ಪಟಾಕಿ ಅಂಗಡಿಗಳ ಮೇಲೆ ಡಿವೈಎಸ್ಪಿ-ತಹಶೀಲ್ದಾರ್ ಜಂಟಿ ದಾಳಿ : ಹಸಿರುರಹಿತ ಪಟಾಕಿ ವಶ
Team Udayavani, Nov 14, 2020, 10:14 PM IST
ಚಿಕ್ಕಬಳ್ಳಾಪುರ : ಜಿಲ್ಲೆಯಲ್ಲಿ ಹಸಿರು ಪಟಾಕಿ ಹೊರತುಪಡಿಸಿ ಬೇರೆ ಪಟಾಕಿ ಮಾರಾಟ ಮಾಡಲು ನಿಷೇಧಿಸಿರುವ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ನಗರದಲ್ಲಿಂದ ಡಿವೈಎಸ್ಪಿ ಹಾಗೂ ತಾಲೂಕು ದಂಡಾಧಿಕಾರಿಗಳು ಜಂಟಿಯಾಗಿ ಪಟಾಕಿ ಅಂಗಡಿಗಳ ಮೇಲೆ ದಾಳಿ ನಡೆಸಿ ಹಸಿರುರಹಿತ ಸುಮಾರು 10 ಬಾಕ್ಸ್ ಪಟಾಕಿಗಳನ್ನು ವಶಪಡಿಸಿಕೊಂಡಿದ್ದಾರೆ.
ಜಿಲ್ಲೆಯಲ್ಲಿ ಹಸಿರು ಪಟಾಕಿಯ ಬದಲಿಗೆ ಸಾಮಾನ್ಯ ಪಟಾಕಿಗಳನ್ನು ಮಾರಾಟ ಮಾಡುತ್ತಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್.ಲತಾ ಹಾಗೂ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ರವಿಶಂಕರ್ ಹಾಗೂ ಚಿಕ್ಕಬಳ್ಳಾಪುರ ತಹಶೀಲ್ದಾರ್ ನಾಗಪ್ರಶಾಂತ್ ಜಂಟಿಯಾಗಿ ಪಟಾಕಿ ಅಂಗಡಿಗಳ ಮೇಲೆ ದಾಳಿ ನಡೆಸಿ ಪಟಾಕಿಯನ್ನು ಪರಿಶೀಲಿಸಿ ಬೇರೆ ಪಟಾಕಿ ಮಾರಾಟ ಮಾಡುತ್ತಿದ್ದ ಅಂಗಡಿ ಮಾಲೀಕರಿಗೆ ಎಚ್ಚರಿಕೆ ನೀಡಿ ಸುಮಾರು 10 ಬಾಕ್ಸ್ ಪಟಾಕಿಗಳನ್ನು ವಶಪಡಿಸಿಕೊಂಡಿದ್ದಾರೆ.
ಇದನ್ನೂ ಓದಿ:ವೈಟ್‌ಹೌಸ್‌ನಿಂದ ಹೊರ ನಡೆಯುವ ಸುಳಿವು ನೀಡಿದ ಟ್ರಂಪ್!
ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಸರಳ ಹಾಗೂ ಅರ್ಥಗರ್ಭಿತವಾಗಿ ದೀಪಾವಳಿ ಹಬ್ಬವನ್ನು ಆಚರಿಸಬೇಕೆಂದು ಜಿಲ್ಲಾಡಳಿತ ನಾಗರಿಕರನ್ನು ಮನವಿ ಮಾಡಿದೆ ಜೊತೆಗೆ ಮನೆಗಳಲ್ಲಿ ದೀಪ ಬೆಳೆಗಿಸಿ ಹಸಿರು ಪಟಾಕಿಯನ್ನು ಬಳಕೆ ಮಾಡಬೇಕೆಂದು ಕೋರಿದರು ಸಹ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಹಸಿರು ಪಟಾಕಿಯ ಬದಲಿಗೆ ಬೇರೆ ಪಟಾಕಿ ಮಾರಾಟ ಮಾಡುತ್ತಿರುವ ಕುರಿತು ಪತ್ರಿಕೆಯಲ್ಲಿ ಪ್ರಕಟವಾದ ಸುಧ್ಧಿಗೆ ಸ್ಪಂದಿಸಿ ಕಂದಾಯ ಮತ್ತು ಪೋಲಿಸ್ ಇಲಾಖೆಯ ಅಧಿಕಾರಿಗಳು ಜಂಟಿಯಾಗಿ ದಾಳಿ ನಡೆಸಿದ್ದಾರೆ ಪರಿಸರವನ್ನು ಸಂರಕ್ಷಣೆ ಮಾಡಲು ಜಿಲ್ಲಾಡಳಿತದೊಂದಿಗೆ ಸಹಕರಿಸಿ ಹಸಿರು ಪಟಾಕಿ ಮಾತ್ರ ಮಾರಾಟ ಮಾಡಬೇಕು ಇಲ್ಲದಿದ್ದ ಪಕ್ಷದಲ್ಲಿ ಎಫ್.ಐ.ಆರ್ ದಾಖಲಿಸಿ ಕಾನೂನು ರೀತಿಯ ಕ್ರಮ ಜರುಗಿಸಲಾಗುವುದೆಂದು ಎಚ್ಚರಿಕೆ ನೀಡಿದ್ದಾರೆ.
ಜಿಲ್ಲಾ ಎಸ್ಪಿ ಭೀತಿ: ಚಿಕ್ಕಬಳ್ಳಾಪುರ ಜಿಲ್ಲಾದ್ಯಂತ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ದಿಡೀರ್ ಭೇಟಿ ನೀಡಲಿದ್ದಾರೆ ಜೊತೆಗೆ ಜಿಲ್ಲಾಧಿಕಾರಿಗಳು ಹಸಿರು ಪಟಾಕಿ ಹೊರತುಪಡಿಸಿ ಬೇರೆ ಪಟಾಕಿಗಳನ್ನು ಮಾರಾಟ ಮಾಡಿದರೆ ಕ್ರಿಮಿನಲ್ ಮೊಕದ್ದಮೆಯನ್ನು ದಾಖಲಿಸುವುದಾಗಿ ಎಚ್ಚರಿಕೆ ನೀಡಿದ ಹಿನ್ನೆಲೆಯಲ್ಲಿ ಬೆಳಿಗ್ಗೆ ಕೆಲವೊಂದು ಪಟಾಕಿ ಅಂಗಡಿಗಳನ್ನು ಮುಚ್ಚಲಾಗಿತ್ತು ಬಳಿಕ ತೆರೆದು ವ್ಯಾಪಾರ ಮಾಡಿದ್ದಾರೆ ಒಟ್ಟಾರೇ ಹಸಿರು ಪಟಾಕಿಯ ಬದಲಿಗೆ ಮಾಮೂಲಿ ಪಟಾಕಿ ಸಿಡಿಸಿ ದೀಪಾವಳಿ ಹಬ್ಬವನ್ನು ಆಚರಿಸುತ್ತಿರುವುದು ವಿಶೇಷವಾಗಿದೆ.
ಈ ಸಂದರ್ಭದಲ್ಲಿ ನಗರ ಪೋಲಿಸ್‍ಠಾಣೆಯ ಪಿಎಸ್‍ಐ ಹೊನ್ನೇಗೌಡ ಮತ್ತು ಸಿಬ್ಬಂದಿ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.