ಯಾರಿಗೂ ಮಣಿಯಬೇಡಿ: BJP ಹೈಕಮಾಂಡ್ ಖಡಕ್ ಸೂಚನೆ
Team Udayavani, Apr 16, 2023, 7:30 AM IST
ಬೆಂಗಳೂರು : ಟಿಕೆಟ್ ಹಂಚಿಕೆ ವಿಚಾರದಲ್ಲಿ ಸೃಷ್ಟಿಯಾಗಿರುವ ಬಂಡಾಯವನ್ನು ಸಾಧ್ಯವಾದಷ್ಟು ಶಮನ ಮಾಡಿ. ಆದರೆ ಯಾರ ಹಠಕ್ಕೂ ಮಣಿಯಬೇಡಿ ಎಂದು ಬಿಜೆಪಿ ಹೈಕಮಾಂಡ್ ರಾಜ್ಯ ನಾಯಕರಿಗೆ ಖಡಕ್ ಸೂಚನೆ ನೀಡಿದೆ.
ಟಿಕೆಟ್ ವಂಚಿತರ ಪಕ್ಷ ತ್ಯಾಗ ಹಾಗೂ ಬಹಿರಂಗ ಮಾತುಗಳ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಹೈಕಮಾಂಡ್ ಭಿನ್ನಮತ ಶಮನಕ್ಕಾಗಿ ರಾಜ್ಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಅವರನ್ನು ನಿಯೋಜಿಸಿದೆ. ಅದರ ಜತೆಗೆ ಸಚಿವ ಪ್ರಹ್ಲಾದ್ ಜೋಷಿ, ಸಿಎಂ ಬಸವರಾಜ ಬೊಮ್ಮಾಯಿ ಅವರಿಗೂ ಮಾತುಕತೆ ನಡೆಸುವಂತೆ ಸೂಚಿಸಿದೆ. ಆದರೆ ಹೈಕಮಾಂಡ್ ನಿರ್ಧಾರವನ್ನು ಯಾವುದೇ ಕಾರಣಕ್ಕೂ ಬದಲಾಯಿಸುವುದಕ್ಕೆ ಸಾಧ್ಯವಿಲ್ಲ. ಹೀಗಾಗಿ ಬೆದರಿಕೆಗೆ ಮಣಿಯಬೇಡಿ. ಪರಿಣಾಮವನ್ನು ಎದುರಿಸುವ ಶಕ್ತಿ ಪಕ್ಷಕ್ಕೆ ಇದೆ ಎಂದು ಸಂದೇಶ ರವಾನಿಸಿದ್ದಾರೆ.
ಪಕ್ಷದಲ್ಲಿ ಬಂಡಾಯ ಹೆಚ್ಚುತ್ತಿದ್ದರೂ ಸಿಎಂ ಬೊಮ್ಮಾಯಿ ಟೆಂಪಲ್‌ರನ್‌ನಲ್ಲಿ ಬ್ಯುಸಿಯಾಗಿದ್ದು, ವರಿಷ್ಠರ ಕೋಪಕ್ಕೂ ಕಾರಣವಾಗಿದೆ. ಕಠಿಣ ಸಂದರ್ಭದಲ್ಲಿ ಜವಾಬ್ದಾರಿ ಹೊರುವುದಕ್ಕೆ ಹಿಂದೇಟು ಹಾಕಿದ ಬಗ್ಗೆ ಕೆಲ ರಾಜ್ಯ ನಾಯಕರು ಸಹಪ್ರಭಾರಿ ಮನ್ಸೂಖ್ ಮಾಂಡವೀಯ ಅವರಿಗೆ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ನಿಭಾಯಿಸುವಂತೆ ವರಿಷ್ಠರು ಸೂಚನೆ ನೀಡಿದ ಹಿನ್ನೆಲೆಯಲ್ಲಿ ಅವರು ಶೆಟ್ಟರ್ ಜತೆ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.
ಅದೇ ರೀತಿ ವಿಧಾನಸಭಾ ಟಿಕೆಟ್ ನೀಡುವಂತೆ ಸಂಸದ ಸಂಗಣ್ಣ ಕರಡಿ ಪಟ್ಟು ಹಿಡಿದಿದ್ದಾರೆ. ಕಳೆದ ಬಾರಿ ಅವರು ತಮ್ಮ ಪುತ್ರನಿಗೆ ಇದೇ ರೀತಿ ಹಠ ಮಾಡಿ ಟಿಕೆಟ್ ಪಡೆದಿದ್ದರು. ತಮಗೆ ಈ ಬಾರಿ ಅವಕಾಶ ನೀಡದೇ ಇದ್ದರೆ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂಬ ಅವರ ಬೆದರಿಕೆಗೆ ಸೊಪ್ಪು ಹಾಕದಂತೆ ವರಿಷ್ಠರು ಸೂಚನೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್ ಜಾರಕಿಹೊಳಿ
Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್ ಟೀಕೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.