ದೀಪಾವಳಿಗೆ ಹಸುರು ಸಂಭ್ರಮ! ಸಾದಾ ಪಟಾಕಿ ಮಾರಾಟ, ಸ್ಫೋಟಕ್ಕೆ ನಿಷೇಧ
Team Udayavani, Nov 8, 2020, 6:10 AM IST
ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ದೀಪಾವಳಿಗೆ ಹಸುರು ಪಟಾಕಿ ಮಾರಲು ಅವಕಾಶ ಮಾಡಿಕೊಡಲಾಗಿದೆ. ಉಳಿದಂತೆ ಎಲ್ಲ ರೀತಿಯ ಪಟಾಕಿ ಮಾರಾಟ ಮತ್ತು ಸಿಡಿಸುವುದನ್ನು ನಿಷೇಧಿಸಿ ರಾಜ್ಯ ಸರಕಾರವು ಆದೇಶ ಹೊರಡಿಸಿದೆ.
ಸುಪ್ರೀಂ ಕೋರ್ಟ್‌ನ ನಿರ್ದೇಶನ ದಂತೆ ಈ ಕ್ರಮ ತೆಗೆದುಕೊಳ್ಳಲಾಗಿದೆ.
ನ. 16ರ ವರೆಗೆ ಮಾತ್ರ ಹಸುರು ಪಟಾಕಿ ಮಾರಾಟ ಮಳಿಗೆಗಳನ್ನು ತೆರೆಯಲು ಅವಕಾಶ ನೀಡಲಾಗಿದೆ.
ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್ ಮಾರ್ಗಸೂಚಿಯಲ್ಲಿ ಸೂಚಿಸಿದ್ದಾರೆ.
ಸಂಬಂಧಪಟ್ಟ ಇಲಾಖೆ/ ಪ್ರಾಧಿಕಾರಗಳಿಂದ ಅಧಿಕೃತ ಪರ ವಾನಿಗೆ ಪಡೆದು ನಿಗದಿಪಡಿಸಿರುವ ದಿನಾಂಕ ಮತ್ತು ಸ್ಥಳದಲ್ಲಷ್ಟೇ ತಾತ್ಕಾಲಿಕ ಮಳಿಗೆ ತೆರೆದು ಹಸುರು ಪಟಾಕಿ ಮಾರಾಟ ಮಾಡಬೇಕು ಎಂದು ಸೂಚಿಸಲಾಗಿದೆ.
ಏನಿದು ಹಸುರು ಪಟಾಕಿ?
ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನ ಮಂಡಳಿ (ಸಿಎಸ್ಐಆರ್) ಹಾಗೂ ಎನ್‌ಇಇಆರ್‌ಐಯ ವಿಜ್ಞಾನಿಗಳು ಅಭಿವೃದ್ಧಿಪಡಿಸಿರುವ ಈ ಪಟಾಕಿಗಳಲ್ಲಿ ಲಿಥಿಯಂ, ಆರ್ಸೆನಿಕ್, ಬೇರಿಯಂ ಮತ್ತು ಸತುವಿನಂಥ ಅಪಾಯಕಾರಿ ರಾಸಾಯನಿಕಗಳು ಇರುವುದಿಲ್ಲ.
ಹಸುರು ಪಟಾಕಿಗಳು ಸ್ಫೋಟಗೊಂಡಾಗ ಹೆಚ್ಚು ಹೊಗೆ ಬಿಡುಗಡೆ ಮಾಡುವ ಬದಲು ನೀರಿನ ಆವಿಯನ್ನು ಮಾತ್ರ ಬಿಡುಗಡೆ ಮಾಡುತ್ತವೆ. ಈ ಆವಿಯು ಧೂಳು ಮೇಲೇಳದಂತೆ ತಡೆಯುತ್ತದೆ. ಅಲ್ಲದೆ ಇವು ಸಾಮಾನ್ಯ ಪಟಾಕಿಗಳಿಗಿಂತ ಶೇ. 30ಕ್ಕೂ ಕಡಿಮೆ ಮಾಲಿನ್ಯಕಾರಕಗಳನ್ನು ಹೊರಸೂಸುತ್ತವೆ. ಸಾಮಾನ್ಯ ಪಟಾಕಿಗಳಿಗಿಂತ ಕಡಿಮೆ ಸದ್ದು ಹೊರಡಿಸುತ್ತವೆ.
ದೇಶದ 230 ಪಟಾಕಿ ತಯಾರಿ ಕಂಪೆನಿಗಳ ಜತೆ ಸಿಎಸ್ಐಆರ್ ಒಪ್ಪಂದ ಮಾಡಿಕೊಂಡಿದೆ. ಆದರೆ ಹಸುರು ಪಟಾಕಿಗಳು ಎಲ್ಲಿ ಲಭ್ಯ ಎನ್ನುವ ಗೊಂದಲ ಗ್ರಾಹಕರಲ್ಲಿ ಇದೆ. ಯಾವುದು ಅಸಲಿ, ಯಾವುದು ನಕಲಿ ಎಂದು ಗುರುತಿಸುವುದೂ ತಿಳಿಯದು. ಹಸುರು ಪಟಾಕಿಗಳ ಪೊಟ್ಟಣಗಳ ಮೇಲೆ ಇರುವ ಕ್ಯುಆರ್ ಕೋಡ್ ಸ್ಕ್ಯಾನ್ ಮಾಡಿ ಪತ್ತೆ ಹಚ್ಚಬಹುದು ಎನ್ನುತ್ತವೆ ವರದಿಗಳು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
MUST WATCH
ಹೊಸ ಸೇರ್ಪಡೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್
Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
Bengaluru: ಮರಕ್ಕೆ ಬೈಕ್ ಡಿಕ್ಕಿ ಹೊಡೆದು ಯುವಕ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.