Election 2024: ವಿಪಕ್ಷಗಳ ಒಗ್ಗಟ್ಟಿಗೆ ಮುನ್ನವೇ ಬಿಕ್ಕಟ್ಟು

NCPಗೆ ಇಬ್ಭಾಗದ ಭೀತಿ; ಕರ್ನಾಟಕಕ್ಕೂ ಪವಾರ್‌ ಪಕ್ಷ ಪ್ರವೇಶ

Team Udayavani, Apr 15, 2023, 8:13 AM IST

opposition

ಹೊಸದಿಲ್ಲಿ: ಒಂದು ಕಡೆ, ಬಿಜೆಪಿಯನ್ನು ಸಮರ್ಥ ವಾಗಿ ಎದುರಿಸಬೇಕೆಂದರೆ 2024ರ ಲೋಕಸಭೆ ಚುನಾವಣೆಯಲ್ಲಿ “ಹೊಸ ರಂಗ”ದ ಮೂಲಕ ನಾವೆಲ್ಲ ಒಗ್ಗಟ್ಟಾಗಿ ಹೋಗಬೇಕು ಎಂದು ವಿಪಕ್ಷಗಳ ನಾಯಕರು ಹೇಳುತ್ತಿದ್ದರೆ, ಮತ್ತೂಂದು ಕಡೆ ವಿಪಕ್ಷಗಳ ಒಳಗೆಯೇ ಹತ್ತು ಹಲವು ಬಿರುಕುಗಳು ಕಾಣಿಸತೊಡಗಿವೆ. ಇದರಿಂದ ವಿಪಕ್ಷಗಳಲ್ಲಿ “ಒಗ್ಗಟ್ಟಿಗೂ ಮುನ್ನವೇ ಒಡಕು” ಮೂಡುವ ಲಕ್ಷಣಗಳು ಗೋಚರಿಸತೊಡಗಿವೆ.

ಪ್ರಸಕ್ತ ವಾರದ ಆರಂಭದಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಎನ್‌ಸಿಪಿ ನಾಯಕ ಶರದ್‌ ಪವಾರ್‌, ಬಿಹಾರ ಸಿಎಂ ನಿತೀಶ್‌ ಕುಮಾರ್‌, ಡಿಸಿಎಂ ತೇಜಸ್ವಿ ಯಾದವ್‌, ಜೆಡಿಯು ಅಧ್ಯಕ್ಷ ರಾಜೀವ್‌ ರಂಜನ್‌ ಸಿಂಗ್‌ ಲಲ್ಲನ್‌ ಸಹಿತ ವಿಪಕ್ಷಗಳ ಹಲವು ನಾಯಕರೊಂದಿಗೆ ಸರಣಿ ಸಭೆ ನಡೆಸಿದ್ದರು. ಮುಂದಿನ ಲೋಕಸಭೆ ಚುನಾವಣೆಯನ್ನು ಒಗ್ಗಟ್ಟಾಗಿ ಎದುರಿಸುವ ಶಪಥವನ್ನೂ ಮಾಡಿದ್ದರು.
ಆದರೆ ಅನಂತರದ 3-4 ದಿನಗಳಲ್ಲಿ ಉಂಟಾಗಿರುವ ಬೆಳವಣಿಗೆಗಳು ಇದಕ್ಕೆ ತದ್ವಿರುದ್ಧ ಸಂದೇಶವನ್ನೇ ನೀಡುತ್ತಿವೆ.

ಒಂದೆಡೆ ಶರದ್‌ ಪವಾರ್‌ ನೇತೃತ್ವದ ಎನ್‌ಸಿಪಿಯೇ ಎರಡು ಹೋಳಾಗುವ ಲಕ್ಷಣ ಕಂಡುಬಂದರೆ ಮತ್ತೂಂದೆಡೆ ತೆಲಂಗಾಣ ಸಿಎಂ ಕೆ.ಚಂದ್ರಶೇಖರ್‌ ರಾವ್‌ ಅವರು “2024ರ ಲೋಕಸಭೆ ಚುನಾವಣೆಯಲ್ಲಿ ಬಿಆರ್‌ಎಸ್‌ ಪಕ್ಷವೇ ಕೇಂದ್ರದಲ್ಲಿ ಅಧಿಕಾರಕ್ಕೇರಲಿದೆ” ಎಂದು ಶುಕ್ರವಾರ ಹೇಳಿದ್ದಾರೆ. ಇದರ ನಡುವೆಯೇ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ 40-45 ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ಎನ್‌ಸಿಪಿ ನಾಯಕ ಪವಾರ್‌ ಘೋಷಿಸಿದ್ದು, ಈ ಮೂಲಕ ಮಿತ್ರಪಕ್ಷ ಕಾಂಗ್ರೆಸ್‌ಗೆ “ಶಾಕ್‌’ ನೀಡಿದ್ದಾರೆ.

ಇತ್ತೀಚೆಗಷ್ಟೇ ಸಾವರ್ಕರ್‌ ವಿಚಾರವಾಗಿ ರಾಹುಲ್‌ಗಾಂಧಿ ನೀಡಿರುವ ಹೇಳಿಕೆಯಿಂದ ಶಿವಸೇನೆಯ ಉದ್ಧವ್‌ ಠಾಕ್ರೆ ಬಣ ಕೆರಳಿ ಕೆಂಡವಾಗಿತ್ತು. ಅದಾನಿ ವಿಚಾ ರದಲ್ಲಿ ಕಾಂಗ್ರೆಸ್‌ ನಿಲುವನ್ನೂ ಪವಾರ್‌ ಖಂಡಿಸಿದ್ದರು. ಇವೆಲ್ಲವೂ ವಿಪಕ್ಷಗಳು ಮೇಲ್ನೋಟಕ್ಕೆ “ಒಗ್ಗಟ್ಟಿನ ಮಂತ್ರ’ ಜಪಿಸಿದರೂ ಒಳಗೊಳಗೆ ಯಾವುದೂ ಸರಿಯಿಲ್ಲ ಎಂಬುದಕ್ಕೆ ಪುಷ್ಟಿ ನೀಡಿವೆ.

ಎನ್‌ಸಿಪಿಗೆ ಅಜಿತ್‌ ಪವಾರ್‌ ಗುಡ್‌ಬೈ?
ರಾಷ್ಟ್ರ ರಾಜಕಾರಣದಲ್ಲಿ ವಿಪಕ್ಷಗಳ ಒಗ್ಗಟ್ಟು ಸುದ್ದಿಯಾಗುತ್ತಿರುವ ನಡುವೆಯೇ ಎನ್‌ಸಿಪಿ ಹೋಳಾಗುವ ಸುದ್ದಿಯೂ ಚಾಲ್ತಿಗೆ ಬಂದಿದೆ. ಪಕ್ಷದ ನಾಯಕ ಅಜಿತ್‌ ಪವಾರ್‌ ಅವರು ಪಕ್ಷ ತ್ಯಜಿಸಿ ಬಿಜೆಪಿಗೆ ಸೇರ್ಪಡೆಯಾಗುತ್ತಾರೆ ಎಂಬ ಗುಸು ಗುಸು ಆರಂಭವಾಗಿದೆ. ಇದಕ್ಕೆ ಪುಷ್ಟಿ ನೀಡುವಂತೆ, ಶಿವಸೇನೆ ಸಂಸದ ಸಂಜಯ್‌ ರಾವತ್‌ ಅವರೂ “ಶಿವಸೇನೆಯಂತೆಯೇ ಎನ್‌ಸಿಪಿ ಒಡೆಯುವ ಪ್ರಯೋಗವನ್ನು ಬಿಜೆಪಿ ಮಾಡುತ್ತಿದೆ’ ಎಂದಿದ್ದಾರೆ. ಇದೇ 22, 23ರಂದು ಅಜಿತ್‌ ಪವಾರ್‌ ಬಿಜೆಪಿಗೆ ಸೇರ್ಪಡೆಯಾಗಲು ಮುಹೂರ್ತ ಫಿಕ್ಸ್‌ ಆಗಿದೆ ಎಂದೂ ಮೂಲಗಳು ತಿಳಿಸಿವೆ. ಇದೇ ವೇಳೆ ಗುರುವಾರ ಉದ್ಧವ್‌-ಪವಾರ್‌ ಮಾತುಕತೆ ನಡೆಯುತ್ತಿರುವಾಗಲೇ ಅಜಿತ್‌ ಪವಾರ್‌ ಅವರು ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಅವರನ್ನು ಭೇಟಿಯಾಗಿದ್ದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಕರ್ನಾಟಕದಲ್ಲಿ ಎನ್‌ಸಿಪಿ, ಸಿಪಿಐ ಸ್ಪರ್ಧೆ
ಮೇ 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆ ಯಲ್ಲಿ 40-45 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಎನ್‌ಸಿಪಿ ಚಿಂತನೆ ನಡೆಸಿದೆ. ಬಿಜೆಪಿ, ಕಾಂಗ್ರೆಸ್‌ ಹಾಗೂ ಜೆಡಿಯು ತ್ರಿಕೋನ ಸ್ಪರ್ಧೆ ಇರುವಂಥ ಕ್ಷೇತ್ರಗಳಲ್ಲಿ ಎನ್‌ಸಿಪಿ ಸ್ಪರ್ಧಿಸಲಿದೆ ಎಂದು ಮೂಲಗಳು ತಿಳಿಸಿವೆ. ಎನ್‌ಸಿಪಿ ವರಿಷ್ಠರ ಆ ನಿರ್ಧಾರ ಮಿತ್ರಪಕ್ಷವಾದ ಕಾಂಗ್ರೆಸ್‌ಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಶನಿವಾರವೇ ಪವಾರ್‌ ನಿವಾಸದಲ್ಲಿ ಸಭೆ ನಡೆಸಿ, ಕರ್ನಾಟಕದಲ್ಲಿ ಸ್ಪರ್ಧೆ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ. ನಾವು ರಾಷ್ಟ್ರೀಯ ಪಕ್ಷ ಸ್ಥಾನಮಾನವನ್ನು ವಾಪಸ್‌ ಪಡೆಯಲು ಕೆಲವೊಂದು ಹೆಜ್ಜೆ ಇಡಬೇಕಾಗುತ್ತದೆ ಎಂದು ಎನ್‌ಸಿಪಿ ನಾಯಕ ಪ್ರಫ‌ುಲ್‌ ಪಟೇಲ್‌ ಶುಕ್ರವಾರ ಹೇಳಿದ್ದಾರೆ. ಏತನ್ಮಧ್ಯೆ ರಾಷ್ಟ್ರೀಯ ಪಕ್ಷ ಸ್ಥಾನಮಾನವನ್ನು ಕಳೆದುಕೊಂಡ ಮತ್ತೂಂದು ಪಕ್ಷವಾದ ಸಿಪಿಐ ಕೂಡ ಕರ್ನಾಟಕ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದೆ.

2024ರ ಲೋಕಸಭೆ ಚುನಾವಣೆಯಲ್ಲಿ ಬಿಆರ್‌ಎಸ್‌ ಪಕ್ಷ ಅಧಿಕಾರಕ್ಕೆ ಬರಲಿದೆ. ಆಗ ದಲಿತ ಬಂಧು ಯೋಜನೆಯನ್ನು ದೇಶಾದ್ಯಂತ ಜಾರಿ ಮಾಡಲಿದ್ದೇವೆ. ನಮ್ಮ ಶತ್ರುಗಳಿಗೆ ಇದನ್ನು ಅರಗಿಸಿಕೊಳ್ಳಲು ಆಗಲಿಕ್ಕಿಲ್ಲ. ಆದರೆ ಜ್ವಾಲೆ ಹೊತ್ತಿ ಉರಿಯಲು ಒಂದು ಕಿಡಿ ಸಾಕು.
ಕೆ.ಚಂದ್ರಶೇಖರ್‌ ರಾವ್‌, ತೆಲಂಗಾಣ ಸಿಎಂ

ಟಾಪ್ ನ್ಯೂಸ್

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Sabarimala: ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

1-INS

Indian Navy; ಪಾಕ್,ಚೀನಾದ ಮೂಲೆ ಮೂಲೆಗೂ ತಲುಪುವ ಕ್ಷಿಪಣಿ ಪರೀಕ್ಷೆ

1-JPC

JPC ಅವಧಿ ವಿಸ್ತರಣೆ: ವಕ್ಫ್ ಮಸೂದೆ ಮಂಡನೆ ಮುಂದಿನ ವರ್ಷಕ್ಕೆ?

sensex

Stock market; ಲಾಭದ ಆಸೆಗೆ 11 ಕೋಟಿ ರೂ. ಕಳಕೊಂಡ್ರು!

UGC

UGC; ಪದವಿ ಕಲಿಕೆ ಅವಧಿ ನಿರ್ಧಾರ ಆಯ್ಕೆ ಶೀಘ್ರ: ಚೇರ್ಮನ್‌ ಹೇಳಿದ್ದೇನು?

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

SPB: ತಿರುವಳ್ಳೂರ್ ನಲ್ಲಿ ಎಸ್.ಪಿ. ಬಾಲಸುಬ್ರಹ್ಮಣ್ಯಂ ಸ್ಮಾರಕ ನಿರ್ಮಾಣ

SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ

naa ninna bidalare movie releasing today

Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1

Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.