ಮೇಕೆದಾಟು ಪಾದಯಾತ್ರೆ ಆರಂಭ: ಪಾಂಚಜನ್ಯ ಮೊಳಗಿದೆ ಎಂದ ಡಿ.ಕೆ.ಶಿವಕುಮಾರ್

Team Udayavani, Jan 9, 2022, 12:22 PM IST

1-sdd

ಕನಕಪುರ : ”ಐತಿಹಾಸಿಕ ಹೋರಾಟಕ್ಕೆ ಪಾಂಚಜನ್ಯ ಮೊಳಗಿದೆ ಇದು ಕನ್ನಡಿಗರ ಹಕ್ಕು ಮತ್ತು ಸ್ವಾಭಿಮಾನದ ʼಸಂಗಮ’ʼ. ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಭಾನುವಾರ ‘ನಮ್ಮ ನೀರು ನಮ್ಮ ಹಕ್ಕು” ಪಾದಯಾತ್ರೆಗೆ ಚಾಲನೆ ನೀಡಿ ಟ್ವೀಟ್ ಮಾಡಿದ್ದಾರೆ.

ಮೇಕೆದಾಟು ಸಂಗಮದಲ್ಲಿ ಸರ್ವಧರ್ಮಗುರುಗಳು ಸಸಿಗಳಿಗೆ ನೀರೆರೆಯುವ ಮೂಲಕ ನಡಿಗೆ ಆರಂಭಕ್ಕೆ ಚಾಲನೆ ನೀಡಿದರು. ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಅವರು ನಗಾರಿ ಬಾರಿಸುವ ಮೂಲಕ ಹೋರಾಟಕ್ಕೆ ಜೋಶ್ ತುಂಬಿದರು.

ಕಾಂಗ್ರೆಸ್ ನ ಹಿರಿಯ ನಾಯಕರು,ಸಂಸದರು, ಶಾಸಕರು, ಮಹಿಳಾ ಪ್ರತಿನಿಧಿಗಳು ಸೇರಿದಂತೆ ಸಾವಿರಾರು ಕಾರ್ಯಕರ್ತರು ಭಾಗಿಯಾಗಿದ್ದು, ಕಾರ್ಯಕ್ರಮದಲ್ಲಿ ಕೋವಿಡ್ ನಿಯಮಗಳನ್ನು ಗಾಳಿಗೆ ತೂರಲಾಗಿರುವುದು ಕಂಡು ಬಂದಿದೆ. ಹೆಚ್ಚಿನ ನಾಯಕರೇ ಮಾಸ್ಕ್ ಧರಿಸದೇ ಭಾಗಿಯಾಗಿದ್ದರು.

ಪಾದಯಾತ್ರೆಗೆ ಯಾವ್ಯಾವ ಜಿಲ್ಲೆಯವರು, ಯಾವ್ಯಾವ ದಿನದಂದು ಭಾಗವಹಿಸಬೇಕು ಎಂಬ ಸೂಚನೆ ಈಗಾಗಲೆ ಆಯಾ ಜಿಲ್ಲೆಗೆ ನೀಡಲಾಗಿದೆ. ಅಲ್ಲದೆ ಪಾದಯಾತ್ರೆ ವೇಳೆ ನೀರು ಸರಬರಾಜು, ಆಹಾರ, ವೈದ್ಯಕೀಯ, ವಸತಿ ಹೀಗೆ ಪ್ರಮುಖ ಅಂಶಗಳಿಗೆ ಪ್ರತ್ಯೇಕ ಸಮಿತಿ ರಚಿಸಲಾಗಿದೆ ಎಂದು ಕಾಂಗ್ರೆಸ್‌ ಕಾರ್ಯಕರ್ತರು ತಿಳಿಸಿದ್ದಾರೆ.

ಪಾದಯಾತ್ರೆ ನಡೆಯುವ ದಿಗಳಲ್ಲಿ ಪ್ರತಿನಿತ್ಯ ತಲಾ ಒಂದು ಲೋಕಸಭಾ ಹಾಗೂ ವಿಧಾನಸಭಾ ಕ್ಷೇತ್ರದ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಲಿ ದ್ದಾರೆ. ಮೊದಲ ದಿನ ಭಾನುವಾರ ಪಕ್ಷದ ಮುಖಂಡರು ಮತ್ತು ಪ್ರಮುಖ ಕಾರ್ಯಕರ್ತರಿಗೆ ಹಾಗೂ ಚಾಮರಾಜನಗರ ಹಾಗೂ ಕೊಡಗು ವ್ಯಾಪ್ತಿಯ ಪಕ್ಷದ ಕಾರ್ಯಕರ್ತರಿಗೆ ಅವಕಾಶ ಕೊಡಲಾಗಿದೆ.

ಎರಡನೇ ದಿನ ಚಾಮರಾಜನಗರ ಜಿಲ್ಲೆ ಹಾಗೂ ಕನಕಪುರ ಕ್ಷೇತ್ರ, ಮೂರನೇ ದಿನದ ಪಾದಯಾತ್ರೆಯಲ್ಲಿ ಚಾಮರಾಜನಗರ ಲೋಕಸಭಾ ಹಾಗೂ ಮೈಸೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮುಖಂಡರು ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ. 4ನೇ ದಿನದ ಪಾದಯಾತ್ರೆಯಲ್ಲಿ ಹಾಸನ ಲೋಕಸಭಾ ಕ್ಷೇತ್ರ ಹಾಗೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ, 5ನೇ ದಿನ ಮಂಡ್ಯ ಹಾಗೂ ರಾಮನಗರ ಜಿಲ್ಲೆ , 6ನೇ ದಿನ ತುಮಕೂರು ಲೋಕಸಭಾ ಕ್ಷೇತ್ರ ಹಾಗೂ ಮಾಗಡಿ ವಿಧಾನ ಸಭಾ ಕ್ಷೇತ್ರದ ಮುಖಂಡರು,ಕಾರ್ಯಕರ್ತರು ಪಾದಯಾತ್ರೆ ಯಲ್ಲಿ ಭಾಗವಹಿಸಲಿದ್ದಾರೆ.

7ನೇ ದಿನ ಬೆಂಗಳೂರು ನಗರ ವ್ಯಾಪ್ತಿಯ ನೆಲಮಂಗಲ, ವಿಜಯನಗರ ರಾಜರಾಜೇಶ್ವರಿ ನಗರ, ಬಸವನಗುಡಿ, ಯಶವಂತಪುರ, ಗೋವಿಂದರಾಜನಗರ, ಪದ್ಮನಾಭ ನಗರ ವಿಧಾನಸಭಾ ಕ್ಷೇತ್ರ, 8ನೇ ದಿನ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ ಸೇರಿದಂತೆ ಬೆಂಗಳೂರಿನ ಬೊಮ್ಮನಹಳ್ಳಿ,ಬಿಟಿಎಂ ಲೇಔಟ್ , ಜಯನಗರ, ಶಾಂತಿನಗರ,ಬೆಂಗಳೂರು ದಕ್ಷಿಣ ಹಾಗೂ ಸಿ.ವಿ.ರಾಮನ್‌ ನಗರ ಕ್ಷೇತ್ರದ ಮುಖಂಡರು, ಕಾರ್ಯಕರ್ತರು ಭಾಗವಹಿಸುವರು.

9ನೇ ದಿನದ ಪಾದಯಾತ್ರೆಯಲ್ಲಿ ಹೊಸಕೋಟೆ, ಯಲಹಂಕ, ಹೆಬ್ಟಾಳ, ಗಾಂಧಿನಗರ, ರಾಜಾಜಿನಗರ, ಶಿವಾಜಿನಗರ, ಮಹಾಲಕ್ಷ್ಮೀ ಲೇಔಟ್, ದೇವನಹಳ್ಳಿ ಸೇರಿದಂತೆ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ ಹಾಗೂ 11ನೇ ದಿನ ಚಿಕ್ಕಪೇಟೆ, ಶಿವಾಜಿ ನಗರ, ದಾಸರಹಳ್ಳಿ, ಗಾಂಧಿನಗರ ವಿಧಾನಸಭಾ ಕ್ಷೇತ್ರ ಸೇರಿದಂತೆ ಬೀದರ್‌, ಶಿವಮೊಗ್ಗ, ಕಲಬುರ್ಗಿ, ಬಳ್ಳಾರಿ ರಾಯಚೂರು ಜಿಲ್ಲೆ ಸೇರಿದಂತೆ ರಾಜ್ಯದ ಹಲವು ಜಿಲ್ಲೆ ಗಳಿಂದ ಮುಖಂಡರು ಕಾರ್ಯಕರ್ತರ ಸಮ್ಮಿಲನದಲ್ಲಿ ಪಾದಯಾತ್ರೆ ಸಾಗಿ ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಸಮಾವೇಶಗೊಳ್ಳಲಿದೆ ಎಂಬ ಮಾಹಿತಿ ಇದೆ.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Chikkamagaluru: ಸಾವಿನಲ್ಲೂ ಸಾರ್ಥಕತೆ; ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Chikkamagaluru: ಸಾವಿನಲ್ಲೂ ಸಾರ್ಥಕತೆ… ರಸ್ತೆ ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

9

Cabinet Meeting: ದಶಕದ ಬಳಿಕ ಕಲಬುರಗಿಯಲ್ಲಿ ಸಂಪುಟ ಸಭೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.