ಕಲಬುರಗಿಯಲ್ಲಿ ಒಂದೇ ದಿನ 66 ಕೋವಿಡ್ -19 ಸೋಂಕಿತರು ಡಿಸ್ಚಾರ್ಜ್
Team Udayavani, Jun 10, 2020, 8:20 PM IST
ಕಲಬುರಗಿ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೋವಿಡ್- 19 ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಮಧ್ಯೆಯೇ ಬುಧವಾರ ಒಂದೇ ದಿನ ಒಟ್ಟು 66 ಜನ ಪೀಡಿತರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಮಹಾರಾಷ್ಟ್ರದಿಂದ ವಾಪಸ್ ಆಗಿರುವ ನೂರಾರು ಕೂಲಿ ಕಾರ್ಮಿಕರಲ್ಲಿ ಕೋವಿಡ್-19 ಸೋಂಕು ಪತ್ತೆಯಾಗಿ ಜನತೆ ಆತಂಕಕ್ಕೆ ಕಾರಣವಾಗಿದೆ. ಈ ನಡುವೆ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗುತ್ತಿರುವುದು ಕೊಂಚ ನಿಟ್ಟುಸಿರು ಬಿಡುವಂತೆ ಆಗಿದೆ.
ಚಿತ್ತಾಪುರ ತಾಲೂಕಿನ 29 ಜನರು ಮತ್ತು ಸೇಡಂ ತಾಲೂಕಿನ 13 ಮಂದಿ ಸೋಂಕಿತರು ಬಿಡುಗಡೆಯಾಗಿದ್ದಾರೆ. ಆಳಂದ ತಾಲೂಕಿನ 10 ಜನರು, ಕಾಳಗಿ ಮತ್ತು ಚಿಂಚೋಳಿ ತಾಲೂಕಿನ ತಲಾ 4 ಜನರು, ಕಲಬುರಗಿ ನಗರ ಹಾಗೂ ಕಲಬುರಗಿ ತಾಲೂಕಿನ ತಲಾ ಇಬ್ಬರು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಉಳಿದಂತೆ ಅಫಜಲಪುರ ಮತ್ತು ಕಮಲಾಪುರ ತಾಲೂಕಿನ ತಲಾ ಒಬ್ಬರು ಗುಣಮುಖರಾಗಿದ್ದಾರೆ.
ಈ ಮೂಲಕ ಒಟ್ಟು ಕೋವಿಡ್-19 ಪೀಡಿತ 780 ಜನರಲ್ಲಿ 279 ಜನರು ಗುಣಮುಖರಾದಂತೆ ಆಗಿದೆ. ಎಂಟು ಜನರನ್ನು ಕೋವಿಡ್-19 ಬಲಿ ಪಡೆದಿದೆ. 493 ಸಕ್ರಿಯ ರೋಗಿಗಳಿದ್ದು, ಐಸೋಲೇಷನ್ ವಾರ್ಡ್ ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!
MUST WATCH
ಹೊಸ ಸೇರ್ಪಡೆ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
BBK11: ಕ್ಯಾಪ್ಟನ್ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.