ಶಾಲಾರಂಭದ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ನಿರ್ಧಾರ:ಸಚಿವ ಸುರೇಶ್ ಕುಮಾರ್
Team Udayavani, Dec 9, 2020, 4:43 PM IST
ಬೆಂಗಳೂರು: ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಸುರಕ್ಷತಾ ಕ್ರಮಗಳೊಂದಿಗೆ ಶಾಲಾರಂಭ ಹಾಗೂ ಮಕ್ಕಳ ಕಲಿಕಾ ಪ್ರಕ್ರಿಯೆ ಆರಂಭಿಸುವ ಕುರಿತು ಶೀಘ್ರದಲ್ಲೇ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ ಕರೆದು ನಿರ್ಧಾರಕ್ಕೆ ಬರಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ಬುಧವಾರ ವಿಧಾನಸೌಧದಲ್ಲಿ ಖಾಸಗಿ ಅನುದಾನ ರಹಿತ ಪದವಿ ಪೂರ್ವ ಕಾಲೇಜು ಆಡಳಿತ ಮಂಡಳಿಗಳ ಒಕ್ಕೂಟದ ಪ್ರತಿನಿಧಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಎಸ್‍ಎಸ್‍ಎಲ್‍ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳನ್ನು ಆರಂಭಿಸುವ ಕುರಿತು ಆರೋಗ್ಯ ಇಲಾಖೆಯ ತಜ್ಞ ಸಮಿತಿಯೊಂದಿಗೂ ಚರ್ಚಿಸಿ ಸೂಕ್ತ ನಿರ್ಧಾರ ಮಾಡಲಾಗುವುದು ಎಂದರು.
ಹಲವು ರೀತಿಯಲ್ಲಿ ಮಕ್ಕಳನ್ನು ಕಲಿಕಾ ಪ್ರಕ್ರಿಯೆಯಲ್ಲಿ ತೊಡಗಿಸಲಾಗಿದೆಯಾದರೂ ಅದು ತರಗತಿ ಪಾಠಗಳಷ್ಟು ಪರಿಣಾಮಕಾರಿಯಾಗಿರುವುದಿಲ್ಲ. ಆದರೆ ಬಹು ದಿನಗಳ ಕಾಲ ಮಕ್ಕಳು ಶಾಲೆಯಿಂದ ಹೊರಗುಳಿಯುವುದರಿಂದ ಆಗುತ್ತಿರುವ ಸಾಮಾಜಿಕ ಸಮಸ್ಯೆಗಳ ಹಿನ್ನೆಲೆಯಲ್ಲಿ ಸುರಕ್ಷತಾ ಕ್ರಮಗಳೊಂದಿಗೆ ಶಾಲೆಗಳನ್ನು ಆರಂಭಿಸುವುದು ಉಚಿತವೆಂದು ಇತ್ತೀಚಿಗೆ ವಿಧಾನಪರಿಷತ್ತಿನ ಪದವೀಧರ ಮತ್ತು ಶಿಕ್ಷಕ ಕ್ಷೇತ್ರದ ಸದಸ್ಯರು ಅಭಿಪ್ರಾಯಪಟ್ಟಿದ್ದಾರೆ. ಮಕ್ಕಳು ಬಹುಕಾಲ ಶಾಲೆಯಿಂದ ಹೊರಗುಳಿಯುವುದರಿಂದ ಸಮಾಜದ ಮೇಲೆ ಆಗಿರುವ ಪರಿಣಾಮಗಳು ಸರ್ಕಾರದ ಗಮನಕ್ಕೂ ಬಂದಿದೆ. ಮಕ್ಕಳ ಭವಿಷ್ಯವೂ ಇದರಲ್ಲಿ ಅಡಗಿರುವುದರಿಂದ ಬಹುಕಾಲ ಮಕ್ಕಳನ್ನು ಶಾಲೆಯಿಂದ ಹೊರಗಿಡುವುದು ಸರಿಯಲ್ಲವಾದ್ದರಿಂದ ಮೇಲಿನ ತರಗತಿಗಳ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಸುರಕ್ಷತಾ ಕ್ರಮಗಳೊಂದಿಗೆ ತರಗತಿಗಳನ್ನು ಆರಂಭಿಸಲು ಸರ್ಕಾರ ಸೂಕ್ತ ಚರ್ಚೆಯ ನಂತರ ನಿರ್ಣಯಕ್ಕೆ ಬರಲಿದೆ ಎಂದು ಸಚಿವರು ಹೇಳಿದರು.
ಇದನ್ನೂ ಓದಿ:ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯಬೇಕೋ ಬೇಡವೋ ಎಂದು ಜನತೆ ನಿರ್ಧರಿಸಲಿ: ತ್ರಿಪುರಾ ಸಿಎಂ
ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಭವಿಷ್ಯದ ಕುರಿತು ಸರ್ಕಾರ ಯಾವುದೇ ರೀತಿಯಲ್ಲೂ, ಯಾವುದೇ ಸಂದರ್ಭದಲ್ಲೂ ರಾಜಿಗೆ ಮುಂದಾಗದು. ಕೊರೋನಾ ಸೃಷ್ಟಿಸಿದ ವಿಷಮ ಪರಿಸ್ಥಿತಿಯಿಂದಾಗಿ ಸರ್ಕಾರದ ಇದುವರೆಗೂ ಖಚಿತ ತೀರ್ಮಾನ ತೆಗೆದುಕೊಳ್ಳಲಾಗಿಲ್ಲ ಎಂದು ಅವರು ಹೇಳಿದರು.
ಶಾಲಾ-ಕಾಲೇಜುಗಳು ಆರಂಭವಾಗದೇ ಇರುವುದರಿಂದ ಪೋಷಕರ ಕಳವಳ, ಮುಂದಿನ ವ್ಯಾಸಂಗಕ್ಕಾಗಿ ರಾಷ್ಟ್ರಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಬೇಕಾದ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳ ಭವಿಷ್ಯ ಕುರಿತ ವಿಚಾರಗಳು ಸರ್ಕಾರದ ಗಮನದಲ್ಲಿವೆ. ಈ ಎಲ್ಲ ವಿಷಯಗಳನ್ನು ಗಮನದಲ್ಲಿಟ್ಟುಕೊಂಡು ನಿರ್ಣಯ ಕೈಗೊಳ್ಳಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ಹೇಳಿದರು.
ಉನ್ನತ ಶಿಕ್ಷಣ ಸಚಿವರೂ ಆದ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ್ ಮಾತನಾಡಿ, ಕೋವಿಡ್ ಹಿನ್ನೆಲೆಯಲ್ಲಿ ಯಾವುದೇ ರಾಜ್ಯದಲ್ಲೂ ಶಾಲೆಗಳು ಪೂರ್ಣ ಪ್ರಮಾಣದಲ್ಲಿ ಆರಂಭಗೊಂಡಿಲ್ಲ. ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಉನ್ನತ ಶಿಕ್ಷಣ ಹಾಗೂ ವಿಶ್ವವಿದ್ಯಾನಿಲಯಗಳ ತರಗತಿಗಳನ್ನು ಆರಂಭಿಸಲಾಗಿದೆ. ಶಾಲಾ ಶಿಕ್ಷಣ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸುರಕ್ಷತಾ ಕ್ರಮಗಳೊಂದಿಗೆ ಶಾಲೆಗಳನ್ನು ಆರಂಭಿಸಲು ಶೀಘ್ರದಲ್ಲೇ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಒಂದು ನಿರ್ಧಾರಕ್ಕೆ ಬರಲಾಗುವುದು ಎಂದರು.
ವಿಧಾನಪರಿಷತ್ ಸದಸ್ಯ ಅರುಣ್ ಶಹಾಪುರ ಶಾಲೆಗಳು ಸಕಾಲದಲ್ಲಿ ಆರಂಭವಾಗದೇ ಇರುವುದರಿಂದ ಮಕ್ಕಳಿಗೆ ಆಗಿರುವ ತೊಂದರೆಗಳು ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಇದರಿಂದಾಗಿರುವ ಸಮಸ್ಯೆಗಳನ್ನು ಗಮನಕ್ಕೆ ತಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು
Belagavi; ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಅಂಬಲಪಾಡಿ ಜಂಕ್ಷನ್ ಬಳಿ ಬೃಹತ್ ಹೊಂಡಕ್ಕೆ ಬಿದ್ದ ಕಾರು
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್
Gangavathi: ಕ್ಲಿಫ್ ಜಂಪಿಂಗ್ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.