ಕುಡಿಯುವ ನೀರು ಸಮಸ್ಯೆ ಬಾರದಂತೆ ಮುಂಜಾಗ್ರತೆ ವಹಿಸಿ: ಜಿಲ್ಲಾಧಿಕಾರಿ
Team Udayavani, Mar 16, 2021, 11:28 PM IST
ಉಡುಪಿ: ಜಿಲ್ಲೆಯಲ್ಲಿ ಬೇಸಗೆಯಲ್ಲಿ ಸಾರ್ವಜನಿಕರಿಗೆ ಕುಡಿ ಯುವ ನೀರು ಸಮಸ್ಯೆ ಉಂಟಾ ಗದಂತೆ ಅಧಿಕಾರಿಗಳು ಈಗಿನಿಂದಲೇ ಮುಂಜಾ ಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಳೆದ ಬಾರಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದ ಗ್ರಾಮಗಳನ್ನು ಗುರುತಿಸಿ, ಈ ಬಾರಿ ಆ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಕಂಡುಬಾರದಂತೆ ಅಗತ್ಯ ಕ್ರಮ ಕೈಗೊಳ್ಳಿ. ಎಲ್ಲ ತಾಲೂಕುಗಳ ತಹಶೀಲ್ದಾರ್‌ಗಳು ಮತ್ತು ಕಾರ್ಯ ನಿರ್ವಹಣಾಧಿಕಾರಿಗಳು ತಾಲೂಕು ಮಟ್ಟದಲ್ಲಿ ಸಭೆಗಳಲ್ಲಿ ನಡೆಸಿ, ತಮ್ಮ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ಕಂಡು ಬರುವ ಗ್ರಾಮಗಳನ್ನು ಗುರುತಿಸುವಂತೆ ತಿಳಿಸಿದರು.
ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವ ಕುರಿತಂತೆ ಸಂಬಂಧಪಟ್ಟ ಗ್ರಾಮ ಪಂಚಾಯತ್‌ನ ಪಿಡಿಒ, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಎಂಜಿನಿಯರ್‌ಗಳ ಅಭಿಪ್ರಾಯ ಪಡೆದು ಟೆಂಡರ್ ಪ್ರಕ್ರಿಯೆಗಳನ್ನು ಸಿದ್ಧ ಮಾಡಿಟ್ಟುಕೊಂಡು, ಸಮಸ್ಯೆ ತಲೆದೋರಿದ ಕೂಡಲೇ ನೀರು ಸರಬರಾಜು ಮಾಡುವಂತೆ ಸೂಚಿಸಿದರು.
ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪ್ರವಾಹಕ್ಕೆ ತುತ್ತಾಗುವ ಪ್ರದೇಶಗಳನ್ನು ಗುರುತಿಸಿ ನಕ್ಷೆ ತಯಾರಿಸಬೇಕು. ಜಿಲ್ಲಾ ವಿಪತ್ತು ನಿರ್ವಹಣ ಯೋಜನೆಗೆ ಅಗತ್ಯವಿರುವ ಉಪಕರಣಗಳ ಖರೀದಿಗೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ, ಗ್ರಾ.ಪಂ. ವಿಪತ್ತು ನಿರ್ವಹಣ ಯೋಜನೆಯಲ್ಲಿ ಅಗತ್ಯವಿರುವ ಗ್ರಾ.ಪಂ.ಗಳಿಗೆ ಸುರಕ್ಷಾ ಉಪಕರಣಗಳನ್ನು ಒದಗಿಸುವಂತೆ ಸೂಚನೆ ನೀಡಿದರು.
ಸಭೆಯಲ್ಲಿ ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ನಗರಾಭಿವೃದ್ಧಿ ಕೋಶದ ಯೋಜನ ನಿರ್ದೇಶಕ ಅರುಣಪ್ರಭ, ಪೌರಾಯುಕ್ತ ಉದಯ ಶೆಟ್ಟಿ, ಜಿಲ್ಲಾ ವಿಪತ್ತು ನಿರ್ವಹಣಾ ಪರಿಣತ ರವಿ ಓಜನಹಳ್ಳಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಸೂಕ್ತ ಕ್ರಮ ಕೈಗೊಳ್ಳಿ
ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿಯೂ ಸಹ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಮುಂಜಾಗ್ರತೆ ಕ್ರಮ ಗಳನ್ನು ಕೈಗೊಳ್ಳಬೇಕು. ಸಾಧ್ಯವಿದ್ದಲ್ಲಿ ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆ ಪಡೆದು ನೀರು ಸರಬರಾಜು ಮಾಡಲು ಸೂಕ್ತ ಕ್ರಮ ಕೈಗೊಳ್ಳಿ ಎಂದು ತಹಶೀಲ್ದಾರ್‌ಗಳಿಗೆ ಡಿಸಿ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು
Surathkal: ಸಿಲಿಂಡರ್ ಸ್ಫೋ*ಟ ಪ್ರಕರಣ; ಮತ್ತೋರ್ವ ಮಹಿಳೆಯ ಸಾವು
Daily Horoscope: ದೀರ್ಘಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.