ಕುಡಿಯುವ ನೀರು ಸಂಪರ್ಕ ಇನ್ನು ತುಂಬಾ ಸುಲಭ
ಇನ್ಮುಂದೆ ನೀರಿನ ಸಂಪರ್ಕ ಪಡೆಯಲು ಪ್ರಮಾಣ ಪತ್ರ, ಆಧಾರ್ ಸಂಖ್ಯೆ ಸಾಕು
Team Udayavani, Nov 29, 2022, 7:55 AM IST
ಬೆಂಗಳೂರು: ಇನ್ನು ಮುಂದೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕುಡಿಯುವ ನೀರು ಪೂರೈಕೆಯ ಸಂಪರ್ಕ ಪಡೆಯಲು ನಾನಾ ದಾಖಲೆ ಕೇಳಿ ಕಚೇರಿಗಳಿಗೆ ಅಲೆದಾಡಬೇಕಾಗಿಲ್ಲ. ಸ್ವಯಂ ಘೋಷಿತ ಪ್ರಮಾಣ ಪತ್ರ ಹಾಗೂ ಆಧಾರ್ ಸಂಖ್ಯೆ ಇದ್ದರೆ ಸಾಕಾಗಲಿದೆ.
ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕುಡಿಯುವ ನೀರು ಪೂರೈಕೆ ಸಂಪರ್ಕ ಸುಲಭವಾಗಿ ಪಡೆ ಯಲು ಅನುಕೂಲವಾಗುವಂತೆ ನಿಯಮಾವಳಿ ಸರಳಗೊಳಿಸಲು ಪೌರಾಡಳಿತ ಇಲಾಖೆ ತೀರ್ಮಾನಿಸಿದೆ. ಈ ಕುರಿತ ಪ್ರಸ್ತಾವನೆಯನ್ನು ಇಲಾಖೆ ಸಿದ್ಧಪಡಿಸಿದ್ದು, ಸದ್ಯದಲ್ಲೇ ಸಂಪುಟದ ಅನುಮತಿ ಪಡೆಯಲು ಮುಂದಾಗಿದೆ.
ಕುಡಿಯುವ ನೀರು ಪೂರೈಕೆ ಸಂಪರ್ಕ ಪಡೆಯಲು ಹಲವು ನಿಬಂಧನೆಗಳಿದ್ದು, ನಾನಾ ದಾಖಲೆ ಒದಗಿಸಲು ನಗರ ಸ್ಥಳೀಯ ಸಂಸ್ಥೆಗಳು ಕಡ್ಡಾಯ ಮಾಡಿವೆ. ಆದರೆ, ದಾಖಲೆ ಒದಗಿಸಲು ಮನೆ ಮಾಲಕರು, ಬಾಡಿಗೆದಾರರು ಸಮಸ್ಯೆ ಎದುರಿಸುತ್ತಿದ್ದಾರೆ. ಹೀಗಾಗಿ, ಸಾರ್ವಜನಿಕರಿಗೆ ಅನುಕೂಲವಾಗುವಂತೆ ನಿಯಮಾವಳಿ ಸರಳ ಗೊಳಿಸಲು ಪ್ರಸ್ತಾವನೆ ಸಿದ್ಧಪಡಿಸಲಾಗಿದೆ ಎಂದು ಪೌರಾಡಳಿತ ಇಲಾಖೆ ಮೂಲಗಳು ತಿಳಿಸಿವೆ.
ವಿಲೇವಾರಿಯಾಗದ ಅರ್ಜಿಗಳು
ರಾಜ್ಯದ ಪ್ರತಿ ಮನೆಗೆ ಶುದ್ಧ ಕುಡಿಯುವ ನೀರು ಪೂರೈಸಲು ನಗರಾಭಿವೃದ್ಧಿ ಇಲಾಖೆ ಹಾಗೂ ಪೌರಾಡಳಿತ ಇಲಾಖೆ ಹಲವು ಯೋಜನೆ ರೂಪಿಸಿದ್ದರೂ, ನೀರಿನ ಸಂಪರ್ಕ ಪಡೆಯಲು ಷರತ್ತು ವಿಧಿಸಿರುವುದರಿಂದ ಲಕ್ಷಾಂತರ ಅರ್ಜಿಗಳು ವಿಲೇವಾರಿ ಆಗುತ್ತಿಲ್ಲ. ಹೀಗಾಗಿ, ನಿಗದಿತ ಶುಲ್ಕ ಪಡೆದು ಸ್ವಯಂ ಘೋಷಣೆಯ ಪ್ರಮಾಣ ಪತ್ರ ಹಾಗೂ ಆಧಾರ್ ಸಂಖ್ಯೆ ಪಡೆದು ಸಂಪರ್ಕ ಕಲ್ಪಿಸಿದರೆ ನಗರ ಸ್ಥಳೀಯ ಸಂಸ್ಥೆಗಳಿಗೆ ನಿಶ್ಚಿತ ಆದಾಯವೂ ಬರಲಿದೆ ಎಂದು ಅಧಿಕಾರಿಗಳು ತಿಳಿಸುತ್ತಾರೆ.
ಮುಂದಿನ ಮಾರ್ಚ್ ವೇಳೆಗೆ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪ್ರತಿ ಮನೆಗೂ ಶುದ್ಧ ಕುಡಿಯುವ ನೀರು ಸಂಪರ್ಕ ಕಲ್ಪಿಸುವ ಗುರಿ ಹೊಂದಲಾಗಿದ್ದು, ಅದಕ್ಕೆ ಪೂರಕವಾಗಿ ಸಂಪರ್ಕ ಪಡೆಯಲು ಇರುವ ಅಡೆ ತಡೆ ನಿವಾರಿಸ ಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಕುಡಿಯುವ ನೀರು ಪೂರೈಕೆ ಸಂಪರ್ಕ ಒದಗಿಸಲು ಹಾಲಿ ಇರುವ ಷರತ್ತು ಹಾಗೂ ಸರಳಗೊಳಿಸಲು ಕೈಗೊಳ್ಳಬೇಕಾದ ತಿದ್ದುಪಡಿ ಕುರಿತು ಇತ್ತೀಚೆಗೆ ಸಚಿವ ಎಂ.ಟಿ.ಬಿ.ನಾಗರಾಜ್ ಅವರು ಹಿರಿಯ ಅಧಿಕಾರಿಗಳ ಜತೆ ಚರ್ಚಿಸಿ ಪರಿಹಾರೋಪಾಯಕ್ಕಾಗಿ ಪ್ರಸ್ತಾವನೆ ಸಿದ್ಧಪಡಿಸಲು ಸೂಚನೆ ನೀಡಿದ್ದರು. ಅದರಂತೆ ಇಲಾಖೆ ಪ್ರಸ್ತಾವನೆ ಸಿದ್ಧಪಡಿಸಿದ್ದು, ಮುಂದಿನ ಸಂಪುಟ ಸಭೆಯಲ್ಲಿ ಮಂಡನೆಯಾಗಿ ಅನುಮೋದನೆ ದೊರೆಯಬಹುದು ಎಂದು ಹೇಳಲಾಗಿದೆ.
9 ಸಾವಿರ ಕೋಟಿ ರೂ. ಕ್ರಿಯಾ ಯೋಜನೆ
ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಶುದ್ಧ ಕುಡಿಯುವ ನೀರು ಮತ್ತು ಸ್ವತ್ಛತೆ ಕಾಪಾಡಲು 9 ಸಾವಿರ ಕೋಟಿ ರೂ. ಬೃಹತ್ ಮೊತ್ತದ ಸಮಗ್ರ ಕ್ರಿಯಾ ಯೋಜನೆ ರೂಪಿಸಲಾಗಿದೆ. ಜಲಾಗಾರ, ನೀರಿನ ಟ್ಯಾಂಕ್ ನಿರ್ಮಾಣವೂ ಇದರಲ್ಲಿ ಒಳಗೊಂಡಿದೆ. ಇದನ್ನು ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ, ಅಮೃತ್-2 ಅಡಿ ಒಪ್ಪಿಗೆ ನೀಡಲು ಮನವಿ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಮನೆ ಮಾಲಕರು, ಬಾಡಿಗೆದಾರರು, ಕೃಷಿ ಜಮೀನುಗಳಲ್ಲಿ ಮನೆ ನಿರ್ಮಿಸಿಕೊಂಡು ವಾಸ ಮಾಡುತ್ತಿರುವವರು ಕುಡಿಯುವ ನೀರು ಸಂಪರ್ಕ ಪಡೆಯಲು ಹಲವು ದಾಖಲೆ ಸಲ್ಲಿಸಬೇಕಾಗಿದೆ. ಹೀಗಾಗಿ ನಿಯಮಾವಳಿಗೆ ತಿದ್ದುಪಡಿ ತಂದು ಸ್ವಯಂ ಘೋಷಿತ ಪ್ರಮಾಣ ಪತ್ರ, ಆಧಾರ್ ಸಂಖ್ಯೆ ಪಡೆದು ಸುಲಭವಾಗಿ ಅನುಮತಿ ನೀಡಲು ನಿಯಮಾವಳಿಗೆ ತಿದ್ದುಪಡಿ ತರಲು ನಿರ್ಧರಿಸಲಾಗಿದೆ.
-ಎಂ.ಟಿ.ಬಿ.ನಾಗರಾಜ್, ಪೌರಾಡಳಿತ ಸಚಿವ
-ಎಸ್.ಲಕ್ಷ್ಮೀನಾರಾಯಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.