2 ದಿನಗಳೊಳಗೆ ಎಸೆಸೆಲ್ಸಿ ಪರೀಕ್ಷೆ ವೇಳಾಪಟ್ಟಿ : ಸುರೇಶ್‌ ಕುಮಾರ್‌ 

Team Udayavani, Feb 28, 2021, 4:01 AM IST

2 ದಿನಗಳೊಳಗೆ ಎಸೆಸೆಲ್ಸಿ ಪರೀಕ್ಷೆ ವೇಳಾಪಟ್ಟಿ : ಸುರೇಶ್‌ ಕುಮಾರ್‌ 

ಮಂಗಳೂರು: ಎಸೆಸೆಲ್ಸಿ ಪರೀಕ್ಷೆಗೆ ಸಿದ್ಧತೆ ನಡೆದಿದ್ದು, ಅಂತಿಮ ವೇಳಾಪಟ್ಟಿ 2 ದಿನಗಳ ಒಳಗೆ ಪ್ರಕಟಗೊಳ್ಳಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶ್‌ ಕುಮಾರ್‌ ಹೇಳಿದರು.

ಜಿಲ್ಲಾಡಳಿತ, ಜಿ. ಪಂಚಾಯತ್‌ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಕುದು¾ಲ್‌ ರಂಗರಾವ್‌ ಪುರಭವನದಲ್ಲಿ ಶನಿವಾರ ನಡೆದ ಪ್ರೌಢಶಾಲಾ ಶಿಕ್ಷಕರೊಂದಿಗಿನ ಸಂವಾದ, 2020ನೇ ಸಾಲಿನ ಎಸೆಸಲ್ಸಿ ಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ಮತ್ತು ಸರಕಾರಿ ಪ್ರೌಢ ಶಾಲಾ 10ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್‌ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಶಾಲೆ ಪೂರ್ಣ ಆರಂಭಕ್ಕೆ ಕೇರಳ, ಮಹಾರಾಷ್ಟ್ರ ಭೀತಿ!
ಒಂದನೇ ತರಗತಿಯಿಂದಲೇ ಪೂರ್ಣ ಪ್ರಮಾಣದ ತರಗತಿಗಳು ಈಗಾಗಲೇ ಆರಂಭಗೊಳ್ಳಬೇಕಿತ್ತು. ಆದರೆ ಕೇರಳ, ಮಹಾರಾಷ್ಟ್ರಗಳಲ್ಲಿ ಕೊರೊನಾ ಹೆಚ್ಚಾದ ಪರಿಣಾಮ ಹಿನ್ನಡೆಯಾಗಿದೆ. ಶಾಲೆಗಳಲ್ಲಿರುವ ಅಗ್ನಿ ಸುರಕ್ಷೆ ಮತ್ತು ದೃಢತಾ ಪ್ರಮಾಣ ಪತ್ರ ಸರಳೀಕರಣ, ಅವಧಿ ವಿಸ್ತರಣೆ ಕುರಿತಂತೆ ಮಾ. 3ರಂದು ಅಧಿಕಾರಿಗಳ ಸಭೆ ನಡೆಸಲಾಗುವುದು. ಮುಖ್ಯೋಪಾಧ್ಯಾಯರ ಸಮಸ್ಯೆ ಗಳನ್ನು ಬಗೆಹರಿಸಲು ಮುಂದಿನ ವಾರ ಆಯುಕ್ತರಿಗೆ ಜಿಲ್ಲೆಗೆ ಭೇಟಿ ನೀಡಲು ಸೂಚಿಸುವುದಾಗಿ ಸಚಿವ ಸುರೇಶ್‌ ಕುಮಾರ್‌ ಹೇಳಿದರು.

ಪುತ್ತೂರಿನಲ್ಲಿ ಕೇಂದ್ರ
ಸುಳ್ಯ, ಬೆಳ್ತಂಗಡಿ ತಾಲೂಕಿನ ಗ್ರಾಮೀಣ ಶಿಕ್ಷಕರಿಗೆ ಉತ್ತರಪತ್ರಿಕೆಗಳ ಮೌಲ್ಯಮಾಪನಕ್ಕೆ ಮಂಗಳೂರು ಕೇಂದ್ರಕ್ಕೆ ಬರಲು ಸಮಸ್ಯೆ ಆಗುತ್ತಿದ್ದು, ಪುತ್ತೂರಿನಲ್ಲಿ ಮೌಲ್ಯಮಾಪನ ಕೇಂದ್ರ ಆರಂಭಿಸಬೇಕು ಎಂದು ಪ್ರೌಢಶಾಲಾ ಶಿಕ್ಷಕರು ಸಚಿವರಲ್ಲಿ ಮನವಿ ಮಾಡಿದರು. ಈ ಕುರಿತು ಈಗಾಗಲೇ ಚರ್ಚೆ ನಡೆದಿದೆ. ಸಾಧ್ಯಾಸಾಧ್ಯತೆ ಪರಿಶೀಲನೆ ಮಾಡಲಾಗುವುದು ಎಂದು ಸಚಿವರು ತಿಳಿಸಿದರು.

ಕೂಡಲೇ ಬಿಸಿಯೂಟ
ವಿದ್ಯಾರ್ಥಿಗಳಿಗೆ ಬಿಸಿಯೂಟ ನೀಡುವ ಯೋಜನೆಯನ್ನು ಮತ್ತೆ ಆರಂಭಿಸಲು ಕೇಂದ್ರದ ಅನುಮತಿ ಕೋರಿದ್ದು, ಒಪ್ಪಿಗೆ ದೊರೆತ ಕೂಡಲೇ ಆರಂಭಿಸಲಾಗುವುದು ಎಂದರು.

ಶಾಸಕ ವೇದವ್ಯಾಸ ಕಾಮತ್‌ ಅಧ್ಯಕ್ಷತೆ ವಹಿಸಿದ್ದರು. ವಿಧಾನಪರಿಷತ್‌ ಸದಸ್ಯ ಭೋಜೇಗೌಡ, ಪಾಲಿಕೆ ಮೇಯರ್‌ ದಿವಾಕರ ಪಾಂಡೇಶ್ವರ, ಉಪ ಮೇಯರ್‌ ವೇದಾವತಿ, ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಜಿ.ಪಂ. ಸ್ಥಾಯೀ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಗಟ್ಟಿ, ಅಲೆಮಾರಿ ಅರೆಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು, ರೋಟರಿ ಜಿಲ್ಲೆ 3181 ಗವರ್ನರ್‌ ರಂಗನಾಥ ಭಟ್‌, ಕೇಶವ ಎಚ್‌.ಆರ್‌., ಜಿಲ್ಲಾ ಡಿಡಿಪಿಐ ಮಲ್ಲೇಸ್ವಾಮಿ, ವಿಷಯ ಪರಿವೀಕ್ಷಣಾಧಿಕಾರಿ ಶಮಂತ್‌, ಶಿಕ್ಷಣ ಇಲಾಖೆ ಸಹ ನಿರ್ದೇಶಕ ಸಿಪ್ರಿಯನ್‌ ಮೋಂತೆರೋ, ರೋಟರಿ ಪ್ರಮುಖರಾದ ಶಿವಪ್ರಸಾದ್‌, ಆನಂದ ಶೆಟ್ಟಿ, ಗೋಪಾಲಕೃಷ್ಣ ಶೆಟ್ಟಿ, ಏಕನಾಥ ದಂಡಕೇರಿ ಉಪಸ್ಥಿತರಿದ್ದರು.

ಹೆಚ್ಚು ಅಂಕಪಡೆದ ಕನ್ನಡ ಮಾಧ್ಯಮದ 11 ಹಾಗೂ ಆಂಗ್ಲ ಮಾಧ್ಯಮದ 14 ವಿದ್ಯಾರ್ಥಿಗಳಿಗೆ ತಲಾ 5 ಸಾವಿರ ರೂ. ಪುರಸ್ಕಾರ ವಿತರಿಸಲಾಯಿತು. ಎನ್‌ಟಿಎಸ್‌ಇ ಪೂರ್ವಭಾವಿ ತಯಾರಿ ಪರೀಕ್ಷೆಯಲ್ಲಿ ಸಾಧನೆಗೈದ ಜಿಲ್ಲೆಯ ಮೂವರಿಗೆ ಪುರಸ್ಕಾರ, 10ನೇ ತರಗತಿಯ 91 ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್‌ ವಿತರಣೆ ನಡೆಯಿತು.

ಶಿಕ್ಷಕರ ಸಮಸ್ಯೆ ಪರಿಹಾರಕ್ಕೆ ಆ್ಯಪ್‌
ಶಾಲೆ, ಶಿಕ್ಷಕರು, ಶಿಕ್ಷಕಿಯರಿಗೆ ತೊಂದರೆ ಆಗದಂತೆ ನೋಡಿಕೊಳ್ಳುವುದು ನಮ್ಮ ಹೊಣೆ. ಅವರ ಸಮಸ್ಯೆಗಳಿಗೆ ಸ್ಪಂದಿಸಲು ಆ್ಯಪ್‌ ತಯಾರಾಗುತ್ತಿದೆ ಎಂದು ತಿಳಿಸಿದ ಶಿಕ್ಷಣ ಸಚಿವರು, ಬೆಳಗಾವಿ ವಿಭಾಗಕ್ಕೆ ಸಂಬಂಧಪಟ್ಟಂತೆ ಶಿಕ್ಷಕರಿಗೆ ಸಂಬಂಧಿಸಿದ ಕಡತ ವಿಲೇವಾರಿ ಮಾ. 1ರಂದು ನಡೆಯಲಿದ್ದು, ಬಳಿಕ ಮೈಸೂರು ವಿಭಾಗ ಮಟ್ಟದಲ್ಲಿ ನಡೆಯಲಿದೆ. ಮುಂದಿನ ದಿನಗಳಲ್ಲಿ ಜಿಲ್ಲಾ ಮಟ್ಟದಲ್ಲೂ ಕಡತ ವಿಲೇವಾರಿ ಮಾಡುವುದಾಗಿ ಸಚಿವರು ತಿಳಿಸಿದರು.

ಟಾಪ್ ನ್ಯೂಸ್

HD-Kumaraswamy

Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ

Sonia-Ghandi

Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

HD-Kumaraswamy

Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ

Sonia-Ghandi

Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.