ಒಕ್ಕೂಟ ವ್ಯವಸ್ಥೆಗೆ ಧಕ್ಕೆ ಆಗದಿರಲಿ; ನೀತಿ ಆಯೋಗದ ಸಭೆಯಲ್ಲಿ ಸಿಎಂಗಳ ಆಗ್ರಹ
ದೀದಿ, ಪಿಣರಾಯಿ, ಪಟ್ನಾಯಕ್, ಬಾಘೇಲ್ ಮನವಿ
Team Udayavani, Aug 7, 2022, 9:28 PM IST
ನವದೆಹಲಿ: ಕೇಂದ್ರ ಸರ್ಕಾರವು ಸಾಂವಿಧಾನಾತ್ಮಕವಾಗಿ ರಚನೆಯಾಗಿರುವ ಒಕ್ಕೂಟ ವ್ಯವಸ್ಥೆಗೆ ಧಕ್ಕೆಯಾಗುವಂತೆ ನಡೆದುಕೊಳ್ಳಬಾರದು. ಆಯಾ ರಾಜ್ಯಗಳ ಸ್ವಾಯತ್ತತೆ, ಅಭಿಪ್ರಾಯಗಳಿಗೆ ಅಪಚಾರವಾಗದಂತೆ ಕೇಂದ್ರ ಸರ್ಕಾರ ನಡೆದುಕೊಳ್ಳಬೇಕು ಎಂದು ಹಲವು ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಭಾನುವಾರ ನಡೆದ ನೀತಿ ಆಯೋಗದ ಆಡಳಿತ ಮಂಡಳಿಯ 7ನೇ ವಾರ್ಷಿಕ ಸಭೆಯಲ್ಲಿ ಭಾಗವಹಿಸಿದ್ದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಕೆಲವು ಕಾನೂನು ರಚಿಸುವಾಗ ಅಥವಾ ಕಾನೂನುಗಳನ್ನು ಪರಿಷ್ಕರಣೆಗೊಳಿಸುವಾಗ ರಾಜ್ಯಗಳೊಂದಿಗೆ ಸಮಾಲೋಚನೆ ನಡೆಸಬೇಕು. ಯಾವುದೇ ರಾಜ್ಯದ ಬಗ್ಗೆ ಕಾನೂನು ರೂಪಿಸುವಾಗ ಅಥವಾ ಕಾನೂನು ಜಾರಿಗೊಳಿಸುವಾಗ ಆಯಾ ರಾಜ್ಯದ ಅಭಿಪ್ರಾಯವನ್ನು ಪಡೆಯಬೇಕು ಎಂದು ಆಗ್ರಹಿಸಿದರು.
ಇದೇ ವೇಳೆ, ಕೊರೊನಾದಿಂದ ಆಗಿರುವ ನಷ್ಟದಿಂದ ಕೇರಳ ಇನ್ನೂ ಆರ್ಥಿಕವಾಗಿ ಮೇಲೆದ್ದಿಲ್ಲ. ಹಾಗಾಗಿ, ಕೇರಳ ರಾಜ್ಯಕ್ಕೆ ನಿಗದಿಪಡಿಸಲಾಗಿರುವ ಸಾಲದ ಮಿತಿಯನ್ನು ಹೆಚ್ಚಿಸಬೇಕು ಎಂದು ಅವರು ಆಗ್ರಹಿಸಿದರು.
ಏಕಪಕ್ಷೀಯ ನಿರ್ಧಾರಗಳು ಬೇಡ: ದೀದಿ
ಇದೇ ಧಾಟಿಯಲ್ಲಿ ಮಾತನಾಡಿದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, “ರಾಜ್ಯಗಳ ಅಭಿಪ್ರಾಯಗಳನ್ನು ಕೇಳದೆ ಕೇಂದ್ರ ಸರ್ಕಾರ ಯಾವುದೇ ಯೋಜನೆಯನ್ನು, ಕಾನೂನನ್ನು ಏಕಪಕ್ಷೀಯವಾಗಿ ಜಾರಿಗೊಳಿಸಬಾರದು. ಉದಾಹರಣೆಗೆ, ಇತ್ತೀಚೆಗೆ ಜಾರಿಯಾಗಿರುವ ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ಎಲ್ಲಾ ರಾಜ್ಯಗಳ ಅಭಿಪ್ರಾಯವನ್ನು ಪಡೆಯಬೇಕಿತ್ತು. ಇನ್ನು ಮುಂದೆ ಕೇಂದ್ರ, ರಾಜ್ಯಗಳ ಸಹಕಾರದಲ್ಲೇ ಕೇಂದ್ರದ ಎಲ್ಲಾ ಯೋಜನೆಗಳು ಜಾರಿಯಾಗಬೇಕು” ಎಂದು ಹೇಳಿದರು.
ಓಂಬುಡ್ಸ್ಮನ್ ಬೇಕು: ಪಟ್ನಾಯಕ್ ಸಲಹೆ
ಸಭೆಯಲ್ಲಿ ಮಾತನಾಡಿದ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್, ಯೋಜನೆಗಳ ವಿಚಾರದಲ್ಲಿ ಕೇಂದ್ರ ಹಾಗೂ ರಾಜ್ಯಗಳ ನಡುವೆ ಏರ್ಪಡುವ ವಿವಾದವನ್ನು ನೀತಿ ಆಯೋಗ ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.
ನೀತಿ ಆಯೋಗದ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರದ ಹಲವಾರು ಯೋಜನೆಗಳು ವಿವಾದಕ್ಕೂ ಈಡಾಗಿರುವ ಉದಾಹರಣೆಗಳುಂಟು. ಇಂಥ ಸಮಸ್ಯೆಗಳನ್ನು ಪರಿಹರಿಸಲು ನೀತಿ ಆಯೋಗವು ಓಂಬುಡ್ಸ್‌ಮನ್‌ನಂಥ ವ್ಯವಸ್ಥೆಯೊಂದನ್ನು ಜಾರಿಗೊಳಿಸಬೇಕು ಎಂದರು.
ಹೆಚ್ಚಿನ ಅನುದಾನಕ್ಕೆ ಮನವಿ
ಒಡಿಶಾವು ಪ್ರತಿ ವರ್ಷವೂ ನೈಸರ್ಗಿಕ ಪ್ರಕೋಪಗಳಿಗೆ ಸಿಲುಕಿ ತತ್ತರಿಸುತ್ತದೆ. ಇದರಿಂದ ರಾಜ್ಯ ಸರ್ಕಾರಕ್ಕೆ ಹೊರೆ ಬೀಳುತ್ತಲೇ ಇದ್ದು, ಕೇಂದ್ರದಿಂದ ಹೆಚ್ಚಿನ ಮಟ್ಟದ ಹಣಕಾಸು ನೆರವು ಬೇಕೆಂದು ಆಗ್ರಹಿಸಿದರು.
ಜಿಎಸ್ಟಿ ಪರಿಹಾರ ಅವಧಿ ಹೆಚ್ಚಿಸಿ
ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಅನುಷ್ಠಾನದಿಂದಾಗಿ ರಾಜ್ಯಗಳಿಗೆ ಆಗುತ್ತಿರುವ ನಷ್ಟವನ್ನು ತುಂಬಿಸಲು ಆಯಾ ರಾಜ್ಯಗಳಿಗೆ ನೀಡಲಾಗುವ ಪರಿಹಾರ ಧನ ಹಂಚಿಕೆ ವ್ಯವಸ್ಥೆಯನ್ನು ಮುಂದಿನ ಐದು ವರ್ಷಗಳಿಗೆ ವಿಸ್ತರಿಸಬೇಕೆಂದು ಛತ್ತೀಸ್‌ಗಡ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಆಗ್ರಹಿಸಿದ್ದಾರೆ. ಇದೇ ವೇಳೆ, ಛತ್ತೀಸ್‌ಗಡದಲ್ಲಿರುವ ಕಲ್ಲಿದ್ದಲು ಹಾಗೂ ಅಪರೂಪದ ಖನಿಜಗಳಿಗೆ ವಿಧಿಸಲಾಗುವ ರಾಯಲ್ಟಿ ಧನವನ್ನು ಹೆಚ್ಚಿಸಬೇಕು ಎಂದು ಮನವಿ ಮಾಡಿದರು.
ಸಭೆಯಲ್ಲಿ ಮಾತನಾಡಿದ ಅವರು, ಜಿಎಸ್‌ಟಿಯಿಂದಾಗಿ ಪ್ರಸಕ್ತ ಹಣಕಾಸು ವರ್ಷ ಮುಗಿಯುವ ಹೊತ್ತಿಗೆ ಛತ್ತೀಸ್‌ಗಡಕ್ಕೆ 5 ಸಾವಿರ ಕೋಟಿ ರೂ. ನಷ್ಟವಾಗುತ್ತದೆ. ಇದನ್ನು ತುಂಬಿಕೊಡುವ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ಆಶ್ವಾಸನೆ ನೀಡಿಲ್ಲ. ಎಲ್ಲಾ ರಾಜ್ಯಗಳಿಗೂ ಇದೇ ರೀತಿಯ ಸಮಸ್ಯೆ ಇರುವುದರಿಂದ ಜಿಎಸ್‌ಟಿ ನಷ್ಟಕ್ಕಾಗಿ ನೀಡುವ ಪರಿಹಾರ ಧನ ವಿತರಣೆ ಸೌಲಭ್ಯವನ್ನು ಮುಂದಿನ ಐದು ವರ್ಷಗಳವರೆಗೆ ವಿಸ್ತರಿಸಬೇಕು ಎಂದು ಹೇಳಿದರು.
ನೀತಿ ಆಯೋಗದ ಸಭೆಗೆ ನಿತೀಶ್ ಗೈರು
ಪ್ರಧಾನಿ ಮೋದಿ ನೇತೃತ್ವದಲ್ಲಿ ನವದೆಹಲಿಯಲ್ಲಿ ಭಾನುವಾರ ನಡೆದ ನೀತಿ ಆಯೋಗದ ಸಭೆಯಲ್ಲಿ ಬಿಹಾರ ಸಿಎಂ ನಿತೀಶ್ ಕುಮಾರ್ ಭಾಗವಹಿಸಿಲ್ಲ. ಕೊರೊನಾ ಕಾರಣಕ್ಕಾಗಿ ಸಭೆಗೆ ಗೈರುಹಾಜರಾಗಿದ್ದಾರೆ ಎಂದು ಹೇಳಿಕೆ ನೀಡಲಾಗಿದೆ. ಜೂ.17ರ ಬಳಿಕ ನಿತೀಶ್ ಕುಮಾರ್ ಗೈರುಹಾಜರಾಗುತ್ತಿರುವ ಕೇಂದ್ರ ಸರ್ಕಾರದ ಮಟ್ಟದ ನಾಲ್ಕನೇ ಮಹತ್ವದ ಸಭೆ ಇದಾಗಿದೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಪ್ರಮಾಣ ಸ್ವೀಕಾರ ಮತ್ತು ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಗೆ ವಿದಾಯ ಔತಣಕೂಟ, ಕೇಂದ್ರ ಗೃಹ ಸಚಿವ ಅಮಿತ್ ಶಾ ಆಯೋಜಿಸಿದ್ದ ಸಭೆಯಿಂದಲೂ ನಿತೀಶ್ ದೂರ ಉಳಿದಿದ್ದರು. ಬಿಹಾರ ಬಿಜೆಪಿ ಘಟಕ ಮತ್ತು ಮುಖ್ಯಮಂತ್ರಿ ನಡುವಿನ ಹೆಚ್ಚಿದ ಭಿನ್ನಮತವೇ ಈ ಬೆಳವಣಿಗೆಗೆ ಕಾರಣ ಎಂದು ಹೇಳಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gangolli: ಬೈಕ್‌ಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ
Udupi: ಪಿಕಪ್ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.