ಜ.1ರಿಂದ ಶಾಲಾರಂಭ : ಶಿಕ್ಷಣ ಸಚಿವರಿಂದ ಶಾಲಾ ಕಾಲೇಜುಗಳ ಸಿದ್ಧತೆ ಪರಿಶೀಲನೆ

Team Udayavani, Dec 30, 2020, 3:17 PM IST

ಜ.1ರಿಂದ ಶಾಲಾರಂಭ : ಶಾಲಾ ಕಾಲೇಜುಗಳ ಸಿದ್ಧತೆ ಪರಿಶೀಲಿಸಿದ ಶಿಕ್ಷಣ ಸಚಿವರು

ಬೆಂಗಳೂರು: ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಮಾರ್ಗದರ್ಶನದಂತೆ ಶಿಕ್ಷಣ ಇಲಾಖೆ ರೂಪಿಸಿದ  ಎಸ್.ಒ.ಪಿ.ಯನ್ನು ಆಧರಿಸಿ ಶಾಲಾ ಕಾಲೇಜುಗಳು ಜ.1ರಿಂದ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಶಾಲಾಕಾಲೇಜುಗಳ ಆರಂಭದ ಪೂರ್ವ ಸಿದ್ಧತೆಯನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ  ಸಚಿವ ಎಸ್. ಸುರೇಶ್ ಕುಮಾರ್ ಪರಿಶೀಲಿಸಿದರು.

ಬುಧವಾರ ನಗರದ ವಿವಿಧ ಸರ್ಕಾರಿ ಹಾಗೂ ಖಾಸಗಿ ಪದವಿ ಪೂರ್ವ ಕಾಲೇಜು ಮತ್ತು ಸರ್ಕಾರಿ ಪ್ರೌಢಶಾಲೆಗಳಿಗೆ ಭೇಟಿ ನೀಡಿ ಸಿದ್ಧತೆಗಳನ್ನು ಅವಲೋಕಿಸಿದರು. ಪ್ರತಿಯೊಂದು ಶಾಲೆಗಳಲ್ಲಿ ತರಗತಿ ಕೊಠಡಿಗಳಿಗೆ ಭೇಟಿ ನೀಡುವ ಮೊದಲು ಶಾಲೆಯಲ್ಲಿ ಹಾಜರಿದ್ದ ಮುಖ್ಯೋಪಾಧ್ಯಾಯರು, ಪ್ರಾಂಶುಪಾಲರು, ಉಪನ್ಯಾಸಕರು, ಶಿಕ್ಷಕರನ್ನುದ್ದೇಶಿಸಿ ಮಾತನಾಡಿ, ತರಗತಿಗಳನ್ನು ಆರಂಭಿಸುವಾಗ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳನ್ನು ವಿವರಿಸಿದರು.

ಮೊದಲ ದಿನದ ಮೊದಲ ತರಗತಿ ಅವಧಿಯಲ್ಲಿ ಕೊರೋನಾ ಕುರಿತು ಮುನ್ನೆಚ್ಚರಿಕೆ ಕ್ರಮಗಳು, ಪಾಲಿಸಬೇಕಾದ ನಿಯಮಗಳು ಮತ್ತು ವಿಶೇಷವಾಗಿ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯು ತರಗತಿಗಳ ಮಹತ್ವ ಮತ್ತು ಈ ಪರೀಕ್ಷೆಗಳಲ್ಲಿ ಕಷ್ಟಪಟ್ಟು ಓದಿ ಹೆಚ್ಚಿನ ಅಂಕಗಳೊಂದಿಗೆ ಉತ್ತೀರ್ಣರಾಗಬೇಕಾದ ಮಹತ್ವವನ್ನು ವಿವರಿಸಿ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮೂಡಿಸಬೇಕು ಎಂದು ಸಚಿವರು ಸಲಹೆ ನೀಡಿದರು.

ಇದನ್ನೂ ಓದಿ:ಸಿಎಂ ಆಗಿ ನಿಮ್ಮಲ್ಲಿ ಮನವಿ ಮಾಡುತ್ತೇನೆ, UK ಯಿಂದ ಬಂದವರು ತಪಾಸಣೆ ಮಾಡಿಕೊಳ್ಳಿ: ಬಿಎಸ್ ವೈ

ಸರ್ಕಾರಿ ಶಾಲೆಗಳಲ್ಲಿ ಮತ್ತು ಕಾಲೇಜುಗಳಲ್ಲೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕೊರತೆಯಿಲ್ಲ. ಇತ್ತೀಚಿನ ವರ್ಷಗಳಲ್ಲಿ ಸರ್ಕಾರಿ ಶಾಲಾಕಾಲೇಜುಗಳಿಂದ ಹೆಚ್ಚಿನ ಸಂಖ್ಯೆಯ ಪ್ರತಿಭಾವಂತರು ಹೊರಬರುತ್ತಿದ್ದಾರೆ. ಅನೇಕ ಕೊರತೆಗಳ ಮಧ್ಯೆಯೂ ಸರ್ಕಾರಿ ಶಾಲೆಗಳಲ್ಲಿ ಅಭ್ಯಸಿರುವ ಅನೇಕ ವಿದ್ಯಾರ್ಥಿಗಳು ಉನ್ನತ ಮಟ್ಟಕ್ಕೆ ಏರಿದ್ದಾರೆ. ಕಳೆದ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ. 97-98 ಅಂಕಗಳೊಂದಿಗೆ ಉತ್ತೀರ್ಣರಾದ ಸರ್ಕಾರಿ ಶಾಲೆಯ ಮಕ್ಕಳಾದ ಬೆಂಗಳೂರಿನ ಯಾದಗಿರಿಯ ವಲಸೆ ವಿದ್ಯಾರ್ಥಿ ಮತ್ತು ವಿಜಯಪುರದ ಸಾವಳಗಿ ಸೇರಿದಂತೆ ಅನೇಕ ವಿದ್ಯಾರ್ಥಿಗಳ ಪರಿಶ್ರಮವನ್ನು ಉದಾಹರಿಸಿದ ಸಚಿವರು ಈ ಕುರಿತು ವಿದ್ಯಾರ್ಥಿಗಳ ಗಮನಕ್ಕೆ ತಂದು ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ತಾವೂ ಸಹ ಅದೇ ರೀತಿ ಹೆಚ್ಚಿನ ಅಂಕಗಳನ್ನು ಪಡೆಯಬೇಕೆಂಬ ಹುಮ್ಮಸ್ಸು, ಆಸಕ್ತಿ ಮೂಡುವಂತೆ  ಪ್ರೇರೇಪಿಸಬೇಕೆಂದು ಉಪಾಧ್ಯಾಯ ಸಮೂಹಕ್ಕೆ ಸಚಿವರು ಸಲಹೆ ನೀಡಿದರು.

ಪ್ರತಿಯೊಬ್ಬರೂ ಮಾಸ್ಕ್ ಧರಿಸುವುದು, ಕೈತೊಳೆಯಲು ಸ್ಯಾನಿಟೈಸರ್ ಇಲ್ವೇ ಸಾಬೂನು ಬಳಸುವುದು, ಉಪಾಧ್ಯಾಯರು ಕೋವಿಡ್ ಪರೀಕ್ಷೆ ಫಲಿತಾಂಶದೊಂದಿಗೆ ಬರುವುದು, ಫೇಸ್ ಮಾಸ್ಕ ಮತ್ತು ಫೇಸ್ ಶೀಲ್ಡ್ ಧರಿಸುವುದು, ಮಕ್ಕಳ ಶಾರೀರಿಕ‌ ಅಂತರವನ್ನು ಉಳಿಸಿಕೊಳ್ಳುವಲ್ಲಿ ಗಮನ ಹರಿಸುವುದು, ಅವರ ಆರೋಗ್ಯ, ರೋಗಲಕ್ಷಣಗಳ ಕುರಿತು ಆಗಾಗ್ಗೆ ಗಮನ ಹರಿಸುವುದು, ತರಗತಿ ಕೊಠಡಿಯಲ್ಲಿ ಚಿಕ್ಕ ಸಂಖ್ಯೆಯ ಮಕ್ಕಳನ್ನು ಸಾಮಾಜಿಕ ಅಂತರದಲ್ಲಿ ಕೂರಿಸುವುದು ಸೇರಿದಂತೆ ಕೋವಿಡ್ ನಿಯಮಗಳನ್ನು ಚಾಚೂ ತಪ್ಪದೇ ಪಾಲಿಸಬೇಕು ಎಂದು ಸುರೇಶ್ ಕುಮಾರ್ ಹೇಳಿದರು.

ಸಂಜೆ ಶಾಲೆ ಮುಗಿದ ನಂತರ ಶಾಲಾವರಣ, ತರಗತಿ ಕೊಠಡಿ ಮತ್ತು ಶೌಚಾಲಯಗಳನ್ನು ಸ್ಯಾನಿಟೈಸರ್ ಮಾಡುವುದನ್ನು ಮರೆಯದೇ ಪಾಲಿಸಬೇಕಿದೆ. ಈಗಾಗಲೇ ಹೆಚ್ಚಿನ ದಿನಗಳು  ಮುಗಿದಿರುವುದರಿಂದ ಉಪನ್ಯಾಸಕರು ಇಲಾಖೆ ನಿಗದಿಪಡಿಸುವ ಪಠ್ಯಕ್ರಮವನ್ನು ಪೂರ್ಣಗೊಳಿಸಲು ಕ್ರಮ ವಹಿಸಬೇಕು. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಿಗದಿತ ಅವಧಿಯೊಳಗೆ ಪೋರ್ಷನ್ ಮುಗಿಸುವುದರತ್ತ ಗಮನ ಹರಿಸಬೇಕು ಎಂದರು.

ಕಳೆದ ವರ್ಷದ ಬಸ್ ಪಾಸುಗಳನ್ನೇ ಬಳಸಲು ಅವಕಾಶವಿರುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುವುದಿಲ್ಲ ಎಂಬುದನ್ನು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಬೇಕೆಂದು  ಹೇಳಿದರು.

ಮಕ್ಕಳನ್ನು ಶಾಲೆಗೆ ಕಳಿಸುವ ಪೋಷಕರು ಉತ್ಸುಕರಾಗಿದ್ದು, ಪ್ರಥಮ ಪಿಯುಸಿ ತರಗತಿಗಳನ್ನೂ ಆರಂಭಿಸಬೇಕೆಂದು ಒತ್ತಾಯಿಸುತ್ತಿದ್ದಾರೆಂದು ಉಪನ್ಯಾಸಕರು, ವಿದ್ಯಾರ್ಥಿಗಳು ಮತ್ತು ಪೋಷಕರ ಮನಸ್ಥಿತಿಯನ್ನು ಸಚಿವರ ಗಮನಕ್ಕೆ ತಂದಾಗ, ಪರಿಸ್ಥಿತಿಯನ್ನು ಅವಲೋಕಿಸಿ ಈ ಕುರಿತು ಕೆಲ ದಿನಗಳ ನಂತರ ನಿರ್ಧಾರಕ್ಕೆ ಬರಲಾಗುವುದು ಎಂದು ಸಚಿವರು  ಹೇಳಿದರು.

ಶಾಲೆಗಳ 10ನೇ ತರಗತಿ ಮತ್ತು ಪದವಿ ಪೂರ್ವ ಕಾಲೇಜುಗಳ ದ್ವಿತೀಯ ಪಿಯು ವಿದ್ಯಾರ್ಥಿಗಳ ಸಂಖ್ಯೆಯನ್ನು ವಿಚಾರಿಸಿ ಎಷ್ಟು ತಂಡಗಳು ಮತ್ತು ಎಷ್ಟು ಕೊಠಡಿಗಳನ್ನು ಸಿದ್ಧಪಡಿಸಲಾಗಿದೆ ಎಂಬುದನ್ನು ಗಮನಿಸಿ ತರಗತಿ ಕೊಠಡಿಗಳನ್ನು ಪರಿಶೀಲಿಸಿದರು.

ಮಲ್ಲೇಶ್ವರಂ 18ನೇ ಕ್ರಾಸ್, ಯಲಹಂಕದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳು, ಮಹಾರಾಣಿ ಲಕ್ಷ್ಮಿ ಅಮ್ಮಣ್ಣಿ ಬಾಲಕಿಯರ ಪದವಿ ಪೂರ್ವ ಕಾಲೇಜು, ಬಿಇಎಸ್ ಪದವಿ ಪೂರ್ವ ಕಾಲೇಜು ಸೇರಿದಂತೆ  ಹೆಬ್ಬಾಳ,  ಮಲ್ಲೇಶ್ವರಂ, ಮತ್ತಿತರ ಕಡೆಯ ಸರ್ಕಾರಿ ಪ್ರೌಢಶಾಲೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ನಂತರ ರಾಜ್ಯದ ವಿವಿಧೆಡೆ ಕೈಗೊಳ್ಳಲಾಗಿರುವ ಸಿದ್ಧತೆಗಳ ಕುರಿತು ಡಿಡಿಪಿಐ, ಡಿಡಿಪಿಯು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳಿಂದ ದೂರವಾಣಿ ಮೂಲಕ ಮಾಹಿತಿ ಪಡೆದು, ಅಗತ್ಯ ಸಲಹೆ, ಸೂಚನೆಗಳನ್ನು  ನೀಡಿದರು.

ಟಾಪ್ ನ್ಯೂಸ್

IPL: Players from these countries are fully available for the next three seasons of IPL

IPL: ಇನ್ನು ಮೂರು ಸೀಸನ್‌ ಐಪಿಎಲ್‌ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ

1-a-raga-pg

Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್

Sagara: ತರಗತಿ ಕೊಠಡಿ ಅವ್ಯವಸ್ಥೆ; ಎಲ್‌ಬಿ ಕಾಲೇಜಿನ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ತರಗತಿ ಕೊಠಡಿ ಅವ್ಯವಸ್ಥೆ; ಎಲ್‌ಬಿ ಕಾಲೇಜಿನ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ

ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ

IPL: Players from these countries are fully available for the next three seasons of IPL

IPL: ಇನ್ನು ಮೂರು ಸೀಸನ್‌ ಐಪಿಎಲ್‌ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ

1-a-raga-pg

Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್

Sagara: ತರಗತಿ ಕೊಠಡಿ ಅವ್ಯವಸ್ಥೆ; ಎಲ್‌ಬಿ ಕಾಲೇಜಿನ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.