ಕೋವಿಡ್-19 ಓಡಿಸಲು ಪ್ರತಿಯೊಬ್ಬರು ಜವಾಬ್ದಾರಿಯಿಂದ ವರ್ತಿಸಬೇಕು : ಡಾ.ಅಶ್ವತ್ಥ ನಾರಾಯಣ
Team Udayavani, Jul 1, 2020, 8:32 PM IST
ಬೆಂಗಳೂರು : ಕೋವಿಡ್-19 ಮಹಾಮಾರಿಯನ್ನು ತೊಗಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಅತ್ಯಂತ ಜವಾಬ್ದಾರಿಯಿಂದ ವರ್ತಿಸಬೇಕು ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.
ಪತ್ರಿಕಾ ದಿನಾಚರಣೆ ಅಂಗವಾಗಿ ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯದ ಸಂವಹನಾ ಹಾಗೂ ಪತ್ರಿಕೋದ್ಯಮ ವಿಭಾಗ ಏರ್ಪಡಿಸಿದ್ದ ಕಾರ್ಯಕ್ರಮವನ್ನು ವೆಬಿನಾರ್ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಪತ್ರಕರ್ತರು, ಮಾಧ್ಯಮಗಳು ಹೊಣೆಗಾರಿಕೆಯಿಂದ ಮಹಾಮಾರಿಯ ವಿರುದ್ಧ ಸೆಣಸಲು ಸರ್ಕಾರಕ್ಕೆ ಸಲಹಾರ ನೀಡಿದ್ದಾರೆ.
ಪತ್ರಕರ್ತರು ಆರೋಗ್ಯವನ್ನು ಪಕ್ಕಕ್ಕಿಟ್ಟು ಜನರ ಕ್ಷೇಮಕ್ಕಾಗಿ ಹಗಲಿರುಳು ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು.
ಕನ್ನಡದ ಮೊದಲ ಪತ್ರಿಕೆ ಮಂಗಳೂರು ಸಮಾಚಾರ್ 1843ರಲ್ಲಿ ಮಂಗಳೂರಿನಲ್ಲಿ ಆರಂಭವಾಗಿದ್ದು, ಹರ್ಮನ್ ಫ್ರೆಡಿರಿಕ್ ಇದರ ಪ್ರಥಮ ಸಂಪಾದಕರಾಗಿದ್ದರು. ಈ ಘಟನೆ ಚರಿತ್ರಾರ್ಹವೆಂದೇ ಪರಿಗಣಿಸಿ ಮಾಧ್ಯಮ ಅಕಾಡೆಮಿ ಜುಲೈ 1ನ್ನು ಕನ್ನಡ ಪತ್ರಿಕೋದ್ಯಮದ ಜನ್ಮದಿನವೆಂದು ಆಚರಿಸುತ್ತಿದೆ. ಕನ್ನಡ ಪತ್ರಿಕೋದ್ಯಮಕ್ಕೆ 177 ವರ್ಷಗಳ ಇತಿಹಾಸವಿದೆ ಎಂದು ಹೇಳಿದರು.
ಭಾರತದಲ್ಲಿ ಮಾಧ್ಯಮ ಜಗತ್ತು ಬಹಳ ಗಟ್ಟಿಯಾಗಿದೆ. ಜನರ ಆಶೋತ್ತರಗಳಿಗೆ ತಕ್ಕಂತೆ ಕೆಲಸ ಮಾಡುತ್ತಿವೆ. ದೇಶದಲ್ಲಿ 5,000ಕ್ಕೂ ಹೆಚ್ಚು ಸುದ್ದಿಪತ್ರಿಕೆ, 1000ಕ್ಕೂ ಹೆಚ್ಚು ಮ್ಯಾಗಝಿನ್, 450 ಸುದ್ದಿ ವಾಹಿನಿ ಹಾಗೂ 200ಕ್ಕೂ ಹೆಚ್ಚು ನ್ಯೂಸ್ ಪೋರ್ಟಲ್‌ಗಳಿವೆ. ಒಂದು ಅಂದಾಜಿನ ಪ್ರಕಾರ 72,000 ಕೋಟಿಯಷ್ಟು ವಾರ್ಷಿಕ ಜಾಹೀರಾತು ಆದಾಯವಿದೆ. ಹೀಗಾಗಿ ನಮ್ಮಲ್ಲಿ ಮಾಧ್ಯಮ ಕ್ಷೇತ್ರ ಬಲಿಷ್ಠವಾಗಿದ್ದು, ಅದು ಎದುರಿಸುತ್ತಿರುವ ಸವಾಲುಗಳಿಗೆ ಸೂಕ್ತ ಪರಿಹಾರೋಪಾಯ ಕಂಡುಕೊಳ್ಳಬೇಕಿದೆ ಎಂದರು.
ಬೆಂಗಳೂರು ಕೇಂದ್ರ ವಿವಿ ಕುಲಪತಿ ಪ್ರೊ.ಎಸ್.ಜಾಫೆಟ್, ವಿವಿಯ ಸಂವಹನಾ ಹಾಗೂ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರೊ.ನರಸಿಂಹಮೂರ್ತಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.