‘ಎ’ ಮತ್ತು ‘ಬಿ’ ಗ್ರೇಡ್ ದೇವಸ್ಥಾನಗಳಲ್ಲಿ ಗೋಶಾಲೆ ಸ್ಥಾಪನೆ: ಸಚಿವೆ ಶಶಿಕಲಾ ಜೊಲ್ಲೆ
Team Udayavani, Nov 5, 2021, 7:01 PM IST
ಬೆಳಗಾವಿ: ಅರಿಶಿಣ, ಕುಂಕುಮ, ಹೂವುಗಳಿಂದ ಅಲಂಕರಿಸಿದ ಹಸು ಹಾಗೂ ಕರುವಿಗೆ ಮುಜರಾಯಿ ಇಲಾಖೆಯ ಸಚಿವರಾದ ಶಶಿಕಲಾ ಜೊಲ್ಲೆ ಅವರು ಗೋಧೂಳಿ ಶುಭ ಮುಹೂರ್ತದಲ್ಲಿ ಪೂಜೆಯನ್ನು ನೆರವೇರಿಸುವ ಮೂಲಕ ರಾಜ್ಯದಾದ್ಯಂತ ದೀಪಾವಳಿ(ಬಲಿಪಾಡ್ಯಮಿ) ದಿನದಂದು ಅಧಿಸೂಚಿತ ದೇವಸ್ಥಾನಗಳಲ್ಲಿ “ಗೋ ಪೂಜಾ” ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಮುಜರಾಯಿ ಇಲಾಖೆಯ ವತಿಯಿಂದ ನಗರದ ಶ್ರೀ ಕಪಿಲೇಶ್ವರ ಮಂದಿರದಲ್ಲಿ ಶುಕ್ರವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಸಚಿವರು ಹಾಗೂ ಗಣ್ಯರು ಗೋಪೂಜೆಯನ್ನು ನೆರವೇರಿಸಿದರು.
ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಶಶಿಕಲಾ ಜೊಲ್ಲೆ ಅವರು, ‘ರಾಜ್ಯದ 35 ಸಾವಿರಕ್ಕೂ ಅಧಿಕ ಅಧಿಸೂಚಿತ ದೇವಸ್ಥಾನ ಗಳಲ್ಲಿ ಗೋಪೂಜೆ ನಡೆಸಲಾಗುತ್ತಿದೆ.ಗೋ ತಳಿಗಳನ್ನು ಉಳಿಸಿ ಮುಂದಿನ ಪೀಳಿಗೆಗೆ ಪರಿಚಯಿಸಬೇಕಿದೆ.’ ಎಂದರು.
‘ಹುಲ್ಲು ತಿಂದು ಹಾಲು ನೀಡುವ ಗೋಮಾತೆಯನ್ನು ಇಳಿವಯಸ್ಸಿನಲ್ಲಿ ಕಸಾಯಿಖಾನೆಗೆ ಕಳುಹಿಸುವುದನ್ನು ತಪ್ಪಿಸಲು ಮುಜರಾಯಿ ಇಲಾಖೆಯ ‘ಎ’ ಮತ್ತು ‘ಬಿ’ ಗ್ರೇಡ್ ದೇವಸ್ಥಾನದಲ್ಲಿ ಮುಜರಾಯಿ ಇಲಾಖೆಯ ವತಿಯಿಂದ ಗೋಶಾಲೆಗಳನ್ನು ಆರಂಭಿಸುವ ಉದ್ಧೇಶ ಹೊಂದಲಾಗಿದೆ’ ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.
‘250 ಕ್ಕೂ ಮೇಲ್ಪಟ್ಟ ದೇವಸ್ಥಾನಗಳಲ್ಲಿ ಮುಂಬರುವ ದಿನಗಳಲ್ಲಿ ಗೋಶಾಲೆಗೆ ಕ್ರಮ ತೆಗೆದುಕೊಳ್ಳಲಾಗುವುದು.
ಜಿಲ್ಲಾವಾರು ಎ ಮತ್ತು ಬಿ ಗ್ರೇಡ್ ದೇವಸ್ಥಾನಗಳ ಪಟ್ಟಿ ಪಡೆದುಕೊಂಡು ಗೋಶಾಲೆ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗುವುದು ಎಂದರು. ಅರ್ಚಕರ ಕುಟುಂಬಕ್ಕೆ ಆರೋಗ್ಯ ವಿಮೆ ಒದಗಿಸಲು ಚಿಂತನೆ ನಡೆಸಲಾಗುತ್ತಿದೆ’ ಎಂದು ಅವರು ಹೇಳಿದರು
ಶಾಸಕ ಅಭಯ್ ಪಾಟೀಲ ಮಾತನಾಡಿ, ಸರಕಾರವು ಅಧಿಸೂಚಿತ ದೇವಸ್ಥಾನಗಳಲ್ಲಿ ಗೋಪೂಜೆ ಆರಂಭಿಸುವ ಮೂಲಕ ಗೋಮಾತೆಗೆ ಪ್ರಾಮುಖ್ಯತೆ ನೀಡಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.
ಸಂಸದರಾದ ಮಂಗಲಾ ಅಂಗಡಿ, ಅಣ್ಣಾಸಾಹೇಬ್ ಜೊಲ್ಲೆ, ಶಾಸಕರಾದ ಅಭಯ್ ಪಾಟೀಲ, ಅನಿಲ್ ಬೆನಕೆ, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಮಾಜಿ ಶಾಸಕ ಸಂಜಯ ಪಾಟೀಲ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.