“ತನುಜಾ” ಸಿನಿಮಾ ಅಖಾಡಕ್ಕೆ ಸಚಿವ ಡಾ.ಸುಧಾಕರ್ ಎಂಟ್ರಿ .!
ಮಾಜಿ ಸಿಎಂ ಯಡಿಯೂರಪ್ಪ ನಟಿಸಿರುವ ನೈಜ ಘಟನೆಯಾಧಾರಿತ ಸಿನಿಮಾ
Team Udayavani, Apr 7, 2022, 3:48 PM IST
ಬೆಂಗಳೂರು: ನೈಜ ಘಟನೆಯಾಧಾರಿತ ‘ತನುಜಾ’ ಸಿನಿಮಾದ ಕಥೆಗೆ ಮನಸೋತು ಇತ್ತೀಚಗಷ್ಟೇ ಮಾಜಿ ಸಿಎಂ ಯಡಿಯೂರಪ್ಪನವರು ನಟಿಸಿ ದೇಶದಾದ್ಯಂತ ಸುದ್ದಿಯಾಗಿದ್ದು ಎಲ್ಲರಿಗೂ ತಿಳಿದಿರುವ ಸಂಗತಿ. ಇದೀಗ ಸಚಿವ ಡಾ.ಕೆ ಸುಧಾಕರ್ ಅವರು ಈ ಸಿನಿಮಾದಲ್ಲಿ ನಟನೆ ಮಾಡಿ ಅಧಿಕೃತವಾಗಿ ಸ್ಯಾಂಡಲ್ ವುಡ್ ಅಂಗಳಕ್ಕೆ ಎಂಟ್ರಿ ಪಡೆದಿದ್ದಾರೆ.
ಈ ಹಿಂದೆ ತನುಜಾ ಎನ್ನುವ ಹೆಣ್ಣುಮಗಳು ಕೋವಿಡ್ ಸಂದರ್ಭದಲ್ಲಿ ಪರೀಕ್ಷೆ ಬರೆಯಲಾಗದೇ ಸಹಾಯ ಕೋರಿದ ಸಂದರ್ಭದಲ್ಲಿ ಅಂದಿನ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ , ಸಚಿವ ಡಾ.ಕೆ ಸುಧಾಕರ್, ಹಿರಿಯ ಪತ್ರಕರ್ತ ವಿಶ್ವೇಶ್ವರ ಭಟ್ ಹಾಗೂ ಪ್ರದೀಪ್ ಈಶ್ವರ್ ಇನ್ನಿತರ ಸಹಾಯದಿಂದ ಪರೀಕ್ಷೆ ಬರೆದು ವೈದ್ಯಕೀಯ ಸೀಟು ಪಡೆದಿದ್ದು ಎಲ್ಲರ ಹುಬ್ಬೇರಿಸಿತ್ತು, ಅಷ್ಟೇ ಅಲ್ಲದೆ ಆ ನೈಜ ಘಟನೆಯಾಧಾರಿತ ವರದಿ ಆಧರಿಸಿ ಸಿನಿಮಾ ಕೂಡ ಸೆಟ್ಟೇರಿದ್ದು ಆ ಸಿನಿಮಾಗೆ ತನುಜಾ ಎಂದು ನಾಮಕರಣ ಮಾಡಿದ್ದರು.
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ಕೂಡ ತಮ್ಮ ಪಾತ್ರಕ್ಕೆ ತಾವೇ ನಟಿಸಿ ಸೈ ಎನಿಸಿಕೊಂಡಿದ್ದರು. ಇದೀಗ ಸಚಿವರಾದ ಡಾ.ಕೆ ಸುಧಾಕರ್ ಅವರು ಕೂಡ ಇಂದು ಅವರ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಅನುಭವಿ ಕಲಾವಿದರ ರೀತಿ ತಮ್ಮ ಪಾತ್ರಕ್ಕೆ ನ್ಯಾಯ ಒದಗಿಸಿದ್ದು ಅದ್ಭುತವಾಗಿ ನಟಿಸಿದ್ದಾರೆ ಜೊತೆಗೆ ತಮ್ಮ ಪಾತ್ರಕ್ಕೆ ತಾವೇ ಡಬ್ ಮಾಡಿದ್ದು ವಿಶೇಷವಾಗಿದ್ದು, ಒಂದೇ ಟೇಕಿಗೆ ತಮ್ಮ ಭಾಗದ ಚಿತ್ರೀಕರಣ ಮುಗಿಸಿದ್ದು ಚಿತ್ರತಂಡದವರಿಗೆ ಖುಷಿ ಕೊಟ್ಟಿದೆ.
ಇನ್ನು ಈ ಚಿತ್ರಕ್ಕೆ ರಾಜ್ಯಪ್ರಶಸ್ತಿ ವಿಜೇತ ಹರೀಶ್ ಎಂ.ಡಿ ಹಳ್ಳಿಯವರ ನಿರ್ದೇಶನವಿದ್ದು, Beyond Visions Cinemas ಬಂಡವಾಳ ಹೂಡಿದೆ. ಈ ಚಿತ್ರವು ಶಿವಮೊಗ್ಗ ಸುತ್ತ ಮತ್ತ ಹಾಗೂ ಬೆಂಗಳೂರಿನ ಹಲವೆಡೆ ಚಿತ್ರೀಕರಣಗೊಂಡಿದೆ.
ತಾರಾಗಣದಲ್ಲಿ ರಾಜೇಶ್ ನಟರಂಗ, ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಕಾಸರಗೋಡು ಖ್ಯಾತಿಯ ಸಪ್ತಾ ಪಾವೂರ್ , ಹಿರಿಯ ಪತ್ರಕರ್ತ ವಿಶ್ವೇಶ್ವರ ಭಟ್, ಸಂಧ್ಯಾ ಅರಕೆರೆ, ಕೈಲಾಶ್, ಬಾಲ ನಟಿ ಬೇಬಿ ಶ್ರೀ ಅಭಿನಯಿಸಿದ್ದು, ಪ್ರದ್ಯೋತನ ಸಂಗೀತ ನಿರ್ದೇಶನ ರವೀಂದ್ರನಾಥ್ ಹಾಗೂ ಮೋಹನ್.ಎಲ್ ರಂಗಕಹಳೆ ಅವರ ಛಾಯಾಗ್ರಹಣ, ಉಮೇಶ್ ಆರ್.ಬಿ ಸಂಕಲನವಿದ್ದು ಆರ್ ಚಂದ್ರಶೇಖರ್ ಪ್ರಸಾದ್ ಹಾಗೂ ಜೆ.ಎಂ ಪ್ರಹ್ಲಾದ್ ಸಂಭಾಷಣೆ, ರಘುನಂದನ್ ಎಸ್.ಕೆ ಕಾರ್ಯಕಾರಿ ನಿರ್ಮಾಪಕರು, ಸತೀಶ್ ಬ್ರಹ್ಮಾವರ್ ನಿರ್ಮಾಣ ನಿರ್ವಹಣೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
UI Movie: ಉಪ್ಪಿ ಯುಐ ಮೆಚ್ಚಿದ ಯಶ್
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
Max: ಇಂದು ಸುದೀಪ್ ಮ್ಯಾಕ್ಸ್ ತೆರೆಗೆ; ಆ್ಯಕ್ಷನ್ ಅಡ್ಡದಲ್ಲಿ ಕಿಚ್ಚ ಮಿಂಚು
OTT Release Date: ಸೂಪರ್ ಹಿಟ್ ʼಭೈರತಿ ರಣಗಲ್ʼ ಓಟಿಟಿ ರಿಲೀಸ್‌ಗೆ ಡೇಟ್ ಫಿಕ್ಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.