ಬಿಜೆಪಿಯಲ್ಲಿ ಭಿನ್ನಮತ: ನಿರಾಣಿ ಟಿಕೆಟ್ ಘೋಷಣೆಗೆ ಮಾಜಿ ಸಚಿವ ಗುತ್ತೇದಾರ್ ಆಕ್ರೋಶ


Team Udayavani, Jan 26, 2023, 4:51 PM IST

1-sadsadasd

ಕಲಬುರಗಿ: ಬಿಜೆಪಿ ಶಿಸ್ತಿನ ಪಕ್ಷವಾಗಿದ್ದು, ‌ಕೋರ್ ಕಮಿಟಿಯಲ್ಲಿ ಟಿಕೆಟ್ ನಿರ್ಣಯ ಮಾಡಲಾಗುತ್ತದೆ. ‌ಹೀಗಿರುವಾಗ ಕೈಗಾರಿಕಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ಕಲಬುರಗಿ ಉತ್ತರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಘೋಷಣೆ ಮಾಡುವುದಕ್ಕೆ ಅಧಿಕಾರ ಕೊಟ್ಟವರು ಯಾರು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ, ಮಾಜಿ ಸಚಿವ ಮಾಲೀಕಯ್ಯ ವಿ.ಗುತ್ತೇದಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಲಬುರಗಿ ಉತ್ತರದಲ್ಲಿ ಚಂದು ಪಾಟೀಲ್ ಬಿಜೆಪಿ ಅಭ್ಯರ್ಥಿ ಎನ್ನುವ ನಿರಾಣಿ ಹೇಳಿಕೆಗೆ ಮಾಲೀಕಯ್ಯ ಗುತ್ತೇದಾರ ತೀವ್ರ ಆಕ್ರೋಶ ವ್ಯಕ್ತಪಡಿಸಿ, ಸ್ವತ: ನಿರಾಣಿ ಅವರಿಗೆ ಬೀಳಗಿಯಲ್ಲಿ ಟಿಕೆಟ್ ಸಿಗುತ್ತೋ ಇಲ್ಲವೋ ಖಚಿತವಾಗಿಲ್ಲ. ನಮ್ಮಲ್ಲಿಯಾರ ಟಿಕೆಟ್ ಕೂಡ ಇನ್ನೂ ನಿರ್ಣಯವಾಗಿಲ್ಲ. ಪ್ರಮುಖವಾಗಿ ಕುಟುಂಬ ರಾಜಕಾರಣಕ್ಕೆ ಬಿಜೆಪಿ ಪಕ್ಷದಲ್ಲಿ ಅವಕಾಶ ಇಲ್ಲ ಎಂದರು.

ನಿರಾಣಿ ಅವರು ಕಲಬುರಗಿ ಉಸ್ತುವಾರಿ ಸಚಿವರಾಗಿದ್ದಾರೆ.‌ ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿ ಕೆಲಸ ಮಾಡಲಿ.‌ ಪಕ್ಷದ ಸಂಘಟನೆಗೆ ರಾಜ್ಯ ಉಪಾಧ್ಯಕ್ಷ ಸೇರಿ ಇಲ್ಲಿ ಹಲವರಿದ್ದಾರೆ. ಪರಿಸ್ಥಿತಿ ಎಲ್ಲ ಗೊತ್ತಿದ್ದರೂ ಸಚಿವ ನಿರಾಣಿ ಅಭ್ಯರ್ಥಿ ಘೋಷಣೆ ಮಾಡಿರುವುದನ್ನು ಬಲವಾಗಿ ಖಂಡಿಸುತ್ತೇನೆ ಎಂದು ಹರಿ ಹಾಯ್ದರು.‌

ಟಿಕೆಟ್ ಘೋಷಣೆಯಿಂದ ಪಕ್ಷದಲ್ಲಿ ಗೊಂದಲ ಉಂಟಾಗುತ್ತದೆ. ಒಟ್ಟಾರೆ ಈ ವಿಚಾರ ಪಕ್ಷದ ವೇದಿಕೆಯಲ್ಲಿ ಪ್ರಸ್ತಾಪಿಸುವೆ ಎಂದು ಗುತ್ತೇದಾರ ತಿಳಿಸಿದರು.

ಅಫಜಲಪುರದಲ್ಲಿ ತಮ್ಮ ವಿರುದ್ದ ಕೆಲವರು ಎತ್ತಿ ಕಟ್ಟುತ್ತಿದ್ದಾರೆ.‌ ಈಗಾಗಲೇ ಆರು ಸಲ ಗೆದ್ದಿದ್ದು, ಏಳನೆ ಸಲ ಗೆದ್ದರೆ ಮಂತ್ರಿಯಾಗುತ್ತೇನೆ ಎಂಬ ಕಾರಣದಿಂದ ಸಹೋದರನನ್ನು ಟಿಕೆಟ್ ಕೇಳುವಂತೆ ಮುಂದೆ ಮಾಡುತ್ತಿದ್ದಾರೆ. ನಮ್ಮ ಕುಟುಂಬದಲ್ಲಿ ಒಡಕಿಲ್ಲ. ಜಾರಕಿಹೊಳಿ ಕುಟುಂಬದಂತೆ ಒಬ್ಬೊಬ್ಬರು ಒಂದೊಂದು ಪಕ್ಷದಲ್ಲಿಲ್ಲ. ನಾವೆಲ್ಲರೂ ಕುಳಿತು ಮಾತನಾಡುತ್ತೇವೆ. ಹಿರಿಯ ಸಹೋದರನಾಗಿ ತಂದೆ ಸ್ಥಾನದಲ್ಲಿ ಕೆಲವು ಮಾತುಗಳು ಹೇಳುವೆ. ಮಕ್ಕಳನ್ನು ರಾಜಕೀಯವಾಗಿ ಮುಂಚೂಣಿಗೆ ತಂದಿಲ್ಲ. ತರುವಂತಿದ್ದರೆ ಫರಹಾಬಾದ್ ಜಿಲ್ಲಾ ಪಂಚಾಯಿತಗೆ ತರಬಹುದಿತ್ತು.‌ ತನ್ನ ಉತ್ತರದಾಧಿಕಾರಿ ಸಹೋದರ ನಿತೀನ್ ಗುತ್ತೇದಾರ ಎಂದು ಹೇಳಲಾಗಿದೆ. ಟಿಕೆಟ್ ಯಾರಿಗೂ ಕೊಟ್ಟರೂ ಒಗ್ಗಟ್ಟಿನಿಂದ ಮಾಡುತ್ತೇವೆ. ಒಂದು ವೇಳೆ ಎಲ್ಲವೂ ಹೇಳಿದ್ದರೂ ಕೇಳದಿದ್ದರೆ ಏನೂ ಮಾಡಕ್ಕಾಗಲ್ಲ ಎಂದು ಕುಟುಂಬದಲ್ಲಿನ ಟಿಕೆಟ್ ಪೈಪೋಟಿ ಕುರಿತು ವಿವರಣೆ ನೀಡಿದರು.

ನಿರಾಣಿ ಹೇಳಿದ್ದೇನು?
ಸಚಿವ ಮುರುಗೇಶ ನಿರಾಣಿ ಜ.‌25 ರಂದು ಬಿಜೆಪಿ ಕಲಬುರಗಿ ಉತ್ತರ ಮಂಡಲ ಪಕ್ಷದ ಕಚೇರಿ ಉದ್ಘಾಟಿಸಿ, ಈ ಸಲ ಕಲಬುರಗಿ ಉತ್ತರ ಕ್ಷೇತ್ರಕ್ಕೆ ಚಂದು ಪಾಟೀಲ್ ಅವರೇ ಅಭ್ಯರ್ಥಿ ಎಂದು ಘೋಷಿಸಿದ್ದರು.‌ ಇದಕ್ಕೆ ಮಾಲೀಕಯ್ಯ ಗುತ್ತೇದಾರ ಗುರುವಾರ ಆಕ್ರೋಶ ವ್ಯಕ್ತಪಡಿಸಿದರು.

ಟಿಕೆಟ್ ಘೋಷಣೆ ಗೆ ಸಂಬಂಧಿಸಿದಂತೆ ರ ಪ್ರತಿಕ್ರಿಯಿಸಿರುವ ಸಚಿವ ನಿರಾಣಿ, ಕಳೆದ ಸಲ ಚಂದು ಪಾಟೀಲ್ ಕಡಿಮೆ ಮತಗಳ ಅಂತರದಿಂದ ಸೋತಿದ್ದಾರೆ. ಈ ಸಲ ಗೆಲುವು ಸಾಧಿಸುವುದು ನಿಶ್ಚಿತ. ‌ಹೀಗಾಗಿ ಘೋಷಣೆ ಮಾಡಲಾಗಿದೆ. ಆದರೂ ಇದು ವೈಯಕ್ತಿಕ ಹೇಳಿಕೆ. ಪ್ರಮುಖವಾಗಿ ವರಿಷ್ಠರ ಗಮನಕ್ಕಿದೆ ಎಂದು ವಿವರಣೆ ನೀಡಿದರು.

ಟಾಪ್ ನ್ಯೂಸ್

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

puttige-4

Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1

Kasaragod Crime News: ಅವಳಿ ಪಾಸ್‌ಪೋರ್ಟ್‌; ಕೇಸು ದಾಖಲು

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.