Election ಅಕ್ರಮ: ಜಪ್ತಿ ಪ್ರಮಾಣ 239 ಕೋ.ರೂ.
Team Udayavani, Apr 21, 2023, 7:00 AM IST
ಬೆಂಗಳೂರು: ರಾಜ್ಯದಲ್ಲಿ ಚುನಾವಣೆ ಘೋಷಣೆ ಆದ ಬಳಿಕದ ಚುನಾವಣ ಅಕ್ರಮಗಳ ಜಪ್ತಿ ಪ್ರಮಾಣ 239.52 ಕೋಟಿ ರೂ. ದಾಟಿದೆ. ಕಳೆದ 24 ಗಂಟೆಗಳಲ್ಲಿ ಅಂದಾಜು 35 ಕೋಟಿ ರೂ. ಜಪ್ತಿ ಆಗಿದೆ.
ಚುನಾವಣ ವೇಳಾಪಟ್ಟಿ ಪ್ರಕಟವಾದ ಮಾ.29ರಿಂದ ಎಪ್ರಿಲ್ 19ರ ವರೆಗೆ ವಿಚಕ್ಷಣ ದಳ, ಸ್ಥಿರ ಕಣ್ಗಾವಲು ತಂಡಗಳು, ಪೊಲೀಸರು ಮತ್ತು ಆದಾಯ ತೆರಿಗೆ ಅಧಿಕಾರಿಗಳು ಸೇರಿ 79.51 ಕೋಟಿ ರೂ. ನಗದು, 18.71 ಕೋಟಿ ರೂ. ಮೌಲ್ಯದ ಉಚಿತ ಉಡುಗೊರೆಗಳು, 73.46 ಕೋಟಿ ರೂ. ಮೌಲ್ಯದ 144.27 ಕೆ.ಜಿ. ಬಂಗಾರ, 4.06 ಕೋಟಿ ಮೌಲ್ಯದ 581.90 ಕೆ.ಜಿ ಬೆಳ್ಳಿಯನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ 1,714 ಎಫ್ಐಆರ್‌ಗಳನ್ನು ದಾಖಲಿಸಲಾಗಿದೆ.
ವಿಚಕ್ಷಣ ದಳ, ಸ್ಥಿರ ಕಣ್ಗಾವಲು ತಂಡಗಳು, ಪೊಲೀಸರು ಮತ್ತು ಅಬಕಾರಿ ಅಧಿಕಾರಿಗಳು ಸೇರಿ 47.93 ಕೋಟಿ ರೂ. ಮೌಲ್ಯದ 12.52 ಲಕ್ಷ ಲೀಟರ್ ಮದ್ಯ ವಶಪಡಿಸಿಕೊಂಡಿದ್ದು, 15.82 ಕೋಟಿ ರೂ. ಮೌಲ್ಯದ 1,047.96 ಕೆ.ಜಿ. ಮಾದಕ ದ್ರವ್ಯಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ.
ಅಬಕಾರಿ ಇಲಾಖೆಯು 2,175 ಗಂಭೀರ, ಪರವಾನಿಗೆ ಉಲ್ಲಂ ಸಿದ 1,731 ಎನ್‌ಡಿಪಿಎಸ್ 75 ಮತ್ತು ಅಬಕಾರಿ ಕಾಯ್ದೆ ಅನ್ವಯ ಒಟ್ಟು 12,657 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದ್ದು, 1,474 ವಿವಿಧ ವಾಹನಗಳನ್ನು ಜಪ್ತಿ ಮಾಡಲಾಗಿದೆ ಎಂದು ರಾಜ್ಯ ಚುನಾವಣಾಧಿಕಾರಿಗಳ ಕಚೇರಿ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
ಹೈಕಮಾಂಡ್ ಸೂಚನೆಗೆ ಔತಣಕೂಟ ಮುಂದಕ್ಕೆ ಹಾಕಿದ್ದೇವೆ, ರದ್ದು ಮಾಡಿಲ್ಲ: ಜಿ.ಪರಮೇಶ್ವರ್
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.