Karnataka: ಗೃಹಜ್ಯೋತಿಗೆ 2ನೇ ದಿನ ದುಪ್ಪಟ್ಟು ನೋಂದಣಿ!
Team Udayavani, Jun 20, 2023, 7:19 AM IST
ಬೆಂಗಳೂರು: “ಗೃಹಜ್ಯೋತಿ” ಸೌಲಭ್ಯಕ್ಕಾಗಿ ಸೋಮವಾರ ರಾಜ್ಯಾದ್ಯಂತ ಜನ ಮುಗಿಬಿದ್ದಿದ್ದು, 2ನೇ ದಿನ ಅರ್ಜಿ ಸಲ್ಲಿಸುವವರ ಸಂಖ್ಯೆ ದುಪ್ಪಟ್ಟಾಗಿದೆ!
ಮೊದಲ ದಿನವಾದ ರವಿವಾರ 55 ಸಾವಿರ ಜನ ಸೇವಾ ಸಿಂಧು ಪೋರ್ಟಲ್ನಲ್ಲಿ ಹೆಸರು ನೋಂದಾಯಿಸಿಕೊಂಡಿದ್ದರು. ಎರಡನೇ ದಿನ 1.06 ಲಕ್ಷ ಗ್ರಾಹಕರು ನೋಂದಣಿ ಮಾಡಿಕೊಂಡಿದ್ದಾರೆ. ಇದರೊಂದಿಗೆ ಒಟ್ಟಾರೆ ಯೋಜನೆ ಅಡಿ ಅರ್ಜಿ ಸಲ್ಲಿಸಿದವರ ಸಂಖ್ಯೆ 1.61 ಲಕ್ಷ ಆಗಿದೆ. ಏಕಕಾಲದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಅರ್ಜಿ ಸಲ್ಲಿಕೆಗೆ ಮುಂದಾಗಿದ್ದರಿಂದ ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ ಸೇರಿ ಉಪನಗರಗಳ ಆನ್ಲೈನ್ ಕೇಂದ್ರಗಳು ಜನರಿಂದ ತುಂಬಿತುಳುಕುತ್ತಿದ್ದವು.
ಈ ಮಧ್ಯೆ ರಾಜ್ಯಾದ್ಯಂತ ಏಕಕಾಲದಲ್ಲಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ನಡೆಯುತ್ತಿರುವುದರಿಂದ ಸರ್ವರ್ ಆಗಾಗ್ಗೆ ಕೈಕೊಡುತ್ತಿತ್ತು. ಬೆಳಗ್ಗೆ ಬಂದವರಿಗೆ ಮಧ್ಯಾಹ್ನ ಪಾಳಿ ಸಿಕ್ಕಿತು. ಹಲವೆಡೆ ಬೇಗ ಈ ಪ್ರಕ್ರಿಯೆ ಪೂರ್ಣಗೊಳ್ಳುತ್ತಿತ್ತು.
ನೋಂದಣಿ ಪ್ರಕ್ರಿಯೆಗೆ ಯಾವುದೇ ಗಡುವು ನಿಗದಿಪಡಿಸಿಲ್ಲ. ಆದ್ದರಿಂದ ಗ್ರಾಹಕರು ಆತಂಕಪಡುವ ಅಗತ್ಯವಿಲ್ಲ. ತಮ್ಮ ಹತ್ತಿರದ ಕರ್ನಾಟಕ ಒನ್, ಗ್ರಮ ಒನ್ ಅಥವಾ ಬೆಂಗಳೂರು ಒನ್ ಕೇಂದ್ರಗಳಲ್ಲಿ ನೋಂದಣಿ ಮಾಡಿಸಿಕೊಳ್ಳಬಹುದು. ಖುದ್ದಾಗಿ ಸೇವಾ ಸಿಂಧು ಪೋರ್ಟಲ್ http://sevasindhugs.karnataka.gov.in ಮೂಲಕವೂ ನೋಂದಣಿ ಮಾಡಿಕೊಳ್ಳಬಹುದು ಎಂದು ಇಂಧನ ಇಲಾಖೆ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
Congress ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ದೇಶದ ಇತಿಹಾಸದ ಒಂದು ಐತಿಹಾಸಿಕ ಕಾರ್ಯಕ್ರಮ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.