![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Dec 17, 2020, 5:50 PM IST
ಬೆಂಗಳೂರು: ಆರನೇ ತರಗತಿಯ ಸಮಾಜ ವಿಜ್ಞಾನ ಪಠ್ಯದಲ್ಲಿ ಬ್ರಾಹ್ಮಣ ಸಮುದಾಯದ ಭಾವನೆಗಳನ್ನು ಘಾಸಿಗೊಳಿಸಬಹುದಾದ ಪಠ್ಯಭಾಗವನ್ನು ತಕ್ಷಣದಿಂದಲೇ ಕೈಬಿಡುವಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸೂಚಿಸಿದ್ದಾರೆ.
ಸಾರ್ವಜನಿಕ ಶಿಕ್ಷಣ ಇಲಾಖೆಯ ಆರನೇ ತರಗತಿಯ ಸಮಾಜ ವಿಜ್ಞಾನ ಭಾಗ-1ರ ಪಾಠ-7ರ ಅಂಶಗಳನ್ನು ಉಲ್ಲೇಖಿಸಿ ಈ ಪಠ್ಯಭಾಗ ಬ್ರಾಹ್ಮಣ ಜನಾಂಗದ ಭಾವನೆಗಳನ್ನುಂಟು ಮಾಡಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಗುರುವಾರವೇ ಈ ಸಂಕೀರ್ಣ ಪಠ್ಯಭಾಗವನ್ನು ತಕ್ಷಣದಿಂದಲೇ ಕೈಬಿಡುವಂತೆ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಕುರಿತು ಇಂದೇ ಅಗತ್ಯ ಸುತ್ತೋಲೆ ಹೊರಡಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಅಯುಕ್ತರಿಗೆ ಸೂಚಿಸಿ ಟಿಪ್ಪಣಿ ನೀಡಲಾಗಿದೆ. ಇಲಾಖೆಯ 1ರಿಂದ 10ನೇ ತರಗತಿಯ ಸಮಾಜ ವಿಜ್ಞಾನ, ಭಾಷಾ ವಿಷಯಗಳ ಯಾವುದೇ ಪಠ್ಯಗಳಲ್ಲಿ ಇರಬಹುದಾದ ಇಂತಹ ಯಾವುದೇ ಸಂಕೀರ್ಣ ವಿಷಯಗಳ ಕುರಿತು ಶಿಕ್ಷಕರು ಮತ್ತು ವಿಷಯ ತಜ್ಞರನ್ನೊಳಗೊಂಡ ಸಮಿತಿ ರಚಿಸಿ ಅವರಿಂದ ವರದಿ ಪಡೆದು 15 ದಿನಗಳಲ್ಲಿ ವರದಿ ಸಲ್ಲಿಸಬೇಕೆಂದೂ ಕರ್ನಾಟಕ ಪಠ್ಯಪುಸ್ತಕ ಸಂಘದ ವ್ಯವಸ್ಥಾಪಕ ನಿರ್ದೇಶಕರಿಗೆ ನಿರ್ದೇಶನ ನೀಡಲಾಗಿದೆ. ವರದಿ ಪಡೆದ ನಂತರ ವರದಿಯಲ್ಲಿ ಅಂತಹ ಪಠ್ಯಭಾಗಗಳಿದ್ದರೆ ಅದರ ಪರಾಮರ್ಶೆಗೆ ತಜ್ಞ ಸಮಿತಿ ನೇಮಕ ಮಾಡಲಾಗುವುದು ಎಂದು ಸಚಿವರು ವಿವರಿಸಿದ್ದಾರೆ.
ಇದನ್ನೂ ಓದಿ:ಮಮತಾಗೆ ಬಂಡಾಯದ ಬಿಸಿ: ಅಧಿಕಾರಿ ಬೆನ್ನಲ್ಲೇ ಪ್ರಮುಖ ಹುದ್ದೆಗೆ ಶಾಸಕ ತಿವಾರಿ ರಾಜೀನಾಮೆ
“ಸ್ವತಃ ಮಂತ್ರಾಲಯ ಶ್ರೀಕ್ಷೇತ್ರದ ಸ್ವಾಮೀಜಿಯವರು ನನಗೆ ದೂರವಾಣಿ ಕರೆ ಮಾಡಿ ಬ್ರಾಹ್ಮಣ ಸಮುದಾಯದ ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ. ಆದರೆ ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಯಾವುದೇ ಪಠ್ಯಪುಸ್ತಕಗಳ ಪರಿಷ್ಕರಣೆಯಾಗಿಲ್ಲ ಇಲ್ಲವೇ ಹೊಸ ಪಾಠಭಾಗಗಳನ್ನು ಸೇರ್ಪಡೆ ಮಾಡಿಲ್ಲ. ಈ ಹಿಂದೆಯೇ ಆಗಿರುವ ಹಾಗೂ ಪ್ರಸ್ತುತ ಬೆಳಕಿಗೆ ಬಂದಿರುವ ಈ ಪ್ರಮಾದ ಸರಿಪಡಿಸಲು ಇಂದೇ ಕ್ರಮ ಕೈಗೊಳ್ಳಲಾಗಿದೆ. ಹಾಗೂ ಮುಂದಿನ ದಿನಗಳಲ್ಲಿ ಸಮಗ್ರ ಪಠ್ಯ ಅವಲೋಕನಕ್ಕೆ ಕ್ರಮ ವಹಿಸಲಾಗುತ್ತದೆ” ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.