ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಐಸಿಯು ಘಟಕ ಸ್ಥಾಪನೆ
ವೈದ್ಯರ ಜತೆ ಸಂವಾದ, ವಸ್ತು ಪ್ರದರ್ಶನ ಕೇಂದ್ರಕ್ಕೆ ಡಿಸಿಎಂ ಭೇಟಿ
Team Udayavani, Jul 5, 2020, 8:29 PM IST
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್-19 ಸೋಂಕಿತರ ಚಿಕಿತ್ಸೆಗೆ ಮಹತ್ವದ ಹೆಜ್ಜೆಗಳನ್ನು ಇಟ್ಟಿರುವ ರಾಜ್ಯ ಸರಕಾರ, ಕೋವಿಡ್ ಕೇರ್ ಕೇಂದ್ರಗಳಲ್ಲಿ ತುರ್ತು ನಿಗಾ ಘಟಕಗಳನ್ನು (ಐಸಿಯು) ಸ್ಥಾಪಿಸಲು ಮುಂದಾಗಿದೆ.
ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ಭಾನುವಾರ ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನಾ ಕೇಂದ್ರಕ್ಕೆ ಭೇಟಿ ನೀಡಿ, ಅಲ್ಲಿ ಮಾಡಲಾಗಿರುವ ಕೋವಿಡ್ ಬೆಡ್ ಮತ್ತಿತರ ಸೌಲಭ್ಯಗಳನ್ನು ಪರಿಶೀಲಿಸಿದ ವೇಳೆ ಈ ವಿಷಯ ತಿಳಿಸಿದರು.
ಜಿಕೆವಿಕೆ, ಹಜ್ ಭವನ ಮತ್ತು ರವಿಶಂಕರ್ ಗುರೂಜಿ ಆಶ್ರಮದಲ್ಲಿರುವ ಕೋವಿಡ್ ಕೇರ್ ಕೇಂದ್ರಗಳು ಈಗಾಗಲೇ ಆರಂಭವಾಗಿವೆ. ಇನ್ನು ಕೋರಮಂಗಲ ಒಳಾಂಗಣ ಕ್ರೀಡಾಂಗಣ, ಸರ್ಕಾರಿ ಆಯುರ್ವೇದ ಕಾಲೇಜು ಹಾಗೂ ಬೆಂಗಳೂರು ಅಂತರರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದ ಕೇರ್ ಸೆಂಟರುಗಳು ಇನ್ನಷ್ಟೇ ಆರಂಭವಾಗಬೇಕಿದೆ ಎಂಬ ಮಾಹಿತಿಯನ್ನು ಅವರು ನೀಡಿದರು.
ಪ್ರತಿ ಕೋವಿಡ್ ಕೇರ್ ಕೇಂದ್ರದಲ್ಲೂ 10 ತುರ್ತು ನಿಗಾ ಘಟಕಗಳನ್ನು ತೆರೆಯಲಾಗುವುದು. ವಸ್ತು ಪ್ರದರ್ಶನ ಕೇಂದ್ರದಲ್ಲಿ 100 ಐಸಿಯು ಬೆಡ್ ಗಳನ್ನು ಮಾಡುತ್ತೇವೆ. ಇಲ್ಲಿ ಆಮ್ಲಜನಕ ವ್ಯವಸ್ಥೆ ಸೇರಿ ಅತ್ಯಾಧುನಿಕ ಸೌಲಭ್ಯಗಳು ಇರುತ್ತವೆ. ನಗರದ ಎಲ್ಲೆಡೆ ಸೋಂಕಿತರು ತುಂಬಿದರೆ ಉಳಿದವರನ್ನು ವಸ್ತು ಪ್ರದರ್ಶನ ಕೇಂದ್ರಕ್ಕೆ ಶಿಫ್ಟ್ ಮಾಡುತ್ತೇವೆ. ಈ ಕೇಂದ್ರದಲ್ಲಿ ಸೋಮವಾರದ ಹೊತ್ತಿಗೆ 7,000 ಬೆಡ್ ಗಳು ಸಿದ್ಧವಾಗಲಿವೆ. ಉಳಿದ 3,000 ಬೆಡ್ ಗಳು ಮೂರು ನಾಲ್ಕು ದಿನಗಳಲ್ಲಿ ಸಿದ್ಧವಾಗಲಿವೆ. ಅಷ್ಟರೊಳಗೆ ಈ ಕೇಂದ್ರವು ಸೋಂಕಿತರಿಗೆ ಲಭ್ಯವಾಗಲಿದೆ. ’ಎ’ ಸಿಂಪ್ಟಮೇಟಿಕ್ ರೋಗಿಗಳನ್ನು ಇಲ್ಲಿಗೆ ಸ್ಥಳಾಂತರಿಸುತ್ತೇವೆ ಎಂದು ಉಪ ಮುಖ್ಯಮಂತ್ರಿಗಳು ವಿವರ ನೀಡಿದರು.
ವೈದ್ಯರಿಗೆ ವೈದ್ಯಕೀಯೇತರ ಕೆಲಸವಿಲ್ಲ:
ಇನ್ನು ಮುಂದೆ ವೈದ್ಯರು ಮತ್ತು ನರ್ಸುಗಳಿಗೆ ಕೋವಿಡ್ ಕೇರ್ ಗಳಲ್ಲಿ ವೈದ್ಯಕೀಯೇತರ ಕೆಲಸಗಳು ಇರುವುದಿಲ್ಲ. ಅದಕ್ಕೆ ಪ್ರತ್ಯೇಕ ವ್ಯವಸ್ಥಾಪಕರನ್ನು ನಿಯೋಜಿಸಲಾಗುವುದು. ವೈದ್ಯರು, ನರ್ಸುಗಳು ಸಂಪೂರ್ಣವಾಗಿ ತಮ್ಮ ಗಮನವನ್ನು ಸೋಂಕಿತರ ಚಿಕಿತ್ಸೆ, ಆರೈಕೆ ಮೇಲೆ ಗಮನ ಕೇಂದ್ರೀಕರಿಸಬೇಕು ಎಂದು ಹೇಳಿದರು.
ಹಜ್ ಭವನದ ಕೋವಿಡ್ ಕೇರ್ ವೈದ್ಯರ ಜತೆ ವಿಡಿಯೊ ಸಂವಾದ ನಡೆಸಿದ ಉಪ ಮುಖ್ಯಮಂತ್ರಿ, ವೈದ್ಯರಿಗೆ ಈ ವಿಷಯವನ್ನು ತಿಳಿಸಿದರು. ಯಾವುದೇ ಕಾರಣಕ್ಕೆ ನಿಮಗೆ ಹೆಚ್ಚುವರಿ ಒತ್ತಡ ಹೇರುವುದಿಲ್ಲ. ನೀವು ರೋಗಿಗಳ ಮೇಲೆ ಗಮನ ಕೊಟ್ಟರೆ ಸಾಕು. ಸರಕಾರ ಎಲ್ಲ ರೀತಿಯ ನೆರವು ನಿಮಗೆ ನೀಡಲಿದೆ. ನಿಮ್ಮ ಜವಾಬ್ದಾರಿ ನಮ್ಮದು ಎಂದು ಭರವಸೆ ನೀಡಿದರು.
ಇದೇ ವೇಳೆ, ತಮಗೆ ಮತ್ತು ರೋಗಿಗಳಿಗೆ ಪೂರೈಕೆಯಾಗುತ್ತಿರುವ ಆಹಾರದ ಗುಣಮಟ್ಟ ಸರಿ ಇಲ್ಲ ಎಂಬ ವಿಷಯವನ್ನು ವೈದ್ಯರು ಉಪ ಮುಖ್ಯಮಂತ್ರಿ ಗಮನಕ್ಕೆ ತಂದರು. ಮರುಕ್ಷಣವೇ, ಆಹಾರ ಪೂರೈಕೆದಾರರಿಗೆ ಫೋನ್ ಕರೆ ಮಾಡಿದ ಡಿಸಿಎಂ, ಗುಣಮಟ್ಟದ ಆಹಾರ ಪೂರೈಕೆ ಮಾಡುವಂತೆ ತಾಕೀತು ಮಾಡಿದರಲ್ಲದೆ, ಮತ್ತೆ ದೂರು ಬಂದರೆ ನಿಮ್ಮ ಗುತ್ತಿಗೆ ರದ್ದು ಮಾಡುವುದಾಗಿ ಎಚ್ಚರಿಕೆ ನೀಡಿದರು.
ಔಷಧ ಪೂರೈಕೆಗೆ ಆದೇಶ:
ಕೋವಿಡ್ ಕೇಂದ್ರಕ್ಕೆ ಔಷಧಿಗಳ ಕೊರತೆ ಇದೆ ಎಂಬ ಅಂಶವನ್ನು ವೈದ್ಯರು ಇದೇ ವೇಳೆ ಡಿಸಿಎಂ ಗಮನಕ್ಕೆ ತಂದರು. ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕೂಡಲೇ ತಮಗೆ ಅಗತ್ಯವಿರುವ ಎಲ್ಲ ಔಷಧಗಳನ್ನು ಪೂರೈಕೆ ಮಾಡಲಾಗುವುದು ಎಂದರಲ್ಲದೆ, ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಥಳದಲ್ಲೇ ಈ ಬಗ್ಗೆ ಆದೇಶ ನೀಡಿದರು.
ನೈಸ್ ರಸ್ತೆ ಬಳಿಯ ವಸ್ತು ಪ್ರದರ್ಶನ ಕೇಂದ್ರಕ್ಕೆ ಭೇಟಿ ನೀಡಿದ ವೇಳೆ ಬಿಬಿಎಂಪಿ ಜಂಟಿ ಆಯುಕ್ತ ನರಸಿಂಹ ಮೂರ್ತಿ ಸೇರಿದಂತೆ ಹಲವಾರು ಅಧಿಕಾರಿಗಳು ಡಿಸಿಎಂ ಜತೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.