ಡಾ.ಜಿ.ಪರಮೇಶ್ವರ್ ಬೆಂಗಳೂರು ಪುಲಿಕೇಶಿನಗರ ದಿಂದ ಸ್ಪರ್ಧೆ ಸುಳ್ಳು ಸುದ್ದಿ
Team Udayavani, Feb 8, 2022, 11:50 AM IST
ಕೊರಟಗೆರೆ: ಶಾಸಕರು ಹಾಗೂ ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಬೆಂಗಳೂರು ಪುಲಿಕೇಶಿನಗರ ವಿಧಾನ ಸಭಾ ಕ್ಷೇತ್ರದಿಂದ ಸ್ಪರ್ಧೆ ಎಂಬುದು ಸತ್ಯಕ್ಕೆ ದೂರವಾದ ಸುಳ್ಳು ಸುದ್ದಿಯಾಗಿದ್ದು, ಅವರು ಮುಂದಿನ ಚುನಾವಣೆಯಲ್ಲಿ ಕೊರಟಗೆರೆ ವಿಧಾನಸಭಾ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುವುದು ಖಚಿತ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಅರಕೆರೆಶಂಕರ್ ಮತ್ತು ಕೊಡ್ಲಹಳ್ಳಿ ಅಶ್ವತ್ಥ ನಾರಾಯಣ್ ತಿಳಿಸಿದ್ದಾರೆ.
ಸುದ್ದಿಗಾರರೋಂದಿಗೆ ಮಾತನಾಡಿದ ಅವರು ಇತ್ತೀಚೆಗೆ ಕೆಲ ಸುದ್ದಿ ವಾಹಿನಿಗಳಲ್ಲಿ ಕೊರಟಗೆರೆ ಕ್ಷೇತ್ರದ ಶಾಸಕರು ಹಾಗೂ ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರರವರು ಮುಂದಿನ 2023 ರ ವಿಧಾನಸಭಾ ಚುನಾವಣೆಯಲ್ಲಿ ಬೆಂಗಳೂರು ಪುಲಿಕೇಶಿ ನಗರ ವಿಧಾನ ಸಭಾ ಕ್ಷೇತ್ರದಿಂದ ಸ್ಪರ್ಧಿಸುತಾರೆ ಎಂಬ ಊಹಾಪೋಹಗಳ ಸುಳ್ಳು ಸುದ್ದಿಗಳು ಪ್ರಸಾರವಾಗುತ್ತಿದೆ. ಈ ಸುದ್ದಿ ಸತ್ಯಕ್ಕೆ ದೂರವಾಗಿದ್ದು ಡಾ.ಜಿ.ಪರಮೇಶ್ವರ್ ರವರು ಕಳೆದ ಜನವರಿ 25 ರಿಂದ ಕೋವಿಡ್ ನಿಂದ ಚಿಕಿತ್ಸೆ ಪಡೆಯುತ್ತಾ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ, ಅವರು ಯಾರೊಬ್ಬ ರಾಜಕೀಯ ವ್ಯಕ್ತಿಗಳನ್ನಾಗಲಿ ಸಾರ್ವಜನಿಕರನ್ನಾಗಲಿ ಭೇಟಿ ಮಾಡಿಲ್ಲ, ಆದರೆ ಸುದ್ದಿವಾಹಿನಿಗಳಲ್ಲಿ ಬೇರೆ ತರಹದ ಸುಳ್ಳು ಸುದ್ದಿಗಳು ಪ್ರಸಾರವಾಗುತ್ತಿರುವುದು ವಿಷಾದನೀಯವಾಗಿದ್ದು ಪಕ್ಷದ ಮುಖಂಡರು, ಕಾರ್ಯಕರ್ತರು ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.
ಕೊರಟಗೆರೆ ಕ್ಷೇತ್ರದಿಂದಲೇ ಸ್ಪರ್ಧೆ ಖಚಿತ
ಶಾಸಕ ಡಾ.ಜಿ.ಪರಮೇಶ್ವರ್ ರವರು ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ದಿ ಕೆಲಸಗಳನ್ನು ಮಾಡಿದ್ದು ಕಳೆದ ನಾಲ್ಕು ವರ್ಷಗಳಿಂದ ಕ್ಷೇತ್ರದ ಜನತೆಯೊಂದಿಗೆ ಜನರ ಕಷ್ಟಗಳಿಗೆ ಸದಾ ಸ್ಪಂದಿಸುತ್ತಿದ್ದು ಕೊರೋನಾ ಸಂದರ್ಭದಲ್ಲಿ ಕ್ಷೇತ್ರದಲ್ಲಿ ಶಾಸಕರು ತಮ್ಮ ವೈದ್ಯಕೀಯ ಆಸ್ಪತ್ರೆಯ ವೈದ್ಯರನ್ನು ಮನೆ ಮನೆಗೆ ಬೇಟಿ ನೀಡಿ ಪ್ರತಿಯೊಬ್ಬರಿಗೂ ಚಿಕಿತ್ಸೆ ನೀಡುವ ಮೂಲಕ ಅವರು ತೆಗೆದುಕೊಂಡ ಸೇವೆಗಳು ಮತ್ತು ಕ್ರಮಗಳು ರಾಜ್ಯಕ್ಕೆ ಮಾದರಿಯಾಗಿದೆ ಎಂದು ಹೇಳಿದರು.
ಕೋವಿಡ್ 3ನೇ ಅಲೆ ಸಂದರ್ಭದಲ್ಲೂ ಸಹ ಜನಪರ ಅನೇಕ ಅಭಿವೃದ್ದಿ ಕೆಲಸಗಳಿಗೆ ಸ್ಪಂದಿಸುತ್ತಾ ಸದಾ ಕ್ಷೇತ್ರದ ಜನತೆಯೊಂದಿಗಿದ್ದು ಈಗ ಕೋವಿಡ್ ನಿಂದ ವಿಶ್ರಾಂತಿ ಪಡೆಯುತ್ತಿರುವ ಶಾಸಕರಿಗೆ ಈ ಸುಳ್ಳು ಸುದ್ದಿ ಮನಸ್ಸಿಗೆ ನೋವುಂಟು ಮಾಡಿದ್ದು ಅತ್ಯಂತ ಬೇಸರ ತಂದಿದೆ. ಡಾ.ಜಿ.ಪರಮೇಶ್ವರ ರವರು ಯಾವುದೇ ಕಾರಣಕ್ಕೂ ಕೊರಟಗೆರೆ ವಿಧಾನ ಸಭಾ ಕ್ಷೇತ್ರವನ್ನು ತೊರೆಯವ ಆಲೋಚನೆಯನ್ನು ಕನಸಿನಲ್ಲೂ ಮಾಡದ ಶಾಸಕರು 2023 ರ ವಿಧಾನ ಸಭಾ ಚುನಾವಣೆಯಲ್ಲಿ ಕೊರಟಗೆರೆ ವಿಧಾನ ಸಭಾ ಕ್ಷೇತ್ರದಿಂದಲೇ ಸ್ಪರ್ಧಿಸುತ್ತಾರೆ ಎಂದರು.
ಕ್ಷೇತ್ರದಲ್ಲಿ ನಡೆದಿರುವ ಹಾಗೂ ನಡೆಯುತ್ತಿರುವ ಅಭಿವೃದ್ದಿ ಕೆಲಸಗಳನ್ನು ಹಾಗೂ ಜನಪ್ರಿಯತೆಯನ್ನು ಸಹಿಸದ ವಿರೋಧಿಗಳು ಸುಳ್ಳು ಸುದ್ದಿಗಳನ್ನು ಹರಿಸುತ್ತಿದ್ದಾರೆ. ಈ ಬಗ್ಗೆ ಕ್ಷೇತ್ರದ ಜನತೆ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು, ಅಭಿಮಾನಿಗಳು ಆತಂಕ ಪಡುವ ಅಗತ್ಯವಿಲ್ಲ ಡಾ.ಜಿ.ಪರಮೇಶ್ವರ್ ರವರು ಕೊರಟಗೆರೆ ಕ್ಷೇತ್ರ ಹಾಗೂ ತುಮಕೂರು ಜಿಲ್ಲೆಯನ್ನು ಜನ್ಮಭೂಮಿಯೆಂದು ಭಾವಿಸಿದ್ದು, ಅವರ ಸೇವೆ ತುಮಕೂರು ಜಿಲ್ಲೆ ಹಾಗೂ ಕೊರಟಗೆರೆ ಕ್ಷೇತ್ರಕ್ಕೆ ಮೀಸಲಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ
Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು
ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.