Election 2023: ಪ್ರಬಲ ಪೈಪೋಟಿಯೇ ಪ್ರತೀ ಬಾರಿಯ ಉತ್ತರ
Team Udayavani, Apr 10, 2023, 7:49 AM IST
ಮಂಗಳೂರು: ಜಿಲ್ಲಾ ಕೇಂದ್ರವನ್ನು ಒಳಗೊಂಡ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಪ್ರತಿಷ್ಠಿತ ಚುನಾವಣ ಕಣಗಳಲ್ಲೊಂದು. ಇಲ್ಲಿ ಮಹಿಳಾ ಮತದಾರರೇ ಅಧಿಕ.
ಬ್ರಿಟಿಷರ ಆಡಳಿತಾವಧಿಯಲ್ಲಿ ಮದ್ರಾಸ್ ಪ್ರಾಂತ್ಯದಲ್ಲಿದ್ದ “ಮಂಗಳೂರು’ ಬಳಿಕ 1956 ರಲ್ಲಿ ಮೈಸೂರು ರಾಜ್ಯದ ಅಧೀನಕ್ಕೆ ಬಂತು. 1957ರಲ್ಲಿ “ಮಂಗಳೂರು-1′, ಅನಂತರ “ಮಂಗಳೂರು’ ಕ್ಷೇತ್ರವಾಗಿ ಚುನಾವಣೆ ಎದುರಿಸುತ್ತಾ ಬಂದಿದ್ದು, 2008ರಲ್ಲಿ ಕ್ಷೇತ್ರ ಪುನರ್‌ವಿಂಗಡಣೆಯ ಬಳಿಕ “ಮಂಗಳೂರು ನಗರ ದಕ್ಷಿಣ’ ವಿಧಾನಸಭಾ ಕ್ಷೇತ್ರವಾಯಿತು. ಆರಂಭದಲ್ಲಿ ಇದು ಕಾಂಗ್ರೆಸ್ ಭದ್ರಕೋಟೆಯಾಗಿದ್ದರೂ ಬಳಿಕ ಈ ಕ್ಷೇತ್ರದಲ್ಲಿ ಬಿಜೆಪಿ ಪ್ರಾಬಲ್ಯ ಸ್ಥಾಪಿಸಿತು.
1994ರಿಂದ ನಾಲ್ಕು ಅವಧಿ ಗಳಲ್ಲಿ ಸತತವಾಗಿ ಬಿಜೆಪಿ ವಶದಲ್ಲಿದ್ದ ಕ್ಷೇತ್ರವನ್ನು 2013ರ ಚುನಾ ವಣೆಯಲ್ಲಿ ಕಾಂಗ್ರೆಸ್ ಮರಳಿ ತನ್ನ ತೆಕ್ಕೆಗೆ ಸೆಳೆದುಕೊಂಡಿತು. 2018ರಲ್ಲಿ ಇದು ಮತ್ತೆ ಬಿಜೆಪಿ ಪಾಲಾಯಿತು. 1957ರಿಂದ 2018 ರವರೆಗೆ ನಡೆದಿರುವ ಒಟ್ಟು 14 ಚುನಾವಣೆಗಳಲ್ಲಿ ಈ ಕ್ಷೇತ್ರದಲ್ಲಿ 8 ಬಾರಿ ಕಾಂಗ್ರೆಸ್ ಹಾಗೂ 6 ಬಾರಿ ಬಿಜೆಪಿ ಜಯಗಳಿಸಿವೆ.
ಈ ಕ್ಷೇತ್ರದಲ್ಲಿ 13 ಬಾರಿ ಕೊಂಕಣಿ ಭಾಷಿಕರು ಶಾಸಕರಾಗಿದ್ದರೆ, ಒಂದು ಬಾರಿ ಮಾತ್ರ ಜೈನ ಸಮುದಾಯದವರು ಆಯ್ಕೆಯಾಗಿದ್ದರು. ಈ ಕ್ಷೇತ್ರದಲ್ಲಿ ಬಿಲ್ಲವ ಮತದಾರರು ಅಧಿಕ ಸಂಖ್ಯೆಯಲ್ಲಿದ್ದರೆ, ಅನಂತರದ ಸ್ಥಾನದಲ್ಲಿ ಕ್ರೈಸ್ತರು ಹಾಗೂ ಮುಸ್ಲಿಂ ಮತದಾರರಿದ್ದಾರೆ.
ರಾಜಕೀಯ ಉನ್ನತ ಸ್ಥಾನಮಾನ
ಈ ಕ್ಷೇತ್ರದಲ್ಲಿ ಆಯ್ಕೆಯಾದ ಶಾಸಕರಲ್ಲಿ ಹಲವರಿಗೆ ಉನ್ನತ ರಾಜಕೀಯ ಸ್ಥಾನಮಾನಗಳು ಸಂದಿವೆ. ಎಂ. ವೈಕುಂಠ ಬಾಳಿಗ ವಿಧಾನಸಭೆಯ ಸ್ಪೀಕರ್, ಸಚಿವರಾಗಿದ್ದರು. ಪಿ.ಎಫ್. ರೊಡ್ರಿ ಗಸ್, ಬ್ಲೇಸಿಯಸ್ ಎಂ. ಡಿ’ಸೋಜಾ ಸಚಿವ ರಾಗಿದ್ದರು. ಎನ್. ಯೋಗೀಶ್ ಭಟ್ ಅವರು ವಿಧಾನಸಭೆಯ ಉಪ ಸ್ಪೀಕರ್ ಆಗಿ ಕಾರ್ಯ ನಿರ್ವಹಿಸಿದ್ದರು. 1983ರಲ್ಲಿ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದ ವಿ. ಧನಂಜಯ ಕುಮಾರ್ ಬಳಿಕ ಸಂಸದರಾಗಿ ಕೇಂದ್ರ ಸಚಿವರಾಗಿದ್ದರು.
ಇನ್ನೂ ಫೈನಲ್ ಆಗದ ಟಿಕೆಟ್!
ಈ ಬಾರಿ ಇದುವರೆಗೂ ಕಾಂಗ್ರೆಸ್, ಬಿಜೆಪಿಯ ಅಭ್ಯರ್ಥಿಗಳು ನಿಗದಿ ಯಾಗಿಲ್ಲ. ಆದರೂ ಕಾಂಗ್ರೆಸ್‌ನಿಂದ ಮಾಜಿ ಶಾಸಕ ಜೆ.ಆರ್. ಲೋಬೋ ಮುಂಚೂಣಿಯಲ್ಲಿದ್ದರೆ, ಬಿಜೆಪಿಯಿಂದ ಹಾಲಿ ಶಾಸಕ ವೇದವ್ಯಾಸ ಕಾಮತ್ ಹೆಸರು ಮುನ್ನೆಲೆಯಲ್ಲಿದೆ. ಇತರ ಪಕ್ಷಗಳು, ಪಕ್ಷೇತರರು ಕಣದಲ್ಲಿರುವ ಸಂಭವವಿದೆ.
~ ದಿನೇಶ್ ಇರಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!
CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!
ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ
ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Assam; ಚಹಾರ್ ಜಿಲ್ಲೆ 4 ಗ್ರಾಮ ಬಾಲ್ಯ ವಿವಾಹ ಮುಕ್ತ: ಸಿಎಂ ಹಿಮಾಂತ್
Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು
Mumbai-Nagpur ಹೆದ್ದಾರಿಯಲ್ಲಿ ಏಕಕಾಲದಲ್ಲಿ 50 ವಾಹನಗಳ ಟಯರ್ ಪಂಕ್ಚರ್
Kottigehara:ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ನೆಲಸಮ,ಕೆಲಸಕ್ಕೆ ಹೋಗಿದ್ದರಿಂದ ಮನೆಮಂದಿ ಪಾರು
TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್ ತಂಡಕ್ಕೆ ಭಾರತೀಯ ನಾಯಕ; ರೋಹಿತ್ ಅಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.