ಅಜೆಕಾರು ಪೇಟೆಯಲ್ಲಿ ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದೆ ಸಮಸ್ಯೆ


Team Udayavani, Mar 30, 2021, 1:55 AM IST

ಅಜೆಕಾರು ಪೇಟೆಯಲ್ಲಿ ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದೆ ಸಮಸ್ಯೆ

ಅಜೆಕಾರು: ಮರ್ಣೆ ಗ್ರಾ.ಪಂ. ವ್ಯಾಪ್ತಿಯ ಪ್ರಮುಖ ಪೇಟೆ ಅಜೆಕಾರಿನಲ್ಲಿ ಅಸಮರ್ಪಕ ಚರಂಡಿ ವ್ಯವಸ್ಥೆಯಿಂದಾಗಿ ಮಳೆ ನೀರು ರಾಜ್ಯ ಹೆದ್ದಾರಿಯಲ್ಲಿಯೇ ಹರಿಯುತ್ತದೆ. ಎರಡು ದಶಕಗಳ ಹಿಂದೆ ಸಣ್ಣ ಪೇಟೆಯಾಗಿದ್ದ ಅಜೆಕಾರಿನಲ್ಲಿ ಅಗಲ ಕಿರಿದಾದ ರಸ್ತೆ ಹಾಗೂ ಮೋರಿ ವ್ಯವಸ್ಥೆ ಇತ್ತು. ಆದರೆ ಪೇಟೆ ಬೆಳೆಯುತ್ತಿದಂತೆ ರಸ್ತೆಗಳು ವಿಸ್ತಾರವಾಗಿ ಮೋರಿಗಳು ನಾಪತ್ತೆಯಾದವು. ಇದರ ಬದಲಿಗೆ ಸೂಕ್ತ ಚರಂಡಿ ವ್ಯವಸ್ಥೆ ಮಾತ್ರ ಆಗಲಿಲ್ಲ.

ರಸ್ತೆಯ ಇಕ್ಕೆಲಗಳಲ್ಲಿ ಚರಂಡಿ ಇಲ್ಲದೆ ಇರುವು ದರಿಂದ ಮಳೆ ನೀರು ಸಂಪೂರ್ಣವಾಗಿ ರಸ್ತೆಯಲ್ಲಿಯೇ ಹರಿಯುವಂತಾಗಿದೆ.
2008ನೇ ಸಾಲಿನಲ್ಲಿ ಸುಮಾರು 100 ಮೀಟರ್‌ನಷ್ಟು ಭಾಗಕ್ಕೆ ಅಜೆಕಾರಿನಲ್ಲಿ ಚರಂಡಿ ನಿರ್ಮಾಣ ಮಾಡಲಾಗಿದ್ದು ಇದು ಪೇಟೆ ಮಧ್ಯ ಭಾಗದಲ್ಲಿದೆ. ಚರಂಡಿಯ ಎರಡು ಕಡೆ ನೀರು ಸರಾಗವಾಗಿ ಹರಿದು ಹೋಗಲು ಸೂಕ್ತ ವ್ಯವಸ್ಥೆ ಇಲ್ಲದೆ ಇರುವುದರಿಂದ ಈ ಚರಂಡಿಯಲ್ಲಿ ಮಳೆಗಾಲದಲ್ಲಿ ನೀರು ಶೇಖರಣೆಗೊಂಡು ಅನಂತರ ರಸ್ತೆ ಮುಖಾಂತರ ಹರಿಯುತ್ತದೆ. ಅಲ್ಲದೆ ಇದರಲ್ಲಿ ನೀರು ಶೇಖರಣೆಗೊಳ್ಳುವ ಜತೆಗೆ ಪ್ಲಾಸ್ಟಿಕ್‌ ಸಹಿತ ತ್ಯಾಜ್ಯಗಳು ಇದರಲ್ಲಿ ಸೇರಿಕೊಂಡು ಪರಿಸರ ದುರ್ನಾತ ಬೀರುತ್ತವೆ. ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗ ಹರಡಲು ಕಾರಣವಾಗುತ್ತಿದೆ.

ಮುಚ್ಚಿದ ಮೋರಿ
ಅಜೆಕಾರು ಮಾರುಕಟ್ಟೆ ರಸ್ತೆ ಅಭಿವೃದ್ಧಿ ಸಂದರ್ಭ ಈ ಭಾಗದಲ್ಲಿದ ಮೋರಿಯನ್ನು ಮುಚ್ಚಲಾಗಿದ್ದು ನೀರು ಹರಿಯದಂತಾಗಿದೆ. ಈ ಮೋರಿ ಮೂಲಕವೇ ಅಜೆಕಾರು ಪೇಟೆಯ ನೀರು ಸರಾಗವಾಗಿ ಹರಿಯುತ್ತಿತ್ತು. ಮೋರಿ ಇಲ್ಲದೆ ಇರುವುದರಿಂದ ಸಮಸ್ಯೆಗೆ ಕಾರಣವಾಗಿದೆ.

ಕಸದ ರಾಶಿ
ಈಗ ಇರುವ ಚರಂಡಿಯಲ್ಲಿ ಪ್ಲಾಸ್ಟಿಕ್‌ ಸಹಿತ ತ್ಯಾಜ್ಯಗಳ ರಾಶಿ ಇದ್ದು ಮಳೆ ಬರುವ ಸಂದರ್ಭ ಇದು ರಸ್ತೆಯ ಮೇಲೆಯೇ ಬಂದು ಬೀಳುತ್ತದೆ. ಪರಿಸರವಿಡೀ ತ್ಯಾಜ್ಯದಿಂದ ಆವೃತವಾಗುತ್ತದೆ. ಬೆಳೆಯುತ್ತಿರುವ ಅಜೆಕಾರು ಪೇಟೆ ತ್ಯಾಜ್ಯಮಯವಾಗುವುದು ಸ್ಥಳೀಯರಿಗೆ ಸಂಕಷ್ಟ ತಂದೊಡ್ಡಿದೆ.

ದಿನದಿಂದ ದಿನಕ್ಕೆ ಅಭಿವೃದ್ದಿಗೊಳ್ಳುತ್ತಿರುವ ಅಜೆಕಾರು ಪೇಟೆಗೆ ಸೂಕ್ತ ಚರಂಡಿ ವ್ಯವಸ್ಥೆ ತ್ವರಿತವಾಗಿ ಆಗಬೇಕಾಗಿದೆ. ಪೇಟೆಯಲ್ಲಿ ಇತ್ತೀಚಿನ ಕೆಲ ವರ್ಷಗಳಲ್ಲಿ ಹಲವು ವಾಣಿಜ್ಯ ಕಟ್ಟಡಗಳು, ವಸತಿ ನಿವೇಶನ, ಹೊಟೇಲ್‌, ಬೇಕರಿಗಳು ನಿರ್ಮಾಣವಾಗಿದ್ದು ಇದರ ತ್ಯಾಜ್ಯ ವಿಲೇವಾರಿಗೂ ಸಮಸ್ಯೆ ಆರಂಭವಾಗಿದ್ದು ಇದಕ್ಕೆ ಪರಿಹಾರ ಕಂಡುಕೊಳ್ಳಲು ಸ್ಥಳೀಯಾಡಳಿತ ಮುಂದಾಗಬೇಕು ಎಂದು ಸ್ಥಳೀಯರು ತಿಳಿಸುತ್ತಾರೆ.

ಆಗಬೇಕಿದೆ ಸಮಗ್ರ ಅಭಿವೃದ್ಧಿ
ಅಜೆಕಾರು ಪೇಟೆಯಿಂದ ಪಂಚಾಯತ್‌ ಕಟ್ಟಡದವರೆಗೆ, ಪೇಟೆಯಿಂದ ಚರ್ಚ್‌ ದ್ವಾರದ ವರೆಗೆ ಹಾಗೂ ಪೇಟೆಯಿಂದ ನೂಜಿವರೆಗೆ ರಸ್ತೆಯ ಇಕ್ಕೆಲಗಳಲ್ಲಿ ಚರಂಡಿ ನಿರ್ಮಾಣ, ಅಗತ್ಯ ಇರುವಲ್ಲಿ ಮೋರಿ ನಿರ್ಮಾಣದ ಕಾರ್ಯ ನಡೆದರೆ ಮಾತ್ರ ಅಜೆಕಾರಿನ ಪೇಟೆಯ ಸಮಗ್ರ ಅಭಿವೃದ್ಧಿ ಆಗಲು ಸಾಧ್ಯ. ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದಿದ್ದರೆ ಕೆಲವೇ ವರ್ಷಗಳಲ್ಲಿ ಬೃಹತ್‌ ವಾಣಿಜ್ಯ ಮಳಿಗೆ, ವಸತಿ ನಿವೇಶನಗಳ ತ್ಯಾಜ್ಯ ಎಲ್ಲೆಂದರಲ್ಲಿ ಹರಿದು ಪರಿಸರ ದುರ್ನಾತ ಬೀರುವ ಜತೆಗೆ ಪೇಟೆ ಸಮೀಪದಲ್ಲಿರುವ ತೆರೆದ ಬಾವಿಗಳ ನೀರು ಮಲಿನ ಆಗುವ ಭಯ ಸ್ಥಳೀಯರನ್ನು ಕಾಡುತ್ತಿದೆ.

ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಅಜೆಕಾರು ಪೇಟೆಯ ಅಭಿವೃದ್ಧಿಗೆ ತ್ವರಿತವಾಗಿ ಸೂಕ್ತ ಕ್ರಮ ಕೈಗೊಳ್ಳಬೇಕಿದೆ ಎಂದು ಸ್ಥಳೀಯರು ಮನವಿ ಮಾಡಿದ್ದಾರೆ.

ಚರಂಡಿಯಲ್ಲೇ ನೀರಿನ ಪೈಪ್‌
ಪೇಟೆಯಲ್ಲಿರುವ ಅಸಮರ್ಪಕ ಚರಂಡಿ ಯಲ್ಲಿಯೇ ಗ್ರಾಮ ಪಂಚಾಯತ್‌ನ ಕುಡಿಯುವ ನೀರು ಸರಬರಾಜಿನ ಪೈಪ್‌ ಲೈನ್‌ ಇದ್ದು ಚರಂಡಿಯಲ್ಲಿ ತುಂಬಿರುವ ಹೂಳನ್ನು ಸಮರ್ಪಕವಾಗಿ ತೆಗೆಯಲಾಗುತ್ತಿಲ್ಲ ಎಂದು ಸ್ಥಳೀಯರು ದೂರಿದ್ದಾರೆ. ಕುಡಿಯುವ ನೀರಿನ ಪೈಪ್‌ ಸ್ಥಳಾಂತರಗೊಳಿಸಿ ಈಗ ಇರುವ ಚರಂಡಿಯ ಹೂಳನ್ನು ಸಂಪೂರ್ಣ ತೆಗೆದು ಮಾರುಕಟ್ಟೆ ಬಳಿ ಹಾಗೂ ಅಜೆಕಾರು ಪೇಟೆ ಅಂಗನವಾಡಿ ಬಳಿ ಮೋರಿಯನ್ನು ಸುವ್ಯವಸ್ಥೆ ಮಾಡಿದಲ್ಲಿ ಸ್ವಲ್ಪ ಮಟ್ಟಿಗಾದರೂ ನೀರು ಹರಿದು ಹೋಗಲು ಸಾಧ್ಯ ಇದೆ ಎಂದು ಸ್ಥಳೀಯರು ಹೇಳುತ್ತಾರೆ.

ಹೆಚ್ಚಿನ ಅನುದಾನದ ಅಗತ್ಯ
ಪ್ರಸ್ತುತ ಇರುವ ಚರಂಡಿಯ ಹೂಳನ್ನು ಮಳೆಗಾಲದ ಮೊದಲು ತೆಗೆಯಲಾಗುತ್ತದೆ. ಪೇಟೆಯಲ್ಲಿ ಸಮರ್ಪಕ ಚರಂಡಿ ನಿರ್ಮಾಣಕ್ಕೆ ಹೆಚ್ಚಿನ ಅನುದಾನದ ಅಗತ್ಯ ಇರುವುದರಿಂದ ಪಂಚಾಯತ್‌ ಆಡಳಿತದೊಂದಿಗೆ ಚರ್ಚಿಸಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು.
– ತಿಲಕ್‌ರಾಜ್‌, ಪಿಡಿಒ, ಮರ್ಣೆ ಗ್ರಾ.ಪಂ.

ಸೂಕ್ತ ಕ್ರಮ
ಅಭಿವೃದ್ಧಿ ಪಥದಲ್ಲಿ ಮುನ್ನಡೆಯುತ್ತಿರುವ ಅಜೆಕಾರು ಪೇಟೆಯಲ್ಲಿ ಸುವ್ಯವಸ್ಥಿತವಾಗಿ ಚರಂಡಿ ನಿರ್ಮಾಣ ಮಾಡುವ ಬಗ್ಗೆ ಶಾಸಕ ಸುನಿಲ್‌ ಕುಮಾರ್‌ ಅವರ ಗಮನಕ್ಕೆ ತಂದು ಸೂಕ್ತ ಕ್ರಮ ಕೈಗೊಳ್ಳಲಾಗುವುದು.

– ಜ್ಯೋತಿ ಪೂಜಾರಿ, ಅಧ್ಯಕ್ಷರು, ಮರ್ಣೆ ಗ್ರಾಮ ಪಂಚಾಯತ್‌

– ಜಗದೀಶ್‌ ಅಂಡಾರು

ಟಾಪ್ ನ್ಯೂಸ್

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

owaisi (2)

Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು

farukh abdulla

Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

1-jmm

INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

25-kota

Kota: ಮರೆಯಾಗುತ್ತಿವೆ ಮೇಟಿ ಪೂಜೆ, ರಾಶಿ ಪೂಜೆ

17-katapady

Katapady: ಹಟ್ಟಿಗೊಬ್ಬರ ಖರೀದಿ ಹೆಸರಲ್ಲಿ ಮೋಸ!

14-malpe

Malpe: ನಿರಂತರ ರಜೆ: ಬೀಚ್‌ಗಳಲ್ಲಿ ಪ್ರವಾಸಿಗರ ದಟ್ಟಣೆ

Manipal: ಐಟಿ ಅಧಿಕಾರಿ ದಾಳಿ ಬೆದರಿಕೆ… ಕೆಲಸದಾಕೆಯಿಂದ ಮನೆಯ ಯಜಮಾನಿಗೆ ಮೋಸ

Manipal: ಐಟಿ ಅಧಿಕಾರಿ ದಾಳಿ ಬೆದರಿಕೆ… ಕೆಲಸದಾಕೆಯಿಂದ ಮನೆಯ ಯಜಮಾನಿಗೆ ಮೋಸ

Online Trading: ಉಡುಪಿ ಮೂಲದ ವ್ಯಕ್ತಿಗೆ 27 ಲಕ್ಷ ರೂ. ವಂಚನೆ

Online Trading: ಆನ್‌ಲೈನ್‌ ಲಿಂಕ್‌ ಅಪ್ಲಿಕೇಶನ್‌ ಬಳಸಿ 27 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

attack

Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ

1-reeee

Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.