ಕೋಲಾರದಲ್ಲಿ ಏಕನಾಮ ಸದಾವೈರಿ!
Team Udayavani, Apr 24, 2023, 7:03 AM IST
ಕೋಲಾರ: ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಈ ಬಾರಿ ಒಂದೇ ಹೆಸರಿನ ಹಲವರು ನಾಮಪತ್ರ ಸಲ್ಲಿಸಿ ಗಮನಸೆಳೆದಿದ್ದಾರೆ. ಶ್ರೀನಿವಾಸಪುರ ಕ್ಷೇತ್ರದಲ್ಲಿ ಐವತ್ತು ವರ್ಷ ಗಳಿಂದಲೂ ರಮೇಶ್‌ಕುಮಾರ್ ಹಾಗೂ ಜಿ.ಕೆ.ವೆಂಕಟಶಿವಾರೆಡ್ಡಿಯದ್ದೇ ಹವಾ. ಪ್ರತಿ ಬಾರಿ ಚುನಾವಣೆ ನಡೆದಾಗಲೂ ಈ ಇಬ್ಬರ ಹೆಸರಿನಲ್ಲಿ ಒಂದಷ್ಟು ಮಂದಿ ನಾಮಪತ್ರ ಸಲ್ಲಿಸುವುದು ವಾಡಿಕೆ. ಈ ಬಾರಿಯೂ ಅದು ಮುಂದುವರೆದಿದೆ.
ಜೆಡಿಎಸ್ ಜಿ.ಕೆ.ವೆಂಕಟಶಿವಾರೆಡ್ಡಿ ಹೆಸರಿನವರೇ ಆದ ವೆಂಕಟಶಿವಾರೆಡ್ಡಿ ಮತ್ತು ಟಿ.ಎನ್.ವೆಂಕಟಶಿವಾರೆಡ್ಡಿ ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದಾರೆ. ಹಾಗೆಯೇ ಇದೇ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಕೆ.ಆರ್.ರಮೇಶ್‌ಕುಮಾರ್ ಹೆಸರಿನ ಎನ್.ಎಸ್.ರಮೇಶ್‌ಕುಮಾರ್ ಹಾಗೂ ಎಸ್.ರಮೇಶ್‌ಕುಮಾರ್ ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದಾರೆ. ಮುಳಬಾಗಿಲು ಕ್ಷೇತ್ರದಲ್ಲಿ ಒಂದೇ ಹೆಸರಿನ ಇಬ್ಬರು ಮೂವರು ಪಕ್ಷೇತರರಾಗಿ ಸ್ಪರ್ಧಿಸಿರುವುದು ವಿಶೇಷ.
ಸಿ.ವಿ.ಗೋಪಾಲ್-ಎಂ.ಗೋಪಾಲ್, ಜಿ.ಎಂ.ಗೋವಿಂದಪ್ಪ-ಆರ್.ಗೋವಿಂದು, ಎಂ.ವೆಂಕಟರಮಣ-ವೆಂಕಟರವಣ, ವೆಂಕಟೇಶಪ್ಪ -ಎಂ.ವೆಂಕಟೇಶಪ್ಪ-ಪಿ.ವೆಂಕಟೇಶಪ್ಪ ಹೀಗೆ ನಾಮಪತ್ರಗಳ ಭರಾಟೆ ಜೋರಾಗಿದೆ.
ಬಂಗಾರಪೇಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಎಸ್.ಎನ್.ನಾರಾಯಣಸ್ವಾಮಿ ಹೆಸರು ಹೋಲುವ ಮತ್ತೋರ್ವ ಎಸ್.ಎನ್.ನಾರಾಯಣಸ್ವಾಮಿ ಪಕ್ಷೇತರರಾಗಿ ಕಣದಲ್ಲಿ ದ್ದಾರೆ. ಇದು ಸಾಲದು ಎಂಬಂತೆ ಕೆ.ಎನ್.ನಾರಾಯಣಸ್ವಾಮಿ ಬಿಎಸ್‌ಪಿ ಅಭ್ಯರ್ಥಿ ಯಾಗಿ ಕಣದಲ್ಲಿದ್ದಾರೆ. ಬಿಜೆಪಿ ಅಭ್ಯರ್ಥಿಯ ಹೆಸರು ಎಂ.ನಾರಾಯಣಸ್ವಾಮಿಯೇ ಆಗಿರುವುದು ವಿಶೇಷ. ಮಾಲೂರಿನಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಎಸ್.ಮಂಜುನಾಥ ಗೌಡರಿಗೆ ಪೈಪೋಟಿ ನೀಡಲು ಡಿ.ವಿ.ಮಂಜುನಾಥಗೌಡ ಪಕ್ಷೇತರ ಅಭ್ಯರ್ಥಿಯಾಗಿದ್ದಾರೆ. ಜೆಡಿಎಸ್ ಅಭ್ಯರ್ಥಿ ಜಿ.ಇ.ರಾಮೇಗೌಡರ ಹೆಸರಿನ ಎಚ್.ಆರ್.ರಾಮೇಗೌಡ ಪಕ್ಷೇತರರಾಗಿದ್ದಾರೆ. ಬಿಜೆಪಿ ಬಂಡಾಯ ಹೂಡಿರುವ ವಿಜಯಕು ಮಾರ್ ಗೆ ಸ್ಪರ್ಧಿಯಾಗಿ ಇಬ್ಬರು ಎಂ.ವಿಜಯಕುಮಾರ್ ನಾಮಪತ್ರ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು
Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು
Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ
Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ
SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ
Year Ender 2024: ಗೂಗಲ್ ನಲ್ಲಿ ಈ ವರ್ಷ ಅತೀ ಹೆಚ್ಚು ಹುಡುಕಲ್ಪಟ್ಟ ವಿಷಯ ಯಾವುದು ಗೊತ್ತಾ?
ಪಾರ್ಟಿಗೆ ಕರೆದು ಬಟ್ಟೆ ಬಿಚ್ಚಿಸಿ, ಮೂತ್ರ ವಿಸರ್ಜಿಸಿ ಅವಮಾನ… ಮನನೊಂದ ಬಾಲಕ ಆತ್ಮಹತ್ಯೆ
OTT Release Date: ಸೂಪರ್ ಹಿಟ್ ʼಭೈರತಿ ರಣಗಲ್ʼ ಓಟಿಟಿ ರಿಲೀಸ್‌ಗೆ ಡೇಟ್ ಫಿಕ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.