![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Jul 26, 2023, 9:44 PM IST
ಬೆಂಗಳೂರು: ಆದಾಯಕ್ಕಿಂತ ಅಧಿಕ ಆಸ್ತಿ ಗಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧದ ತನಿಖಾ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಲಾಗಿದೆ.
ಸಿಬಿಐ ತನಿಖೆ ರದ್ದುಕೋರಿ ಡಿ.ಕೆ. ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯು ನ್ಯಾಯಮೂರ್ತಿ ಕೆ. ನಟರಾಜನ್ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.
ಈ ವೇಳೆ ಡಿ.ಕೆ. ಶಿವಕುಮಾರ್ ಪರ ವಾದ ಮಂಡಿಸಿದ ಹಿರಿಯ ವಕೀಲ ಸಂದೇಶ ಚೌಟ, ಮುಚ್ಚಿದ ಲಕೋಟೆಯಲ್ಲಿ ತನಿಖಾ ವರದಿಯನ್ನು ಸಲ್ಲಿಸಿದ ಸಿಬಿಐ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿದರು.ಅಲ್ಲದೇ ಸುಪ್ರೀಂಕೋರ್ಟ್ ಸಹ ಈ ಹಿಂದೆ ಆಕ್ಷೇಪ ವ್ಯಕ್ತಪಡಿಸಿದೆ ಎಂದು ನ್ಯಾಯಪೀಠದ ಗಮನಕ್ಕೆ ತಂದರು.ಇದಕ್ಕೆ ಸ್ಪಷ್ಟನೆ ನೀಡಿದ ಸಿಬಿಐ ಪರ ವಕೀಲ ಪಿ. ಪ್ರಸನ್ನಕುಮಾರ್, ನ್ಯಾಯಾಲಯದ ಆದೇಶದಂತೆ ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸಲಾಗಿದೆ ಎಂದರು.
ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ ಸಿಬಿಐ ತನಿಖೆಗೆ ನೀಡಲಾಗಿದ್ದ ತಡೆಯಾಜ್ಞೆಯನ್ನು ವಿಸ್ತರಿಸಿ ವಿಚಾರಣೆಯನ್ನು ಜುಲೈ 31ಕ್ಕೆ ಮುಂದೂಡಿತು.
You seem to have an Ad Blocker on.
To continue reading, please turn it off or whitelist Udayavani.