ಬಿಜೆಪಿಯದ್ದು ದಲಿತ, ಹಿಂದುಳಿದ, ಅಲ್ಪಸಂಖ್ಯಾತರ ವಿರೋಧಿ ಸರ್ಕಾರ: ಡಿ.ಕೆ ಶಿವಕುಮಾರ್
Team Udayavani, Dec 9, 2020, 2:27 PM IST
ಬೆಂಗಳೂರು: ದಲಿತರ ಅಭಿವೃದ್ಧಿಗಾಗಿ ಮೀಸಲಿಟ್ಟ ಹಣವನ್ನು ರಾಜ್ಯ ಸರ್ಕಾರ ಫ್ಲೈಓವರ್ ಕಾಮಗಾರಿಗೆ ಬಳಸಿರುವುದು ಈ ವರ್ಗದ ಜನರ ಬಗ್ಗೆ ಬಿಜೆಪಿ ಸರ್ಕಾರಕ್ಕಿರುವ ಬದ್ಧತೆಯನ್ನು ತೋರುತ್ತದೆ. ಇದು ದಲಿತ, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ವಿರೋಧಿ ಸರ್ಕಾರವಾಗಿದ್ದು, ಅಧಿಕಾರದಲ್ಲಿ ಮುಂದುವರಿಯುವ ನೈತಿಕ್ತೆ ಇಲ್ಲ. ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹಾಗೂ ಸಚಿವ ಶ್ರೀರಾಮುಲು ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆಗ್ರಹಿಸಿದ್ದಾರೆ.
ಬುಧವಾರ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು ‘ಇಡಿ ಭಾರತದ ಇತಿಹಾಸದಲ್ಲಿ ಬೆಳಗಾವಿ ಅಧಿವೇಶನದಲ್ಲಿ ನಮ್ಮ ಸರ್ಕಾರ ಸಂವಿಧಾನಾತ್ಮಕವಾಗಿ ಕಾನೂನು ಜಾರಿಗೆ ತಂದಿದ್ದೆವು. 30 ಸಾವಿರ ಕೋಟಿ ಹಣವನ್ನು ಪರಿಶಿಷ್ಟ ಜಾತಿ ಹಾಗೂ ಪಂಗಡದವರ ಅಭಿವೃದ್ಧಿಗೆ ಮೀಸಲಿಟ್ಟು ಆ ಹಣವನ್ನು ಅವರಿಗಾಗಿಯೇ ಖರ್ಚು ಮಾಡಲು ನಾವು ಕಾನೂನು ರೂಪಿಸಿದ್ದೆವು.
ಕಳೆದ ಬಜೆಟ್ ನಲ್ಲಿ ಇದು 17 ಸಾವಿರ ಕೋಟಿಗೆ ಇಳಿದಿತ್ತು. ಆರ್ಥಿಕ ಸಂಪನ್ಮೂಲ ಕೊರತೆ ಪರಿಸ್ಥಿತಿ ಅರಿತು ನಾವು ಈ ಬಗ್ಗೆ ಮಾತನಾಡಿರಲಿಲ್ಲ. ಈಗ 10 ಸಾವಿರ ಕೋಟಿಗೆ ಬಂದಿದ್ದು, ಜತೆಗೆ ಆ ಹಣವನ್ನು ಬೇರೆ ಇಲಾಖೆಗೆ ವರ್ಗಾವಣೆ ಮಾಡಿದೆ. ಇದು ಬಿಜೆಪಿಯು ಅಲ್ಪಸಂಖ್ಯಾತರು, ಹಿಂದುಳಿದವರು ಹಾಗೂ ದಲಿತರ ವಿಚಾರವಗಿ ಬದ್ಧತೆ ಹೊಂದಿಲ್ಲ ಎಂಬುದಕ್ಕೆ ಸಾಕ್ಷಿಎಂದು ಗುಡುಗಿದ್ದಾರೆ.
ಇದನ್ನೂ ಓದಿ:ಆ್ಯಪಲ್ ನ ಮೊದಲ Headphone ಬಿಡುಗಡೆ: ಇದರ ಬೆಲೆ, ವಿಶೇಷತೆಗಳ ಮಾಹಿತಿ ಇಲ್ಲಿದೆ
ಕಾರಜೋಳ ಅವರು ಹಾಗೂ ಶ್ರೀರಾಮುಲು ಅವರಿಗೆ ಸ್ವಾಭಿಮಾನ ಇದ್ದರೆ ಕೂಡಲೇ ರಾಜೀನಾಮೆ ನೀಡಬೇಕು. ಕಾರಜೋಳ ಅವರು ಉಪಮುಖ್ಯಮಂತ್ರಿಯಾಗಿ ಅವರ ಧ್ವನಿ ಕಳೆದುಕೊಂಡಿದ್ದಾರೆ. ಬಿಜೆಪಿಯ ದಲಿತ ವಿರೋಧಿ ನೀತಿಯನ್ನು ಇವರಿಂದ ತಡೆಯಲು ಸಾಧ್ಯವಾಗಿಲ್ಲ. ಈ ಇಬ್ಬರ ಸಮ್ಮತಿ ಇಲ್ಲದೆ ಈ ಇಲಾಖೆ ಹಣವನ್ನು ವರ್ಗಾವಣೆ ಮಾಡಲು ಸಾಧ್ಯವಿಲ್ಲ. ಇದು ದಲಿತ ವಿರೋಧಿ ಸರ್ಕಾರವಾಗಿದ್ದು, ಇವರಿಗೆ ಅಧಿಕಾರದಲ್ಲಿ ಮುಂದುವರಿಯಲು ಯಾವುದೇ ನೈತಿಕತೆ ಇಲ್ಲ ಎಂದು ಹೇಳಿದರು.
ಕಲ್ಯಾಣ ಕರ್ನಾಟಕದ ನಿರ್ಲಕ್ಷ್ಯ:
ಈ ಭಾಗದಲ್ಲಿ ಕಾಂಗ್ರೆಸ್ ಶಾಸಕರು ಹೆಚ್ಚಾಗಿದ್ದಾರೆ. ಹೀಗಾಗಿ ಕಲ್ಯಾಣ ಕರ್ನಾಟಕಕ್ಕೆ ನಿಗದಿ ಮಾಡಿರುವ 1500 ಕೋಟಿ ಹಣ ಬಿಡುಗಡೆ ಮಾಡಿದರೆ ನಮ್ಮ ಶಾಸಕರಿಗೆ ಅನುಕೂಲವಾಗುತ್ತದೆ ಎಂಬ ಉದ್ದೇಶದಿಂದ ಬಿಜೆಪಿ ಸರ್ಕಾರ ಈ ಭಾಗವನ್ನು ಸಂಪೂರ್ಣ ನಿರ್ಲಕ್ಷ್ಯ ಮಾಡಿದ್ದಾರೆ.
ಜೆಡಿಎಸ್ ನಾಯಕರನ್ನು ಪ್ರಧಾನಿ, ಮುಖ್ಯಮಂತ್ರಿ ಮಾಡಿದ್ದೇ ನಮ್ಮ ಶಾಲು:
ಕಾಂಗ್ರೆಸ್ ಪಕ್ಷದ ಶಾಲಿನ ಬಗ್ಗೆ ಕುಮಾರಸ್ವಾಮಿ ಅವರ ಹೇಳಿಕೆ ವಿಚಾರವಾಗಿ ಉತ್ತರಿಸಿದ ಡಿಕೆಶಿ ‘ಪಾಪ ಏನು ಮಾಡ್ತೀರಿ. ಜೆಡಿಎಸ್ ನಾಯಕರನ್ನು ದೇಶದ ಪ್ರಧಾನಿಯನ್ನಾಗಿ ಮಾಡಿದ್ದು, ಇದೇ ಶಾಲು. ಕುಮಾರಸ್ವಾಮಿ ಅವರನ್ನು ಈ ರಾಜ್ಯದ ಮುಖ್ಯಮಂತ್ರಿಯಾಗಿ ಮಾಡಿದ್ದು ಕೂಡ ಇದೇ ಶಾಲು. ಈಗ ಅವರು ಅದೇ ಶಾಲಿನ ಬಗ್ಗೆ ಹಗುರವಾಗಿ ಮಾತನಾಡುತ್ತಾರೆ ಎಂದರೆ, ಇದರ ಬಗ್ಗೆ ರಾಜ್ಯದ ಜನತೆ ತೀರ್ಮಾನ ಮಾಡಲಿ’ ಎಂದರು.
‘ಸಿದ್ದರಾಮಯ್ಯನವರು ಯಡಿಯೂರಪ್ಪನವರನ್ನು ಭೇಟಿ ಮಾಡಿರುವ ಬಗ್ಗೆ ಅವರನ್ನೇ ಕೇಳಬೇಕು. ನನಗೆ ಗೊತ್ತಿಲ್ಲದ ವಿಚಾರದ ಬಗ್ಗೆ ನಾನೇನು ಹೇಳಲಿ?’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ
Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.