ಲಸಿಕೆ ವಿಷಯದಲ್ಲಿ ರಾಜಕೀಯ ಬೇಡ, ಎಲ್ಲ ಅರ್ಹರಿಗೂ ವ್ಯಾಕ್ಸಿನ್ ಹಾಕಿಸಿ : ಸಿದ್ದರಾಮಯ್ಯ


Team Udayavani, May 11, 2021, 1:50 PM IST

tregfd

ಬೆಂಗಳೂರು : ಕೋವಿಡ್ ಲಸಿಕೆ ವಿಚಾರದಲ್ಲಿ ರಾಜಕೀಯ ಮಾಡದೆ ಎಲ್ಲ ಅರ್ಹರಿಗೂ ಲಸಿಕೆ ಹಾಕುವ ಮೂಲಕ ರಾಜ್ಯದ ಜನರನ್ನು ಕಾಪಾಡಬೇಕೆಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಸಿದ್ದರಾಮಯ್ಯ ಅವರು, ಮುಂದಿನ ಕೆಲವು ತಿಂಗಳಲ್ಲಿ ಮೂರನೇ ಅಲೆ ಪ್ರಾರಂಭವಾಗುತ್ತದೆಂದು ತಜ್ಞರು ಹೇಳುತ್ತಿದ್ದಾರೆ. ಆದ್ದರಿಂದ ಒಂದೆರಡು ತಿಂಗಳಲ್ಲಿ ಸಂಪೂರ್ಣ ಲಸಿಕೆ ಹಾಕಿಸಿ ಮುಗಿಸಬೇಕು. ಲಸಿಕೆಗಳನ್ನು ಕೇಂದ್ರದಿಂದಾದರೂ ಪಡೆಯಬೇಕು ಇಲ್ಲ ರಾಜ್ಯದಲ್ಲೇ ಉತ್ಪಾದಿಸಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಪತ್ರದ ಸಾರಾಂಶ ಹೀಗಿದೆ : ಕರ್ನಾಟಕದಲ್ಲಿ 18 ವರ್ಷ ತುಂಬಿದವರು 4,37,80,330 ಜನರಿದ್ದಾರೆ. ಆದರೆ ಇದುವರೆಗೆ ಎರಡೂ ಡೋಸ್ ಲಸಿಕೆ ನೀಡಿರುವುದು ಕೇವಲ 1777751 ಜನರಿಗೆ ಮಾತ್ರ. ಅಂದರೆ ಕೇವಲ ಶೇ. 4.06 ರಷ್ಟು ಜನರಿಗೆ ಮಾತ್ರ ಲಸಿಕೆ ನೀಡಲಾಗಿದೆ ಎಂದರ್ಥ. ಇದರಲ್ಲಿ ರಾಜ್ಯದಲ್ಲಿ 685327 ಜನ ಹೆಲ್ತ್ ಕೇರ್ ಕಾರ್ಯಕರ್ತರಿಗೆ ಮೊದಲ ಡೋಸ್ ನೀಡಲಾಗಿದೆ. ಆದರೆ ಎರಡನೇ ಡೋಸ್ ನೀಡಿರುವುದು ಕೇವಲ 439162 ಜನರಿಗೆ ಮಾತ್ರ. 440302 ಜನ ಫ್ರಂಟ್ ಲೈನ್ ಕಾರ್ಯಕರ್ತರಿಗೆ ಮೊದಲ ಡೊಸ್ ನೀಡಲಾಗಿದ್ದರೆ, ಎರಡನೆ ಡೋಸ್ ನೀಡಿರುವುದು ಕೇವಲ 167581 ಜನರಿಗೆ ಮಾತ್ರ.
60 ವರ್ಷ ತುಂಬಿದವರಲ್ಲಿ 841056 ಜನರಿಗೆ ಎರಡನೇ ಡೋಸ್ ನೀಡಲಾಗಿದೆ. 44 ರಿಂದ 59 ವರ್ಷದ ಒಳಗೆ ಇರುವವರಿಗೆ 329952 ಜನರಿಗೆ ಮಾತ್ರ ಎರಡನೆ ಡೋಸ್ ಲಸಿಕೆ ನೀಡಲಾಗಿದೆ. ಮೊದಲ ಡೋಸ್ ಅನ್ನು ಎಷ್ಟೇ ಜನರಿಗೆ ನೀಡಿದ್ದರೂ ಸಹ ನಿಗಧಿತ ಸಮಯದಲ್ಲಿ ಎರಡನೆ ಲಸಿಕೆ ನೀಡದಿದ್ದರೆ ಲಸಿಕೆ ಉಪಯೋಗಕ್ಕೆ ಬರುವುದಿಲ್ಲ ಎಂದು ತಜ್ಞರು ಹೇಳುತ್ತಿದ್ದಾರೆ.

ಹಾಗಾಗಿ ಅವಧಿ ಮೀರುವ ಮೊದಲೇ ಎರಡನೆ ಡೋಸನ್ನು ಶೀಘ್ರವಾಗಿ ನೀಡಬೇಕು. 18 ರಿಂದ 45 ರ ವಯೋಮಾನದವರಲ್ಲಿ ಇದುವರೆಗೆ ಕೇವಲ 5759 ಜನರಿಗೆ ಮಾತ್ರ ಮೊದಲ ಡೋಸ್ ಲಸಿಕೆಯನ್ನು ನೀಡಲಾಗಿದೆ. ಕೋವಿಡ್ ಎರಡನೇ ಅಲೆಯಲ್ಲಿ ಹೆಚ್ಚು ಬಾಧಿತರಾಗಿ ಸಾವು ನೋವುಗಳಿಗೆ ಗುರಿಯಾಗುತ್ತಿರುವವರಲ್ಲಿ ಯುವಕರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಈ ಯುವ ಸಮುದಾಯಕ್ಕೆ ಯುದ್ಧೋಪಾದಿಯಲ್ಲಿ ಲಸಿಕೆಯನ್ನು ನೀಡಬೇಕಾಗಿದೆ.

ಕೇಂದ್ರ ಸರ್ಕಾರ ಯುವ ಜನತೆಗೆ ಲಸಿಕೆ ನೀಡುವ ವಿಚಾರದಲ್ಲೂ ಭೀಕರ ರಾಜಕಾರಣ ಮಾಡುತ್ತಿದೆ. ಗುಜರಾತು, ಉತ್ತರ ಪ್ರದೇಶ ಮುಂತಾದ ರಾಜ್ಯಗಳ ಯುವಕರಿಗೆ ವ್ಯಾಪಕ ಪ್ರಮಾಣದಲ್ಲಿ ಲಸಿಕೆ ಹಾಕಲಾಗುತ್ತಿದೆ. ಆದರೆ ರಾಜ್ಯದಲ್ಲಿ ಬೆರಣಿಕೆಯಷ್ಟು ಜನರಿಗೆ ಮಾತ್ರ ನೀಡಲಾಗಿದೆ. ಕೇಂದ್ರ ಮಾಡುತ್ತಿರುವ ಅವೈಜ್ಞಾನಿಕ ಕ್ರಮಗಳಿಂದಾಗಿ ದೇಶದ ಜನ ಭಾರಿ ಗಂಡಾಂತರ ಎದುರಿಸಬೇಕಾಗಿದೆ. ದೇಶದ ಯಾವುದೋ ಒಂದು ಭಾಗದ ಜನರಿಗೆ ಲಸಿಕೆ ನೀಡಿ ಉಳಿದವರು ವಂಚಿತರಾದರೆ ವೈರಸ್ಸಿನಲ್ಲಿ ಮ್ಯುಟೇಶನ್ನುಗಳಾಗಿ ಕಡೆಗೆ ಅದು ಲಸಿಕೆಗಳಿಗೂ ಪ್ರತಿರೋಧ ಬೆಳೆಸಿಕೊಂಡರೆ ಹಾಕುವ ಲಸಿಕೆಗಳೂ ಸಹ ನಿರುಪಯುಕ್ತವಾಗುತ್ತವೆ ಎಂದು ತಜ್ಞರು ಎಚ್ಚರಿಕೆ ನೀಡುತ್ತಿದ್ದಾರೆ. ಹೀಗಾದರೆ ಲಸಿಕೆ ಹಾಕಿಸಿಕೊಂಡವರೂ ಸಹ ಭೀಕರ ಗಂಡಾಂತರಕ್ಕೆ ತುತ್ತಾಗುತ್ತಾರೆ.

ನಮ್ಮ ದೇಶದ ಪ್ರಸ್ತುತ ಆಡಳಿತ ನಡೆಸುತ್ತಿರುವವರು ಕಾರ್ಪೊರೇಟ್ ಕಂಪೆನಿಗಳಿಗೆ ಅಡಿಯಾಳುಗಳಂತೆ ವರ್ತಿಸುತ್ತಿದ್ದಾರೆ. ಆದ್ದರಿಂದಲೇ ಲಸಿಕೆ ದರವನ್ನು 150, 300, 400, 600 ರೂಗಳೆಂದು ವ್ಯಾಪಾರಕ್ಕಿಡಲಾಗಿದೆ. ತಾರತಮ್ಯಕರವಾದ ಈ ಬೆಲೆಗಳನ್ನು ಕೇಂದ್ರ ಸರ್ಕಾರವೇ ನಿಗಧಿ ಮಾಡುತ್ತಿದೆ. ಇದನ್ನು ನೋಡಿದರೆ ಕೇಂದ್ರದಲ್ಲಿರುವ ಬಿ ಜೆ ಪಿ ಸರ್ಕಾರ ಅಂಗಡಿ ನಡೆಸುತ್ತಿದೆಯೇ ಎಂಬ ಅನುಮಾನ ಬರುತ್ತಿದೆ. ಕುರಿತು ಸರ್ವೋಚ್ಛ ನ್ಯಾಯಾಲಯ ಕೂಡ ಆಕ್ಷೇಪ ವ್ಯಕ್ತಪಡಿಸುತ್ತಿದೆ.

ದೇಶದ ಎಲ್ಲ ಜನರಿಗೆ ಏಕ ಕಾಲದಲ್ಲಿ ಸಮರೋಪಾದಿಯಲ್ಲಿ ಉಳಿದ ಎರಡು ತಿಂಗಳಲ್ಲಿ ಲಸಿಕೆ ಹಾಕಿ ಮುಗಿಸಬೇಕು. ಹೀಗೆ ಮಾಡಬೇಕಾದರೆ ಲಸಿಕೆ ಉತ್ಪಾದನೆ ಹೆಚ್ಚಬೇಕು. ಹಾಗಾಗಬೇಕಾದರೆ ಸಮರ್ಥವಾಗಿರುವ ಹತ್ತಾರು ಕಂಪೆನಿಗಳನ್ನು ಆಯ್ಕೆ ಮಾಡಿ ಈಗ ಸಿದ್ಧಪಡಿಸಿರುವ ಲಸಿಕೆ ತಯಾರಿಕೆಯ ಪ್ರೋಟೋಕಾಲನ್ನು, ನಿಯಮಗಳನ್ನು ಎಲ್ಲರಿಗೂ ನೀಡಿ ಸೂಕ್ತವಾದ ಬ್ರಿಡ್ಜ್ ಟ್ರಯಲ್ ನಡೆಸಿ ಮನೆ ಮನೆಗೆ ತೆರಳಿ ಆಂದೋಲನದ ರೀತಿಯಲ್ಲಿ ಲಸಿಕೆ ನೀಡಬೇಕು. ಎರಡು ಕಂಪೆನಿಗಳು ತಿಂಗಳಿಗೆ ಹತ್ತು ಕೋಟಿ ಲಸಿಕೆಗಳನ್ನು ತಯಾರಿಸಿದರೆ, ಇಪ್ಪತ್ತು ಕಂಪೆನಿಗಳು ನೂರು ಕೋಟಿ ಲಸಿಕೆ ತಯಾರಿಸಬಲ್ಲವು. ಮಹಾರಾಷ್ಟ್ರ ಈಗಾಗಲೆ ಕೋವ್ಯಾಕ್ಸಿನ್ ಲಸಿಕೆಯನ್ನು ರಾಜ್ಯ ಸರ್ಕಾರದ ಅಧೀನದಲ್ಲಿರುವ ಕಂಪೆನಿಗಳ ಮೂಲಕ ಉತ್ಪಾದನೆಯಲ್ಲಿ ತೊಡಗಿದೆ ಎಂಬ ವರದಿಗಳಿವೆ. ಕರ್ನಾಟಕವೂ ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕೆಂದು ಒತ್ತಾಯಿಸುತ್ತೇನೆ.

ಕೋವಿಡ್ ನಿಯಂತ್ರಣದಲ್ಲೂ ಮುಂಬೈ ಮಾದರಿಯನ್ನು ಸರ್ವೋಚ್ಛ ನ್ಯಾಯಾಲಯವು ಶ್ಲಾಘಿಸಿದೆ. ಅದರ ಕುರಿತೂ ಕೂಡ ರಜ್ಯ ಸರ್ಕಾರ ಸೂಕ್ತ ತಿಳುವಳಿಕೆ ಪಡೆದುಕೊಳ್ಳುವುದು ಸೂಕ್ತ. 18 ವರ್ಷ ತುಂಬಿದವರಿಗೆ ಲಸಿಕೆ ಹಾಕಲು ಆನ್ ಲೈನ್ ಮುಖಾಂತರ ನೋಂದಾಯಿಸಿಕೊಳ್ಳಬೇಕೆಂಬ ನಿಯಮವನ್ನು ರದ್ದು ಪಡಿಸಬೇಕು. ಹೀಗೆ ಮಾಡಿದರೆ ಕಾರ್ಮಿಕರು, ಬಡವರು ಲಸಿಕೆಗಳಿಂದ ವಂಚಿತರಾಗುತ್ತಾರೆ. ಇದುವರೆಗೂ ಮಾಡುತ್ತಿದ್ದಂತೆ ಸ್ಥಳದಲ್ಲಿಯೇ ನೋಂದಾಯಿಸಿಕೊಂಡು ಲಸಿಕೆ ಹಾಕುವುದೇ ಉತ್ತಮ .

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.