ಪುಲ್ವಾಮದಲ್ಲಿ ಗುಂಡಿನ ಚಕಮಕಿಯ ಬಳಿಕ ಉಗ್ರರು ಪರಾರಿ
ಪ್ರತ್ಯೇಕತಾವಾದಿ ಪ್ರಕರಣಗಳಿಗೆ ಸಂಬಂಧಿಸಿ ಹಲವೆಡೆ ಎಸ್‌ಐಎ ದಾಳಿ
Team Udayavani, Mar 18, 2023, 2:25 PM IST
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ಶನಿವಾರ ಭದ್ರತಾಪಡೆಗಳೊಂದಿಗೆ ಗುಂಡಿನ ಚಕಮಕಿಯ ಬಳಿಕ ಉಗ್ರರು ಪರಾರಿಯಾಗಿದ್ದಾರೆ.
ಪುಲ್ವಾಮಾದ ಮಿಟ್ರಿಗಾಮ್ ಗ್ರಾಮದಲ್ಲಿ ಉಗ್ರರ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟವಾದ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಹುಡುಕಾಟಗಳು ತೀವ್ರಗೊಂಡಂತೆ, ಅಡಗಿಕೊಂಡಿದ್ದ ಭಯೋತ್ಪಾದಕರು ಶೋಧನಾ ತಂಡದ ಮೇಲೆ ಗುಂಡು ಹಾರಿಸಿದ್ದು, ಈ ಪ್ರದೇಶದಲ್ಲಿ ಸ್ವಲ್ಪ ಸಮಯದ ಗುಂಡಿನ ಚಕಮಕಿ ನಡೆಯಿತು.
ಸ್ವಲ್ಪ ಸಮಯದ ಗುಂಡಿನ ವಿನಿಮಯದ ನಂತರ, ಇನ್ನೊಂದು ಕಡೆಯಿಂದ ಯಾವುದೇ ಪ್ರತಿಕ್ರಿಯೆ ಕಾಣಿಸಿಕೊಂಡಿಲ್ಲ ಮತ್ತು ಶೋಧದ ಸಮಯದಲ್ಲಿ, ಎನ್‌ಕೌಂಟರ್ ಸ್ಥಳದಲ್ಲಿ ಯಾವುದೇ ಭಯೋತ್ಪಾದಕರು ಕಂಡುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಆರಂಭಿಕ ಗುಂಡಿನ ಚಕಮಕಿಯ ಸಮಯದಲ್ಲಿ, ಭಯೋತ್ಪಾದಕರು ಕತ್ತಲೆಯ ಲಾಭವನ್ನು ಪಡೆದುಕೊಂಡು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಏತನ್ಮಧ್ಯೆ, ಭಯೋತ್ಪಾದಕರು ಮತ್ತು ಎಸ್‌ಐಎ ದಾಖಲಿಸಿರುವ ಪ್ರತ್ಯೇಕತಾವಾದಿ ಪ್ರಕರಣಗಳಿಗೆ ಸಂಬಂಧಿಸಿದಂತೆ ತನಿಖೆಯ ಭಾಗವಾಗಿ ರಾಜ್ಯ ತನಿಖಾ ಸಂಸ್ಥೆ (ಎಸ್‌ಐಎ) ಮಧ್ಯ ಮತ್ತು ದಕ್ಷಿಣ ಕಾಶ್ಮೀರ ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ದಾಳಿ ನಡೆಸುತ್ತಿದೆ. ಸ್ಥಳೀಯ ಪೊಲೀಸರು ಮತ್ತು ಸಿಆರ್‌ಪಿಎಫ್ ನೆರವಿನೊಂದಿಗೆ ತನಿಖಾ ಸಂಸ್ಥೆಯ ಅಧಿಕಾರಿಗಳು ಬೇಸಿಗೆ ರಾಜಧಾನಿ ಶ್ರೀನಗರ, ಅನಂತನಾಗ್, ಕುಲ್ಗಾಮ್, ಶೋಪಿಯಾನ್ ಮತ್ತು ಇತರ ಜಿಲ್ಲೆಗಳಲ್ಲಿ ದಾಳಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಎಸ್‌ಐಎ ತಂಡಗಳು ಶೋಪಿಯಾನ್ ಜಿಲ್ಲೆಯ ರೆಬೆನ್ ಝೈನಾಪೋರಾ ನಿವಾಸಿ ಅಬ್ದುಲ್ ರಾಝಿಕ್ ವಾಗೇ ಪುತ್ರ ಸರ್ಜನ್ ಅಹ್ಮದ್ ವಾಗೇ ಅಲಿಯಾಸ್ ಬರ್ಕತಿ ವಾಸದ ಮೇಲೆ ದಾಳಿ ನಡೆಸಿವೆ.
ಎಸ್‌ಐಎಯಲ್ಲಿ ಈಗಾಗಲೇ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿ ನಡೆಸಲಾಗುತ್ತಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಪ್ರಕರಣದ ವಿವರಗಳನ್ನು ನಂತರ ಹಂಚಿಕೊಳ್ಳಲಾಗುವುದು ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.