ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ: ಡಿ.ಕೆ.ಶಿವಕುಮಾರ್
Team Udayavani, Jan 1, 2023, 9:31 PM IST
ಬೆಂಗಳೂರು: ಮುಂಬರುವ ಚುನಾವಣೆಯನ್ನು ಪಕ್ಷವು ಮಲ್ಲಿಕಾರ್ಜುನ ಖರ್ಗೆ, ಡಿ. ಕೆ. ಶಿವಕುಮಾರ್, ಸಿದ್ದರಾಮಯ್ಯ, ಡಾ| ಜಿ. ಪರಮೇಶ್ವರ್, ಎಚ್.ಕೆ. ಪಾಟೀಲ್, ಎಂ.ಬಿ. ಪಾಟೀಲ್, ಬಿ.ಕೆ. ಹರಿಪ್ರಸಾದ್ ಸಹಿತ ಹಲವು ನಾಯಕರ ನೇತೃತ್ವದಲ್ಲಿ ಎದುರಿಸಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ರವಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ನಮ್ಮ ಸಾಮೂಹಿಕ ನಾಯಕತ್ವವನ್ನು ಸೋಲಿಸಲು ಸಾಧ್ಯವಿಲ್ಲ ಎಂದು ತಿಳಿದು ಪ್ರಧಾನಮಂತ್ರಿಗಳ ಹೆಸರನ್ನು ಮುಂಚೂಣಿಗೆ ಇಟ್ಟಿದ್ದಾರೆ. ಕಳೆದ ಮೂರು ವರ್ಷಗಳಿಂದ ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಅವರ ಬಿಜೆಪಿ ಸರಕಾರದ ಆಡಳಿತ ಸಂಪೂರ್ಣ ವಿಫಲ ಆಗಿದೆ ಎಂಬುದಕ್ಕೆ ಅವರ ಮಾತುಗಳೇ ಸಾಕ್ಷಿ ಎಂದರು.
ಕೇಂದ್ರ ಸಚಿವ ಅಮಿತ್ ಶಾ ಎರಡು ದಿನಗಳ ಕಾಲ ರಾಜ್ಯ ಪ್ರವಾಸ ಮಾಡಿ, ರಾಜ್ಯದಲ್ಲಿ ಆಡಳಿತ ಸರಿಯಿಲ್ಲ, ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ವಹಿಸಿಕೊಳ್ಳಲು ಯಾರೂ ಸಿದ್ಧರಿಲ್ಲ, ಈಗಿರುವ ಮುಖಂಡರ ನಾಯಕತ್ವದಲ್ಲಿ ಮುಂದಿನ ಚುನಾವಣೆ ಗೆಲ್ಲಲು ಆಗುವುದಿಲ್ಲ ಎಂಬುದನ್ನು ಒಪ್ಪಿಕೊಂಡು, ಪ್ರಧಾನ ಮಂತ್ರಿಗಳ ಮುಖಂಡತ್ವದಲ್ಲಿ ರಾಜ್ಯದಲ್ಲಿ ಚುನಾವಣೆ ಎದುರಿಸುವುದಾಗಿ ಸತ್ಯ ನುಡಿದಿದ್ದಾರೆ. ಇದಕ್ಕಾಗಿ ನಾನು ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ಕಳೆದ ಬಾರಿ ಅವರು ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಚುನಾವಣೆ ನಡೆಯಲಿದೆ ಎಂದು ಹೇಳಿದ್ದರು. ಈಗ ಅವರ ನಾಯಕತ್ವ ಹೋಗಿದೆ, ಮೋದಿ ನಾಯಕತ್ವ ಬಂದಿದೆ ಎಂದು ಲೇವಡಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್ಗೆ ಅರ್ಜಿ; ಇಂದು ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.