ಮುಂಬೈ: ವಿಮಾನದಲ್ಲಿ ಮದ್ಯ ಸೇವಿಸಿ ಗಗನಸಖಿಗೆ ಕಿರುಕುಳ; ವಿದೇಶಿ ಪ್ರಜೆ ಬಂಧನ
Team Udayavani, Apr 1, 2023, 4:12 PM IST
ಮುಂಬೈ : ಬ್ಯಾಂಕಾಕ್-ಮುಂಬೈ ವಿಮಾನದಲ್ಲಿ ಇಂಡಿಗೋ ಸಿಬಂದಿಯನ್ನು ನಿಂದಿಸಿದ ಮತ್ತು ಕಿರುಕುಳ ನೀಡಿದ ಆರೋಪದ ಮೇಲೆ ಕುಡಿದ ಅಮಲಿನಲ್ಲಿದ್ದ ಸ್ವೀಡಿಷ್ ಪ್ರಜೆಯೊಬ್ಬನನ್ನು ಗುರುವಾರ ಬಂಧಿಸಲಾಗಿದೆ.
ಬಂಧಿತನನ್ನು ಶುಕ್ರವಾರ ಅಂಧೇರಿ ಮೆಟ್ರೋಪಾಲಿಟನ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 20,000 ರೂ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ, ಈ ವಿಷಯದ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಸುದ್ದಿ ಸಂಸ್ಥೆ ಐಎಎನ್ಎಸ್ ವರದಿ ಮಾಡಿದೆ.
ಇಂಡಿಗೋ ವಿಮಾನ (6E-1052) ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ನಂತರ ಕ್ಲಾಸ್ ಎರಿಕ್ ಎಚ್‌ಜೆ ವೆಸ್ಟ್‌ಬರ್ಗ್ (63) ಎಂದು ಗುರುತಿಸಲಾದ ಆರೋಪಿಯನ್ನು ವಿಮಾನದಲ್ಲಿ ಅಶಿಸ್ತಿನ ವರ್ತನೆಯ ಆರೋಪದ ಮೇಲೆ ಬಂಧಿಸಲಾಗಿದೆ.
ಪೊಲೀಸರು ದಾಖಲಿಸಿಕೊಂಡಿರುವ ಪ್ರತ್ಯಕ್ಷದರ್ಶಿಗಳ ಹೇಳಿಕೆಗಳ ಪ್ರಕಾರ, ಆರೋಪಿಯು ಮತ್ಸ್ಯಾಹಾರಕ್ಕೆ ಬೇಡಿಕೆಯಿಡುವಾಗ ಅಶಿಸ್ತಿನ ರೀತಿಯಲ್ಲಿ ವರ್ತಿಸಲು ಪ್ರಾರಂಭಿಸಿ ಪ್ರಯಾಣದುದ್ದಕ್ಕೂ ಮುಂದುವರೆಸಿದನು. ಗಗನಸಖಿ ಅವರಿಗೆ ಆ ಆಹಾರ ಲಭ್ಯವಿಲ್ಲ ಎಂದು ತಿಳಿಸಿ ನಂತರ ಅವರಿಗೆ ಚಿಕನ್ ಬಡಿಸಿದರು. ಆದರೆ, ಬಿಲ್ ಪಾವತಿಸುವಂತೆ ಕೇಳಿದಾಗ ಆತ ಆಕೆಯ ಕೈ ಹಿಡಿದಿದ್ದಾನೆ ಎನ್ನಲಾಗಿದೆ.
ಆರೋಪಿ ಎದ್ದು ಆಕೆಗೆ ಕಿರುಕುಳ ನೀಡಲು ಆರಂಭಿಸಿದಾಗ ಸಿಬಂದಿ ಆತನನ್ನು ಆಸನದಿಂದ ಹಿಂದಕ್ಕೆ ತಳ್ಳಿದ್ದಾರೆ. ವಾಗ್ವಾದದ ಸಮಯದಲ್ಲಿ ಇತರ ಸಿಬಂದಿಗಳ ಮೇಲೆ ನಿಂದನೆಗಳನ್ನು ಮಾಡಿದ್ದು, ಮಧ್ಯಪ್ರವೇಶಿಸಲು ಪ್ರಯತ್ನಿಸಿದ ಪ್ರಯಾಣಿಕರ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದ್ದಾನೆ ಎಂದು ವರದಿಯಾಗಿದೆ.
24 ವರ್ಷದ ಗಗನಸಖಿ ಫ್ಲೈಟ್ ಕ್ಯಾಪ್ಟನ್‌ಗೆ ಮಾಹಿತಿ ನೀಡಿದ್ದು, ಸಂಭವನೀಯ ಪರಿಣಾಮಗಳ ಬಗ್ಗೆ ಆರೋಪಿಗೆ ಎಚ್ಚರಿಕೆ ನೀಡಿದರು ಆದರೆ ಯಾವುದೇ ಪ್ರಯೋಜನವಾಗಲಿಲ್ಲ. ವಿಮಾನ ಲ್ಯಾಂಡ್ ಆದ ನಂತರ, ಇಂಡಿಗೋ ಭದ್ರತಾ ಸಿಬಂದಿ ಮತ್ತು ಸಿಐಎಸ್‌ಎಫ್‌ಗೆ ಘಟನೆಯ ಬಗ್ಗೆ ಸೂಚನೆ ನೀಡಲಾಯಿತು, ನಂತರ ಅವರು ಅವನ ಜವಾಬ್ದಾರಿಯನ್ನು ವಹಿಸಿಕೊಂಡು ಸಹರ್ ಏರ್‌ಪೋರ್ಟ್ ಪೊಲೀಸ್ ಠಾಣೆಗೆ ಹಸ್ತಾಂತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.