ಪಾದಯಾತ್ರೆ ಕಾಂಗ್ರೆಸ್‍ನ ಚುನಾವಣಾ ಗಿಮಿಕ್: ಭರತ್ ಶೆಟ್ಟಿ ಲೇವಡಿ
Team Udayavani, Jan 10, 2022, 1:04 PM IST
ಮಂಗಳೂರು: ಮೇಕೆದಾಟು ಪಾದಯಾತ್ರೆ ಕಾಂಗ್ರೆಸ್‍ನ ಚುನಾವಣಾ ಗಿಮಿಕ್ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ ಭರತ್ ಶೆಟ್ಟಿ ಲೇವಡಿ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಮಹದಾಯಿ ಯೋಜನೆ, ಮೇಕೆದಾಟು ಯೋಜನೆ ಪೂರ್ಣಗೊಳಿಸುವ ಎಲ್ಲಾ ಅವಕಾಶಗಳಿತ್ತು. ತಮಿಳುನಾಡಿನಲ್ಲಿ ಕಾಂಗ್ರೆಸ್ ನ ಮಿತ್ರಪಕ್ಷ ಡಿಎಂಕೆ ಅಧಿಕಾರದಲ್ಲಿದೆ, ಮಾತುಕತೆ ನಡೆಸಿ ಪೂರ್ಣಗೊಳಿಸಬಹುದಾಗಿದೆ. ನಮ್ಮ ಸರಕಾರವು ಸಂಪೂರ್ಣ ಬೆಂಬಲ ನೀಡಲಿದೆ. ಆದರೆ ರಾಜಕೀಯ ಉದ್ದೇಶದಿಂದ ಕೊರೊನಾ ಮಹಾಮಾರಿಯ ನಡುವೆ ಪಾದಯಾತ್ರೆ ಹಮ್ಮಿಕೊಂಡಿರುವುದು ಅವರಿಗೆ ರಾಜ್ಯದ ಜನರ ಆರೋಗ್ಯದ ಮೇಲೆ ಕಾಳಜಿ ಇಲ್ಲದಂತೆ ಕಾಣುತ್ತಿದೆ. ಅಲ್ಲದೆ ಮೇಕೆದಾಟು ಪಾದಯಾತ್ರೆ ಆರಂಭದಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರಿಗೆ ಪಾದಯಾತ್ರೆಯ ನಡುವೆ ವೈಮನಸ್ಸು ಉಂಟಾಗಿದೆ ಎಂದರು.
ಧಾರ್ಮಿಕ ವಿಚಾರಗಳಲ್ಲಿ ಯಾರಾದರೂ ನಂಬಿಕೆಗಳನ್ನು ಲೇವಡಿ ಮಾಡುವುದನ್ನು ಸಹಿಸಲಾಗದು. ಆಯಾ ಸಮಾಜದ ಧರ್ಮಗುರುಗಳು ಮುಖಂಡರು ಇಂತಹ ಕೃತ್ಯ ಎಸಗುವವರಿಗೆ ಸರಿಯಾದ ಮಾರ್ಗದರ್ಶನವನ್ನು ನೀಡುವುದು ಒಳಿತು ಎಂದು ಭರತ್ ಶೆಟ್ಟಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangalore: ಪ್ರಯಾಣಿಕರಿಗಾಗಿ ಸಿಗ್ನಲ್‌ಗಳಲ್ಲೇ ಬಸ್ ನಿಲುಗಡೆ; ಅನಾಹುತಕ್ಕೆ ಎಡೆ
Mangaluru: ನಿಷ್ಪ್ರಯೋಜಕವಾಗಿದೆ ಸ್ಥಳ ಸೂಚನ ಫಲಕಗಳು
Baikampady: ಇಲ್ಲಿ ಅಜ್ಜಿಯರೂ ರೈಲಿನಡಿ ನುಸುಳಿಯೇ ಹಳಿ ದಾಟಬೇಕು!
Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ
Niveus Mangalore Marathon 2024: ನ.10: ನೀವಿಯಸ್ ಮಂಗಳೂರು ಮ್ಯಾರಥಾನ್
MUST WATCH
ಹೊಸ ಸೇರ್ಪಡೆ
Our beautiful blessing..; ಚೊಚ್ಚಲ ಮಗುವಿನ ಖುಷಿ ಹಂಚಿಕೊಂಡ ರಾಹುಲ್ – ಅಥಿಯಾ ಶೆಟ್ಟಿ
ಬೆಳಗಾವಿಯ ಶ್ರೀನಿವಾಸ ಠಾಣೇದಾರ ಅಮೆರಿಕ ಸಂಸತ್‌ಗೆ ಆಯ್ಕೆ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.