Elecction Update: ಚುನಾವಣ ಕಣದಲ್ಲಿ ರಕ್ತ ರಾಜಕಾರಣ


Team Udayavani, Apr 27, 2023, 6:48 AM IST

dks shudh

ಕಾಂಗ್ರೆಸ್‌, ಬಿಜೆಪಿ ಹಾಗೂ ಜೆಡಿಎಸ್‌ ನಾಯಕರ ನಡುವೆ “ರಕ್ತ ರಾಜಕಾರಣ”ದ ಮಾತಿನೇಟು ತೀವ್ರಗೊಂಡಿದೆ. “ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ ಕ್ಷೇತ್ರದಲ್ಲಿ ಜಗದೀಶ್‌ ಶೆಟ್ಟರ್‌ ಗೆಲ್ಲುವುದಿಲ್ಲ. ಇದನ್ನು ನಾನು ರಕ್ತದಲ್ಲಿ ಬರೆದು ಕೊಡುತ್ತೇನೆ” ಎಂಬ ಬಿ.ಎಸ್‌.ಯಡಿಯೂರಪ್ಪ ಅವರ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಡಿಕೆಶಿ ಹೇಳಿಕೆಗೆ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಡಾ| ಕೆ.ಸುಧಾಕರ್‌ ತಿರುಗೇಟು ನೀಡಿದ್ದಾರೆ.

ರಕ್ತದಲ್ಲಿ ಬರೆದುಕೊಡುವೆ

ಮೈಸೂರು, ಎ. 26: “ನಾನೂ ರಕ್ತ ದಲ್ಲಿ ಬರೆದುಕೊಡುತ್ತೇನೆ. ಬಿಜೆಪಿ ಸರಕಾರ ಯುವಕರು, ವರ್ತಕರು ಸಹಿತ ಎಲ್ಲರಿಗೂ ಮೋಸ ಮಾಡಿದೆ. ಈ ಚುನಾವಣೆಯಲ್ಲಿ 40 ಸೀಟು ಪಡೆ ದರೆ ನಾವು 150 ಸ್ಥಾನ ಗೆಲ್ಲುತ್ತೇವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ತಿರು ಗೇಟು ನೀಡಿ ದರು. “ಜಗದೀಶ್‌ ಶೆಟ್ಟರ್‌ ಸೋಲುತ್ತಾರೆ ಎಂಬುದನ್ನು ನಾನು ರಕ್ತದಲ್ಲಿ ಬರೆದುಕೊಡುತ್ತೇನೆ” ಎಂಬ ಬಿ.ಎಸ್‌.ಯಡಿಯೂರಪ್ಪ ಹೇಳಿಕೆಗೆ ಡಿಕೆಶಿ ಹೀಗೆ ಪ್ರತಿಕ್ರಿಯಿಸಿದರು. ಸೋಲಿಸುವುದು ಬಿಡುವುದು ಆಮೇಲೆ, ಮೊದಲು ಬಿಜೆಪಿ ಸರಕಾರದ ಸಾಧನೆಯನ್ನು ಹೇಳಲಿ. ಮಿಸ್ಟರ್‌ ಯಡಿಯೂರಪ್ಪ ರಾಜ್ಯಕ್ಕೆ ನಿಮ್ಮ ಕೊಡುಗೆ ಏನು ಹೇಳಿ ಎಂದು ಪ್ರಶ್ನಿಸಿದರು.

ನಾನೂ ಬರೆದುಕೊಡ್ತೇನೆ

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಕಾಂಗ್ರೆಸ್‌ ಯಾವುದೇ ಕಾರಣಕ್ಕೂ ಅಧಿಕಾರಕ್ಕೇರಲು ಸಾಧ್ಯವಿಲ್ಲ . ಅವರು ಹೇಳಿದಂತೆ ನಾನೂ ಅದೇ ರಕ್ತದಲ್ಲಿ ಬರೆದುಕೊಡುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ಗೆ ಸಚಿವ ಡಾ| ಕೆ.ಸುಧಾಕರ್‌ ಟಾಂಗ್‌ ನೀಡಿದರು. ಈ ಚುನಾವಣೆ ಬಳಿಕ ಕಾಂಗ್ರೆಸ್‌ ಶಾಶ್ವತವಾಗಿ ಮುಳುಗುವ ದೋಣಿಯಾಗಲಿದೆ. ಡಿ.ಕೆ. ಶಿವಕುಮಾರ್‌ ಮುಂದಿನ ದಿನಗಳಲ್ಲಿ ಬಿಜೆಪಿಗೆ ಬರುವ ದಿನಗಳು ದೂರವಿಲ್ಲ. ಬಿಜೆಪಿ ಸ್ವತಂತ್ರವಾಗಿ ಸರಕಾರ ರಚಿಸಲಿದೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಲು ಅಭ್ಯರ್ಥಿಗಳೂ ಸಿಗುವುದಿಲ್ಲ ಎಂದರು.

ರಕ್ತ ಕೊರತೆಯಾದೀತು: ಎಚ್‌.ಡಿ. ಕುಮಾರಸ್ವಾಮಿ

ಬೆಂಗಳೂರು: ಚುನಾವಣೆಯ ಸೋಲು- ಗೆಲುವು, ಅಧಿಕಾರಕ್ಕೆ ಬರುವ ಬಗ್ಗೆ ಯಾರೂ ರಕ್ತದಲ್ಲಿ ಬರೆದುಕೊಡಬೇಡಿ, ರಕ್ತದ ಕೊರತೆಯಾಗುತ್ತದೆ ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾಂಗ್ರೆಸ್‌ ಅಧಿಕಾರಕ್ಕೆ ಬರು ತ್ತದೆ ಎಂದು ಡಿ.ಕೆ.ಶಿವಕುಮಾರ್‌ ರಕ್ತದಲ್ಲಿ ಬರೆದುಕೊಡುತ್ತೇನೆ ಎನ್ನುತ್ತಾರೆ. ಮತ್ತೂಂದೆಡೆ ಜಗದೀಶ್‌ ಶೆಟ್ಟರ್‌ ಸೋಲುತ್ತಾರೆ ಎಂದು ರಕ್ತದಲ್ಲಿ ಬರೆದುಕೊಡುತ್ತೇನೆ ಎಂದು ಯಡಿಯೂರಪ್ಪ ಹೇಳುತ್ತಾರೆ. ಇಬ್ಬರೂ ರಕ್ತ ದಲ್ಲಿ ಬರೆದುಕೊಡುವುದು ಬೇಡ ಎಂದರು.

ಟಾಪ್ ನ್ಯೂಸ್

Mangaluru: ವಕೀಲರ ಮೇಲೆ ಹಲ್ಲೆ: ದೂರು

Mangaluru: ವಕೀಲರ ಮೇಲೆ ಹಲ್ಲೆ: ದೂರು

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

1-qwewqeqw

Pro Kabaddi;ಬೆಂಗಳೂರು ಬುಲ್ಸ್‌  ಜಯಭೇರಿ: ತಮಿಳ್‌ ತಲೈವಾಸ್‌ಗೆ 32-36 ಅಂಕಗಳ ಸೋಲು

1-ewewqe

Udupi;ಅಪಾರ್ಟ್ ಮೆಂಟ್ ನಲ್ಲಿ ಪಾರ್ಟಿ ವೇಳೆ ಸಿಲಿಂಡ‌ರ್ ಸ್ಫೋ*ಟ: ಅಪಾರ ಹಾನಿ

Bommai

By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ

CM-Shiggavi

By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ

Hasanmbe

Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Mangaluru: ವಕೀಲರ ಮೇಲೆ ಹಲ್ಲೆ: ದೂರು

Mangaluru: ವಕೀಲರ ಮೇಲೆ ಹಲ್ಲೆ: ದೂರು

1-wqqwewq

Australia ಗೆಲುವಿಗೆ ಕಮಿನ್ಸ್‌  ನೆರವು: ಪಾಕಿಸ್ಥಾನ 203; ಆಸೀಸ್‌  8 ವಿಕೆಟಿಗೆ 204

crime

Trasi: ಕಾರು ಢಿಕ್ಕಿಯಾಗಿ ಗಾಯ; ಪ್ರಕರಣ ದಾಖಲು

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

1-qwewqeqw

Pro Kabaddi;ಬೆಂಗಳೂರು ಬುಲ್ಸ್‌  ಜಯಭೇರಿ: ತಮಿಳ್‌ ತಲೈವಾಸ್‌ಗೆ 32-36 ಅಂಕಗಳ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.