ರೈತರು, ಕಾರ್ಮಿಕರು, ಜನರ ಧ್ವನಿಯಾಗಿ ಕಾಂಗ್ರೇಸ್ ಕೆಲಸ ಮಾಡಲಿದೆ : ಡಿಕೆಶಿ
Team Udayavani, Jan 26, 2021, 7:40 PM IST
ಬೆಂಗಳೂರು: ದೇಶದಲ್ಲಿಂದು ಹಕ್ಕುಗಳಿಗಾಗಿ ಹೋರಾಟ ನಡೆಯುವ ದುಸ್ಥಿತಿ ಎದುರಾಗಿದೆ. ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ರೈತರು-ಕಾರ್ಮಿಕರು, ಜನಸಾಮಾನ್ಯರು ಬೀದಿಗಿಳಿದಿದ್ದು ಕಾಂಗ್ರೆಸ್ ಅವರ ಧ್ವನಿಯಾಗಿ ಕೆಲಸ ಮಾಡಬೇಕಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಕೆಪಿಸಿಸಿ ವತಿಯಿಂದ ಆಯೋಜಿಸಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಸ್ವಾತಂತ್ರ್ಯ ಬಂದ ನಂತರ ಮೊದಲ ಬಾರಿಗೆ ದೇಶದ ಜನತೆ ಹಾಗೂ ರೈತರು ತಮ್ಮ ಭವಿಷ್ಯ ಹಾಗೂ ಅಸ್ತಿತ್ವ ಉಳಿಸಿಕೊಳ್ಳಲು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಅನ್ನದಾತ ಕೃಷಿಕನ ರಕ್ಷಣೆಗೆ ನಾವು ನಿಲ್ಲಬೇಕಿದೆ ಅದು ನಮ್ಮ ಕರ್ತವ್ಯ ಎಂದು ತಿಳಿಸಿದರು.
ಜಗತ್ತಿನಲ್ಲೇ ಅತಿದೊಡ್ಡ ಪ್ರಜಾಪ್ರಭುತ್ವ ಎಂಬ ಹೆಗ್ಗಳಿಕೆ ನಮ್ಮ ಸಂಸತ್‌ಗೆ ಇದೆ. ಆದರೆ, ಆ ಸಂಸತ್‌ನಲ್ಲಿ ಚರ್ಚೆ ಮಾಡದೇ ಕಾಯ್ದೆಗಳನ್ನು ಏಕಪಕ್ಷೀಯವಾಗಿ ಅಂಗೀಕಾರ ಮಾಡಲಾಗುತ್ತಿದೆ ಎಂದು ಹೇಳಿದರು.
ಇದನ್ನೂ ಓದಿ:ಅನ್ನದಾತ ಎಂದೂ ನೆತ್ತರು ಹರಿಸುವುದಿಲ್ಲ; ‘ಕಾಣದ ಕೈಗಳು’ ಅವರ ದಿಕ್ಕು ತಪ್ಪಿಸಿವೆ: ಸುಧಾಕರ್
ದೆಹಲಿಯಲ್ಲಿ ಲಕ್ಷಾಂತರ ಹಾಗೂ ರಾಜ್ಯದಲ್ಲಿ ಸಾವಿರಾರು ರೈತರು ಟ್ರ್ಯಾಕ್ಟರ್ ರ್ಯಾಲಿ ನಡೆಸಿ ಹೋರಾಟ ಮಾಡುತ್ತಿದ್ದಾರೆ. ಬಿಜೆಪಿ ಸರ್ಕಾರ ಈ ಕಾಯ್ದೆಗಳಿಮದ ಒಳ್ಳೆಯದಾಗುತ್ತದೆ ಎಂದು ಹೇಳುತ್ತಿದೆ. ಆದರೆ, ಹನ್ನೊಂದು ಸುತ್ತಿನ ಮಾತುಕತೆಯಲ್ಲಿ ಅದನ್ನು ಮನವರಿಕೆ ಮಾಡಿಕೊಡಲು ಸಾಧ್ಯವಾಗಿಲ್ಲ ಎಂದು ತಿಳಿಸಿದರು.
ಕೇಂದ್ರದ ಬಿಜೆಪಿ ಸರ್ಕಾರ ರೈತರ ಹಿತ ಬಲಿಕೊಟ್ಟು, ಶ್ರೀಮಂತರ , ಬಂಡವಾಳ ಶಾಹಿಗಳ ಹಿತ ಕಾಯಲಿದೆ. ಹೀಗಾಗಿ ಈ ಕಾಯ್ದೆ ವಿರುದ್ಧ ಹೋರಾಟ ಮಾಡಲಾಗುತ್ತಿದೆ. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಕಬ್ಬಿಣ, ಸಿಮೆಂಟ್ ಸೇರಿ ದಿನಬಳಕೆ ವಸ್ತುಗಳ ದರ ಏರುತ್ತಲೇ ಇದ್ದು ಸಾಮಾನ್ಯ ಜನರ ಬದುಕಿಗೆ ಹೊರೆಯಾಗಿದೆ. ಮುಂದಿನ ದಿನಗಳಲ್ಲಿ ಇದರ ವಿರುದ್ಧದ ಹೋರಾಟ ಚುರುಕು ಮಾಡಬೇಕಾಗಿದೆ. ತಾಲೂಕು, ಜಿಲ್ಲಾ ಮಟ್ಟದಲ್ಲಿ ಹೋರಾಟ ರೂಪಿಸುವ ಅನಿವಾರ್ಯತೆ ಇದೆ ಎಂದು ಹೇಳಿದರು.
ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್.ಪಾಟೀಲ್, ಕಾರ್ಯಾಧ್ಯಕ್ಷ ಸಲೀಂ ಆಹಮದ್ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS: ಅಬ್ಬರಿಸಿದ ಬುಮ್ರಾ-ಸಿರಾಜ್: ಕೊನೆಯಲ್ಲಿ ಕಾಡಿದ ಲಿಯಾನ್- ಬೊಲ್ಯಾಂಡ್
Diabetes ನಿರ್ವಹಣೆ; ನಿಮ್ಮ ಊಟದ ಬಟ್ಟಲು ಸಮತೋಲಿತವಾಗಿರಲಿ
Bengaluru ರಾತ್ರಿ 1 ಗಂಟೆವರೆಗೆ ಮಾತ್ರ ಹೊಸ ವರ್ಷಾಚರಣೆಗೆ ಅವಕಾಶ: ಪೊಲೀಸ್ ಆಯುಕ್ತ
Heart attack; ಹೃದಯಾಘಾತ: ಖಂಡಿತವಾಗಿಯೂ ನಿರ್ಲಕ್ಷ್ಯ ಬೇಡ
Jhansi: ತರಗತಿಯಲ್ಲಿ ಅಶ್ಲೀಲ ವಿಡಿಯೋ ನೋಡಿದ ಶಿಕ್ಷಕ; ಗಮನಿಸಿದ ವಿದ್ಯಾರ್ಥಿಗೆ ಥಳಿತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.