Election 2023: ಸುಳ್ಯದಲ್ಲಿ ಬಿಜೆಪಿ ಅಭ್ಯರ್ಥಿ ಯಾರೆಂಬುದೇ ಕುತೂಹಲ !

ಕಾಂಗ್ರೆಸ್‌, ಎಎಪಿಯಿಂದ ಬಿರುಸಿನ ಪ್ರಚಾರ ಶುರು

Team Udayavani, Apr 10, 2023, 7:53 AM IST

bjp cong election fight

ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿ ಕಾಂಗ್ರೆಸ್‌ ಹಾಗೂ ಎಎಪಿ ಪಕ್ಷದ ಅಭ್ಯರ್ಥಿಗಳ ಘೋಷಣೆಯಾಗಿ ಪ್ರಚಾರಕ್ಕೆ ಇಳಿದಿದ್ದು, ಇನ್ನೂ ಘೋಷಣೆ ಯಾಗದಿರುವ ಬಿಜೆಪಿ ಅಭ್ಯರ್ಥಿ ಕುರಿತು ಕುತೂಹಲ ಹೆಚ್ಚಾಗಿದೆ.

ಕಾಂಗ್ರೆಸ್‌ ಅಭ್ಯರ್ಥಿಯಾದ ಜಿ. ಕೃಷ್ಣಪ್ಪ ಅವರು ಈಗಾಗಲೇ ಕ್ಷೇತ್ರದಲ್ಲಿ ವಿವಿಧೆಡೆ ಭೇಟಿ ನೀಡಿ ಪಕ್ಷದ ನಾಯಕರ ಜತೆ ಸಭೆ ನಡೆಸಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ಶನಿವಾರ ಕಾಂಗ್ರೆಸ್‌ ಚುನಾವಣ ಕಚೇರಿ ಯನ್ನು ಆರಂಭಿಸಲಾಗಿದೆ.

ಆಮ್‌ ಆದ್ಮಿ ಪಕ್ಷವೂ ಈ ಬಾರಿ ಅಭ್ಯರ್ಥಿ ನಿಯೋಜಿಸಿದೆ. ಮಾಜಿ ಶಾಸಕ ಕುಶಲ ಅವರ ಪುತ್ರಿ ಸುಮನಾ ಬೆಳ್ಳಾರ್ಕರ್‌ ಅಭ್ಯರ್ಥಿಯಾಗಿದ್ದು, ಈಗಾಗಲೇ ಕ್ಷೇತ್ರ ದಲ್ಲಿ ಮತದಾರರನ್ನು ಭೇಟಿಯಾಗುತ್ತಿದ್ದಾರೆ.

ಹೊಸ ಅಭ್ಯರ್ಥಿ?
ಬಿಜೆಪಿಯು ಈ ಬಾರಿ ಹೊಸ ಅಭ್ಯರ್ಥಿ ಯನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ. ಆರು ಅವಧಿಯಲ್ಲಿ ಸುಳ್ಯದ ಶಾಸಕರಾದ ಎಸ್‌. ಅಂಗಾರ ಅವರಿಗೆ ಈ ಬಾರಿ ಅವಕಾಶ ಸಿಗುವ ಕುರಿತು ಸಂಶಯ ಹೊಂದಲಾಗಿದೆ. ಆದರೆ ಅದಿನ್ನೂ ಅಂತಿಮವಾಗಿಲ್ಲ. ಈ ನಡುವೆ ಹೊಸ ಮುಖದ ಅಭ್ಯರ್ಥಿ ಅನ್ವೇಷಣೆ ನಡೆದಿದೆ. ಒಂದು ವೇಳೆ ಹೊಸ ಅಭ್ಯರ್ಥಿ ಬಂದರೆ ಈ ಕ್ಷೇತ್ರದಲ್ಲಿ ಹಲವು ವರ್ಷಗಳ ಬಳಿಕ ಪ್ರಮುಖ ಪಕ್ಷ ವೊಂದು ಹೊಸ ಅಭ್ಯರ್ಥಿಯನ್ನು ನಿಯೋ ಜಿಸಿದಂತಾಗುತ್ತದೆ.

ಈ ಮಧ್ಯೆ ಕಾಂಗ್ರೆಸ್‌ ಅಭ್ಯರ್ಥಿ ಆಯ್ಕೆಗೆ ಮೊದಲಿಂದಲೂ ಅಸಮಾಧಾನ ವ್ಯಕ್ತ ವಾಗಿದ್ದು, ಮುಂದುವರಿದಿದೆ. ಅಭ್ಯರ್ಥಿ ಆಕಾಂಕ್ಷಿಯಾಗಿದ್ದ ನಂದಕುಮಾರ್‌ ಅವರಿಗೆ ಟಿಕೆಟ್‌ ಕೈ ತಪ್ಪಿರುವುದನ್ನು ಅವರ ಅಭಿಮಾನಿ ಬಳಗ ಅಸಮಾಧಾನ ಹೊರ ಹಾಕಿದ್ದರು. ಸುಳ್ಯ, ಕಡಬದಲ್ಲಿ ಸಭೆ ನಡೆಸಿ, ಮಂಗಳೂರಿನ ಕಾಂಗ್ರೆಸ್‌ ಕಚೇರಿ ಬಳಿ ಪ್ರತಿಭಟನೆಯನ್ನು ನಡೆಸಿದ್ದರು. ಅಲ್ಲದೇ ಬೆಂಗಳೂರಿನಲ್ಲಿ ಪ್ರಮುಖ ನಾಯಕರನ್ನು ಭೇಟಿ ಮಾಡಿ ನಂದಕುಮಾರ್‌ ಅವರಿಗೆ ಟಿಕೆಟ್‌, ಬಿಫಾರಂ ನೀಡುವಂತೆ ಒತ್ತಾಯಿ ಸಿದ್ದರು. ಅಭಿಮಾನಿಗಳ ಸಭೆಯಲ್ಲಿ ಬಂಡಾಯವಾಗಿ ನಿಲ್ಲುವ ಸೂಚನೆ ಲಭಿಸಿ ದ್ದರೂ ಅಂತಿಮ ನಿರ್ಧಾರವಾಗಿಲ್ಲ.

ಟಾಪ್ ನ್ಯೂಸ್

BBK11: ಮಂಜು ನೋಡಿ ʼಥೂ..ʼ ಎಂದ ತ್ರಿವಿಕ್ರಮ್;‌ ದೊಡ್ಮನೆಯಲ್ಲಿ ಮತ್ತೆ ಹೋಗೋ ಬಾರೋ ಗಲಾಟೆ

BBK11: ಮಂಜು ನೋಡಿ ʼಥೂ..ʼ ಎಂದ ತ್ರಿವಿಕ್ರಮ್;‌ ದೊಡ್ಮನೆಯಲ್ಲಿ ಮತ್ತೆ ಹೋಗೋ ಬಾರೋ ಗಲಾಟೆ

Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…

Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…

ಸಚಿವ ಸತೀಶ್ ಜಾರಕಿಹೊಳಿ

Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Chamarajanagara: A third-grade girl passed away after collapsing in class.

Chamarajanagara: ತರಗತಿಯಲ್ಲಿ ಕುಸಿದು ಬಿದ್ದು ಮೂರನೇ ತರಗತಿ ಬಾಲಕಿ ಸಾವು

Bumrah’s injury worries Team India: Out of England series

Team India; ಬುಮ್ರಾ ಗಾಯದಿಂದ ಟೀಂ ಇಂಡಿಯಾಗೆ ಆತಂಕ: ಪ್ರಮುಖ ಸರಣಿಯಿಂದ ಔಟ್

Kerala: ತಂಜಾವೂರು ಪ್ರವಾಸ ಮುಗಿಸಿ ವಾಪಸ್ಸಾಗುತ್ತಿದ್ದ ಬಸ್ ಅಪಘಾತ: ನಾಲ್ವರು ಮೃತ್ಯು

Kerala: ತಂಜಾವೂರು ಪ್ರವಾಸ ಮುಗಿಸಿ ವಾಪಸ್ಸಾಗುತ್ತಿದ್ದ ಬಸ್ ಅಪಘಾತ: ನಾಲ್ವರು ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BBK11: ಮಂಜು ನೋಡಿ ʼಥೂ..ʼ ಎಂದ ತ್ರಿವಿಕ್ರಮ್;‌ ದೊಡ್ಮನೆಯಲ್ಲಿ ಮತ್ತೆ ಹೋಗೋ ಬಾರೋ ಗಲಾಟೆ

BBK11: ಮಂಜು ನೋಡಿ ʼಥೂ..ʼ ಎಂದ ತ್ರಿವಿಕ್ರಮ್;‌ ದೊಡ್ಮನೆಯಲ್ಲಿ ಮತ್ತೆ ಹೋಗೋ ಬಾರೋ ಗಲಾಟೆ

Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…

Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…

ಸಚಿವ ಸತೀಶ್ ಜಾರಕಿಹೊಳಿ

Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

15(1

Udupi: ಜ.15ಕ್ಕೆ ಗಡುವು; ಕಾಮಗಾರಿ ಇನ್ನೂ ಮುಗಿದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.