CBI ತನಿಖೆ ಪ್ರಶ್ನಿಸಿ ಡಿಕೆಶಿ ಅರ್ಜಿ: ಮುಂದೂಡಿಕೆ

Team Udayavani, Jul 22, 2023, 7:24 AM IST

dk shi

ಬೆಂಗಳೂರು: ಆದಾಯ ಮೀರಿ ಆಸ್ತಿಗಳಿಕೆ ಆರೋಪ ಸಂಬಂಧ ಸಿಬಿಐ ನಡೆಸುತ್ತಿರುವ ತನಿಖಾ ವಿಧಾನವೇ ಪ್ರಶ್ನಾರ್ಹವಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಪರ ವಕೀಲರು ವಾದಿಸಿದ್ದಾರೆ.

ಆದಾಯ ಮೀರಿದ ಆಸ್ತಿ ಗಳಿಕೆ ಆರೋಪ ಸಂಬಂಧ ಸಿಬಿಐ ತಮ್ಮ ಮೇಲೆ ದಾಖಲಿಸಿರುವ ಎಫ್ಐಆರ್‌ ರದ್ದುಪಡಿಸುವಂತೆ ಕೋರಿ ಶಿವಕುಮಾರ್‌ ಹೈಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿ ವಿಚಾರಣೆ ನ್ಯಾ| ಕೆ. ನಟರಾಜನ್‌ ಅವರ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು.

ಶಿವಕುಮಾರ್‌ ಪರ ವಾದಿಸಿದ ಹಿರಿಯ ವಕೀಲ ಸಂದೇಶ್‌ ಚೌಟ, ಅರ್ಜಿದಾರರ ಜತೆಗೆ ಅವರ ಕುಟುಂಬದ ಸದಸ್ಯರ ಮೇಲೂ ಆರೋಪ ಹೊರಿಸ ಲಾಗಿದೆ. ಕುಟುಂಬದ ಸದಸ್ಯರ ಆದಾಯವನ್ನೂ ಶಿವಕುಮಾರ್‌ ಅವರ ವೈಯಕ್ತಿಕ ಆದಾಯವೆಂದು ತನಿಖಾಧಿಕಾರಿಗಳು ಪರಿಗಣಿಸಿದ್ಧಾರೆ. ಆ ಮೂಲಕ ಅರ್ಜಿದಾರರು ನಿಗದಿಗಿಂತ ಹೆಚ್ಚಿನ ಆದಾಯ ಸಂಪಾದನೆ ಮಾಡಿದ್ಧಾರೆ ಎಂಬುದಾಗಿ ಹೇಳುತ್ತಿದ್ಧಾರೆ. ಕುಟುಂಬ ಸದಸ್ಯರ ಆದಾಯ ಪರಿಗಣಿಸಲು ಆಗುವುದಿಲ್ಲ. ಹಾಗಾಗಿ ಸಿಬಿಐ ತನಿಖಾ ವಿಧಾನವೇ ಪ್ರಶ್ನಾರ್ಹವಾಗಿದೆ ಎಂದು ವಾದಿಸಿದರು.

ಅಲ್ಲದೆ, ಸಿಬಿಐ ದಾಖಲಿಸಿದ ಎಫ್ಐಆರ್‌ನಲ್ಲಿ ಕುಟುಂಬದ ಸದಸ್ಯರ ಹೆಸರೇ ಇಲ್ಲ. ಪ್ರಮುಖ ಆರೋಪಿಯ ಅವಲಂಬಿತರು ಯಾರು ಎಂಬುದು ತಿಳಿಸಿಲ್ಲ. ಶಿವಕುಮಾರ್‌ ಅವರು ಸಾರ್ವಜನಿಕ ಸೇವಕ ರಾಗಿದ್ಧಾರೆ. ಸಾರ್ವಜನಿಕ ಸೇವಕನ ವೆಚ್ಚ ಯಾವುದು ಮುಂತಾದ ಅಂಶಗಳನ್ನು ಎಫ್ಐಆರ್‌ ವಿವರಿಸಿಲ್ಲ. ವಿವರವಾದ ಅಂಶಗಳಿಲ್ಲದೆ ಎಫ್ಐಆರ್‌ ದಾಖಲಿಸಲು ಆಗುವುದಿಲ್ಲ ಎಂದು ಹೇಳಿದರು.

ನಿಯಮ ಪ್ರಕಾರ ಈ ಪ್ರಕರಣವನ್ನು ಪೊಲೀಸ್‌ ವರಿಷ್ಠಾಧಿಕಾರಿ ಶ್ರೇಣಿಯ ಅಧಿಕಾರಿಗೆ ತನಿಖಾ ಜವಾ ಬ್ದಾರಿ ವಹಿಸಬೇಕು. ಆದರೆ ಈ ಪ್ರಕರಣದಲ್ಲಿ ತನಿಖಾ ಅಧಿಕಾರವನ್ನು ಉಪ ಪೊಲೀಸ್‌ ವರಿಷ್ಠಾಧಿಕಾರಿಗೆ ನೀಡಲಾಗಿದೆ. ಇದು ಸಹ ಅನುಮಾನಾಸ್ಪದವಾಗಿದ್ದು, ಕೇಸ್‌ ಡೈರಿಯನ್ನು ತರಿಸಿಕೊಂಡು ನ್ಯಾಯಾಲಯ ಪರಿಶೀಲನೆ ನಡೆಸಬೇಕು ಎಂದು ಕೋರಿದರು.

ಈ ವಾದವನ್ನು ಆಕ್ಷೇಪಿಸಿದ ಸಿಬಿಐ ಪರ ವಕೀಲ ಪಿ.ಪ್ರಸನ್ನಕುಮಾರ್‌, ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅರ್ಜಿಯಲ್ಲಿ ಉಲ್ಲೇಖೀಸದ ವಿಷಯಗಳ ಬಗ್ಗೆ ಈಗ ವಾದ ಮಂಡನೆ ಮಾಡಲಾಗುತ್ತಿದೆ ಎಂದರು. ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ಜು.26ಕ್ಕೆ ಮುಂದೂಡಿತು.

ಟಾಪ್ ನ್ಯೂಸ್

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

KSA-Nia-Arrest

Operation: ಕಾಸರಗೋಡಿನಲ್ಲಿ ಎನ್‌.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

KSA-Nia-Arrest

Operation: ಕಾಸರಗೋಡಿನಲ್ಲಿ ಎನ್‌.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.