ಚುನಾವಣೆಗಳು ನಡೆಯುತ್ತಲೇ ಇರುತ್ತವೆ; ಬಜೆಟ್ ಅಧಿವೇಶನ ಫಲಪ್ರದವಾಗಿಸಬೇಕು: ಪ್ರಧಾನಿ
Team Udayavani, Jan 31, 2022, 11:38 AM IST
ನವದೆಹಲಿ: ಚುನಾವಣೆಗಳು ನಡೆಯುತ್ತಲೇ ಇರುತ್ತವೆ, ಆದರೆ ಸಂಸತ್ತಿನ ಬಜೆಟ್ ಅಧಿವೇಶನವು ಬಹಳ ಮಹತ್ವದ್ದಾಗಿದ್ದು, ಅದನ್ನು ಫಲಪ್ರದಗೊಳಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ.
ಬಜೆಟ್ ಅಧಿವೇಶನದ ಆರಂಭಕ್ಕೂ ಮುನ್ನ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, ಇಂದಿನ ಜಾಗತಿಕ ಪರಿಸ್ಥಿತಿಯಲ್ಲಿ ಭಾರತಕ್ಕೆ ಸಾಕಷ್ಟು ಅವಕಾಶಗಳಿದ್ದು, ಭಾರತಕ್ಕೆ ಆರ್ಥಿಕ ಪ್ರಗತಿ, ಲಸಿಕೆ ಕಾರ್ಯಕ್ರಮದ ಮೂಲಕ ವಿಶ್ವದಲ್ಲಿ ವಿಶ್ವಾಸವನ್ನು ತುಂಬಲಾಗುತ್ತಿದೆ ಎಂದು ಪ್ರತಿಪಾದಿಸಿದರು.
ಚುನಾವಣೆಗಳು ಅಧಿವೇಶನ ಮತ್ತು ಚರ್ಚೆಗಳ ಮೇಲೆ ಪರಿಣಾಮ ಬೀರುತ್ತವೆ ಎಂಬುದು ನಿಜ. ಆದರೆ ನಾನು ಎಲ್ಲಾ ಸಂಸದರನ್ನು ವಿನಂತಿಸುತ್ತೇನೆ, ಚುನಾವಣೆಗಳು ನಡೆಯುತ್ತವೆ ಆದರೆ ಬಜೆಟ್ ಅಧಿವೇಶನವು ಇಡೀ ವರ್ಷಕ್ಕೆ ನೀಲನಕ್ಷೆಯನ್ನು ಹಾಕಿ ಕೊಡುತ್ತದೆ. ಆದ್ದರಿಂದ ಇದು ಬಹಳ ಮುಖ್ಯವಾಗಿದೆ ಎಂದರು.
“ನಾವು ಈ ಅಧಿವೇಶನವನ್ನು ಹೆಚ್ಚು ಫಲಪ್ರದಗೊಳಿಸುತ್ತೇವೆ, ಮುಂಬರುವ ವರ್ಷದಲ್ಲಿ ದೇಶವನ್ನು ಹೊಸ ಆರ್ಥಿಕ ಎತ್ತರಕ್ಕೆ ಕೊಂಡೊಯ್ಯಲು ಉತ್ತಮ ಅವಕಾಶವಿದೆ. ದೇಶವನ್ನು ಶೀಘ್ರವಾಗಿ ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ಮುಕ್ತ ಮನಸ್ಸಿನಿಂದ ಚರ್ಚೆ ನಡೆಸುವಂತೆ ಮೋದಿ ಕರೆ ನೀಡಿದರು.
ಉತ್ತರ ಪ್ರದೇಶ, ಪಂಜಾಬ್, ಮಣಿಪುರ, ಉತ್ತರಾಖಂಡ, ಗೋವಾ, ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಅಧಿವೇಶನ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
Adani Group: ಲಂಚ, ಸತ್ಯ ಮರೆಮಾಚಿದ ಕಾರಣಕ್ಕೆ ಗೌತಮ್ ಅದಾನಿ ವಿರುದ್ದ ಅಮೆರಿಕದಲ್ಲಿ ಕೇಸು
MUST WATCH
ಹೊಸ ಸೇರ್ಪಡೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.