಾರ ದೂರುದಾರ ದಿನೇಶ್ ಕಲ್ಲಹಳ್ಳಿ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ರಮೇಶ್ ಜಾರಕಿಹೊಳಿ ಅವರಿಗೆ ಸಂಬಂಧಿಸಿದ ಅಶ್ಲೀಲ ವಿಡಿಯೋವನ್ನು ಸಾರ್ವಜನಿಕವಾಗಿ ಬಹಿರಂಗ ಪಡಿಸಿದ ದಿನೇಶ್ ವಿರುದ್ಧ ಕ್ರಮಕೈಗೊಳ್ಳಬೇಕು. ಸಂತ್ರಸ್ತೆಯೇ ಸಂಪೂರ್ಣವಾಗಿ ಸಮ್ಮತಿಯಿಂದಲೇ ವೀಡಿಯೋ ಕಾಲ್ ಮಾಡಿದ್ದಾರೆ ಮತ್ತು ಲೈಂಗಿಕ ಕ್ರಿಯೆ ನಡೆಸಿದ್ದಾರೆ. ಆದ್ದರಿಂದ ವೀಡಿಯೋ ಚಿತ್ರೀಕರಿಸಿದ ವ್ಯಕ್ತಿಗಳು ಮತ್ತು ದಿನೇಶ್ ಕಲ್ಲಹಳ್ಳಿ ವಿರುದ್ಧ ಕ್ರಮ ಕೈಗೊಳ್ಳೂಬೇಕು ಎಂದು ಆಗ್ರಹಿಸಿದ್ದಾರೆ.
ಇನ್ನೂ ಎಫ್ಐಆರ್ ಆಗಿಲ್ಲ
ರಮೇಶ್ ಜಾರಕಿಹೊಳಿ ಕುರಿತು ದೂರು ನೀಡಿ 24 ಗಂಟೆ ಕಳೆದರೂ ಇದುವರೆಗೂ ಎಫ್ಐಆರ್ ದಾಖಲಿಸಿಲ್ಲ. ಈ ಬಗ್ಗೆ ಪ್ರತಿಕ್ರಿಯಿಸಿದ ಹಿರಿಯ ಅಧಿಕಾರಿಗಳು, ದೂರುದಾರ ದಿನೇಶ್ ಕಲ್ಲಹಳ್ಳಿ ನೀಡಿದ ದೂರಿನಲ್ಲಿ ಅಸ್ಪಷ್ಟ ಮಾಹಿತಿಗಳಿವೆ. ಹೀಗಾಗಿ ಎಫ್ಐಆರ್ ದಾಖಲಿಸಿಲ್ಲ. ಗುರುವಾರ ದಿನೇಶ್ ನೀಡುವ ಮಾಹಿತಿಗಳನ್ನು ಆಧರಿಸಿ ಮುಂದಿನ ಕ್ರಮಕೈಗೊಳ್ಳಲಾಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.