ಉಡುಪಿ ಜಿಲ್ಲೆಯಲ್ಲಿ ತುರ್ತು ಸೇವೆಗೆ 112ಕ್ಕೆ ಕರೆ ಮಾಡಿ : ಪೊಲೀಸ್ ವರಿಷ್ಠಾಧಿಕಾರಿ ಸೂಚನೆ
12 ERS ವಾಹನಗಳಿಗೆ ಚಾಲನೆ
Team Udayavani, Jan 23, 2021, 8:04 PM IST
ಉಡುಪಿ : ಜಿಲ್ಲೆಯಲ್ಲಿ ತುರ್ತು ಸೇವೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಮಣಿಪಾಲದ ಸಿಂಡಿಕೇಟ್ ಸರ್ಕಲ್‌ನಲ್ಲಿ ಶನಿವಾರ 12 ಇಆರ್‌ಎಸ್ ಎಮರ್ಜೆನ್ಸಿ ರೆಸ್ಪಾನ್ಸ್ ಸಪೋರ್ಟ್ ಸಿಸ್ಟಂ (ERSS) ವಾಹನಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ್ ಅವರು ಹಸುರು ನಿಶಾನೆ ನೀಡುವ ಮೂಲಕ ಚಾಲನೆ ನೀಡಿದರು.
ಅನಂತರ ವಾಹನಗಳು ಕರಾವಳಿ ಜಂಕ್ಷನ್ ಮಾರ್ಗವಾಗಿ ಅಂಬಾಲಿನವರೆಗೆ ತೆರಳಿತು. ಈ ಸಂದರ್ಭದಲ್ಲಿ ಬ್ಯಾಂಡ್ ಸೆಟ್‌ಗಳೂ ಗಮನಸೆಳೆದವು.
ಸಾರ್ವಜನಿಕರು ಅಪಘಾತ, ಕೊಲೆ, ದರೋಡೆ,ಕಳ್ಳತನ, ಸುಲಿಗೆ, ಸರಗಳ್ಳತನ, ಜಗಳ, ಮಹಿಳಾ-ಮಕ್ಕಳ ಹಿರಿಯ ನಾಗರಿಕರ ಹಾಗೂ ಇನ್ನಿತರ ಎಲ್ಲ ರೀತಿಯ ತುರ್ತು ಸ್ಪಂದನ ಸಹಾಯ ವ್ಯವಸ್ಥೆಗೆ 100 ಸಂಖ್ಯೆಯ ಬದಲಾಗಿ ತುರ್ತು ಸೇವೆಗಳ ಆವಶ್ಯಕತೆ ಬೇಕಾದಲ್ಲಿ 112 ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದಾಗಿದೆ.
ಪೊಲೀಸ್ ನೆರವು, ಅಗ್ನಿಶಾಮಕದಳದ ನೆರವು, ಆ್ಯಂಬುಲೆನ್ಸ್ ನೆರವು ಸೇರಿದಂತೆ ಯಾವುದೇ ತುರ್ತು ಸಂದರ್ಭದಲ್ಲಿ ನೂತನವಾದ 112 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿದರೆ ಎಮರ್ಜೆನ್ಸಿ ರೆಸ್ಪಾನ್ಸ್ ಸಪೋರ್ಟ್ ಸಿಸ್ಟಂ (ERSS) ವ್ಯವಸ್ಥೆಯಡಿ ಜಿಲ್ಲೆಯ ಯಾವ ಭಾಗದಿಂದ ಕರೆ ಬಂದರೂ ತುರ್ತಾಗಿ ಆ ಸ್ಥಳಕ್ಕೆ ಧಾವಿಸಿ ರಕ್ಷಣೆ ಒದಗಿಸಲಾಗುತ್ತದೆ. ಈ ವಾಹನಗಳು ದಿನದ 24 ಗಂಟೆಯೂ ಕಾರ್ಯಾಚರಣೆ ನಡೆಸಲಿವೆ.
ಕಾರ್ಯಕ್ರಮದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಚಂದ್ರ, ಡಿವೈಎಸ್‌ಪಿ ಸುಧಾಕರ ನಾಯಕ್, ಮಣಿಪಾಲ ವೃತ್ತ ನಿರೀಕ್ಷಕ ಮಂಜುನಾಥ ಗೌಡ, ಮೂರ್ತಿ ನಾಯಕ್ ಸಹಿತ ಹಲವಾರು ಮಂದಿ ಪೊಲೀಸ್ ಸಿಬಂದಿ ಉಪಸ್ಥಿತರಿದ್ದರು.
ಇದನ್ನೂ ಓದಿ:ಗಡಿಯಲ್ಲಿ ಮತ್ತೊಂದು ಸುರಂಗ ಪತ್ತೆ : 10 ದಿನಗಳಲ್ಲಿ ಪತ್ತೆಯಾದ 2ನೇ ಸುರಂಗ
ತುರ್ತು ಸ್ಪಂದನೆಗೆ 112ಗೆ ಕರೆ ಮಾಡಿ
ಸಾರ್ವಜನಿಕರು ಟೋಲ್ ಫ್ರೀ ಸಂಖ್ಯೆ 100ರ ಬದಲಾಗಿ 112ಕ್ಕೆ ಕರೆ ಮಾಡಿದಲ್ಲಿ ಅವಶ್ಯಕತೆ ಇರುವ ಸ್ಥಳಕ್ಕೆ ಅತೀ ಸಮೀಪ ಇರುವ ಇ.ಆರ್.ಎಸ್.ಎಸ್. ವಾಹನವು ಸ್ಥಳಕ್ಕೆ ಬಂದು ಅಗತ್ಯ ಸೇವೆಯನ್ನು ಸಲ್ಲಿಸಲಿದೆ. ಈ ವಾಹನವು ದಿನದ 24 ಗಂಟೆಯೂ ಕಾರ್ಯಾಚರಿಸಲಿದೆ. ಟೋಲ್ ಫ್ರೀ 112 ನೇರವಾಗಿ ಬೆಂಗಳೂರು ಕೇಂದ್ರದ ನಿಯಂತ್ರಣದಲ್ಲಿದ್ದು, ಅಕ್ಷಾಂಶ ಹಾಗೂ ರೇಖಾಂಶದ ಆಧಾರದ ಮೇಲೆ, ಕರೆ ಬಂದ ಸ್ಥಳಕ್ಕೆ ಕ್ಷಿಪ್ರವಾಗಿ ಅಗತ್ಯ ಸೇವೆಯನ್ನು ಸಲ್ಲಿಸಲು ಪ್ರತೀ ವಾಹನದಲ್ಲಿ ಓರ್ವ ಎ.ಎಸ್.ಐ. ದರ್ಜೆಯ ಪೊಲೀಸ್ ಅಧಿಕಾರಿ ಇರುತ್ತಾರೆ. ಈ ವಾಹನಗಳು ಈ ಹಿಂದೆ ಹೆಚ್ಚಿನ ಅಪರಾಧಗಳು ನಡೆದ ಸ್ಥಳಗಳು, ಶಾಲಾ, ಕಾಲೇಜುಗಳ ಸಮೀಪ, ಜನ ದಟ್ಟಣೆ ಪ್ರದೇಶ, ಹೆಚ್ಚು ವಾಹನ ಸಂಚಾರ ಇರುವ ಪ್ರದೇಶಗಳಲ್ಲಿ ಕಾರ್ಯಾಚರಿಸಲಿದೆ. ಸಾರ್ವಜನಿಕರು, ಅಪಘಾತ ಅಥವಾ ಯಾವುದೇ ತರಹದ ಅಪರಾಧಗಳು ನಡೆದಲ್ಲಿ ತತ್‌ಕ್ಷಣವೇ ಟೋಲ್ ಫ್ರೀ ಸಂಖ್ಯೆ 112ಕ್ಕೆ ಕರೆ ಮಾಡಬಹುದಾಗಿದೆ.
ದೂರುಗಳಿಗೆ ಕನಿಷ್ಠ ಸಮಯದಲ್ಲಿ ಸ್ಪಂದನೆ
ಜಿಲ್ಲೆಯಲ್ಲಿ 12 ಇಆಎಸ್ (ಎಮರ್ಜೆನ್ಸಿ ರೆಸ್ಪಾನ್ಸ್ ಸಪೋರ್ಟ್ ಸಿಸ್ಟಮ್) ವಾಹನಗಳಿಗೆ ಚಾಲನೆ ನೀಡಲಾಗಿದೆ. ತುರ್ತು ಸಂದರ್ಭದಲ್ಲಿ ಸಾರ್ವಜನಿಕರು 112 ಸಂಖ್ಯೆಗೆ ಕರೆ ಮಾಡಬಹುದಾಗಿದೆ. 100 ಸಂಖ್ಯೆ ಇದಕ್ಕೆ ಸೇರ್ಪಡೆಯಾಗಲಿದೆ. ಈ ಮೂಲಕ ಸಾರ್ವಜನಿಕರ ದೂರುಗಳಿಗೆ ಕನಿಷ್ಠ ಸಮಯ ಮಿತಿಯಲ್ಲಿ ಸ್ಪಂದನೆ ದೊರಕಲಿದೆ.
-ಎನ್.ವಿಷ್ಣುವರ್ಧನ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ
Bramavara: ವಿದ್ಯಾರ್ಥಿ ಕಾಲಿನ ಮೇಲೆ ಸಾಗಿದ ಪಿಕ್‌ಅಪ್
Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.