ತೈಲೋತ್ಪನ್ನಗಳ ಮೇಲಿನ ಅಬಕಾರಿ ಸುಂಕ ಕಡಿತ?


Team Udayavani, Mar 4, 2021, 7:05 AM IST

ತೈಲೋತ್ಪನ್ನಗಳ ಮೇಲಿನ ಅಬಕಾರಿ ಸುಂಕ ಕಡಿತ?

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲೂ ತೈಲ ಬೆಲೆ ಇತ್ತೀಚಿನ ಕೆಲವು ವಾರಗಳಿಂದ ಏರಿಕೆಯಾಗುತ್ತಿದೆ. ಇದರ ಪರಿಣಾಮ ಭಾರತದ ತೈಲ ಮಾರು ಕಟ್ಟೆ ಮೇಲೂ ಬೀರಿದೆ. ತೈಲೋತ್ಪನ್ನಗಳ ಮೂಲ ಬೆಲೆಗಿಂತ ಅದರ ಮೇಲೆ ಸರಕಾರಗಳು ಹೇರುತ್ತಿರುವ ಹೆಚ್ಚುವರಿ ತೆರಿಗೆಗಳೇ ಗ್ರಾಹಕರಿಗೆ ಹೊರೆ ಯಾಗಿ ಪರಿಣಮಿಸುತ್ತಿದೆ. ತೈಲೋತ್ಪನ್ನಗಳ ಬೆಲೆ ಏರಿಕೆಯಿಂದಾಗಿ ಅಗತ್ಯ ವಸ್ತುಗಳ ಧಾರಣೆಯೂ ಗಗನಮುಖೀಯಾಗಿದ್ದರಿಂದಾಗಿ ಬಡ-ಮಧ್ಯಮ ವರ್ಗದ ಜನರು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. ಜನರ ಆಕ್ರೋಶ ತೀವ್ರಗೊಂಡ ಬಳಿಕ ಕೇಂದ್ರ ಸರಕಾ ರ ಕಡೆಗೂ ಎಚ್ಚೆತ್ತುಕೊಂಡಿದೆ. ಪೆಟ್ರೋಲ್‌ ಮತ್ತು ಡೀಸೆಲ್‌ ಶೀಘ್ರದÇÉೇ ಅಗ್ಗವಾಗುವ ಸಾಧ್ಯತೆ ಇದೆ. ತೈಲಗಳ ಮೇಲಿನ ಅಬಕಾರಿ ಸುಂಕವನ್ನು ಕಡಿಮೆ ಮಾಡಲು ಹಣಕಾಸು ಸಚಿವಾಲಯ ಗಂಭೀರ ಚಿಂತನೆ ನಡೆಸುತ್ತಿದೆ.

ಕೇಂದ್ರದ ಅಬಕಾರಿ ಸುಂಕ, ರಾಜ್ಯಗಳ ವ್ಯಾಟ್‌
ಕೇಂದ್ರ ಸರಕಾರ ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲೆ ಅಬಕಾರಿ ಸುಂಕವನ್ನು ವಿಧಿಸಿದರೆ, ರಾಜ್ಯ ಸರಕಾರಗಳು ವ್ಯಾಟ್‌ ವಿಧಿಸುತ್ತವೆ. ಇವೆರಡು ಸರಕಾರಗಳಿಗೆ ಆದಾಯವನ್ನು ತಂದುಕೊಡುವ ಕ್ಷೇತ್ರಗಳಾಗಿವೆ. ಪೆಟ್ರೋಲ್‌, ಡೀಸೆಲ್‌ ಬೆಲೆ ದುಬಾರಿಯಾಗುತ್ತಿರುವ ಸಂದರ್ಭದಲ್ಲೇ ಅವುಗಳ ಮೇಲಿನ ತೆರಿಗೆಯನ್ನು ಕಡಿತಗೊಳಿಸುವಂತೆ ತಜ್ಞರು ಸರಕಾರಕ್ಕೆ ಸಲಹೆ ನೀಡಿದ್ದರು. ಕೆಲವು ದಿನಗಳ ಹಿಂದೆ ಬಿಜೆಪಿ ಸಂಸದ ಸುಬ್ರಹ್ಮಣ್ಯಂ ಸ್ವಾಮಿ ಅವರು ರಾಮನ ಭಾರತದಲ್ಲಿ ಪೆಟ್ರೋಲ್‌ ಬೆಲೆ 93 ರೂ., ರಾವಣನ ಲಂಕಾದಲ್ಲಿ 51 ರೂ. ಮತ್ತು ಸೀತೆಯ ತವರು ನೇಪಾಲದಲ್ಲಿ 53ರೂ. ಎಂದು ಹೇಳಿ ಸರಕಾರದ ಕಾಲೆಳೆದಿದ್ದರು.

ಜಿಎಸ್‌ಟಿ ವ್ಯಾಪ್ತಿಗೆ ಪೆಟ್ರೋಲಿಯಂ ಉತ್ಪನ್ನ?
ಪೆಟ್ರೋಲಿಯಂ ಉತ್ಪನ್ನವನ್ನು ಜಿಎಸ್‌ಟಿ ವ್ಯಾಪ್ತಿಗೆ ತರಬೇಕು ಎಂದು ಸರಕಾರದ ಮುಖ್ಯ ಆರ್ಥಿಕ ಸಲಹೆಗಾರ ಕೆ.ವಿ.ಸುಬ್ರಹ್ಮಣ್ಯಂ ಹಾಗೂ ತೈಲ ಸಚಿವ ಧರ್ಮೇಂದ್ರ ಪ್ರಧಾನ್‌ ಸರಕಾರಕ್ಕೆ ಸಲಹೆ ನೀಡಿದ್ದಾರೆ. ಭಾರತದಲ್ಲಿ ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆಗೆ ಎರಡು ಪಟ್ಟು ತೆರಿಗೆ ವಿಧಿಸಲಾಗಿದೆ. ಕೇಂದ್ರ ಸರಕಾರ ಕಳೆದ 12 ತಿಂಗಳಲ್ಲಿ ಎರಡು ಬಾರಿ ಅಬಕಾರಿ ಸುಂಕವನ್ನು ಹೆಚ್ಚಿಸಿದೆ. ಕೋವಿಡ್‌ ಸೋಂಕು ದೇಶದಲ್ಲಿ ವ್ಯಾಪಿಸುತ್ತಿರುವಾಗಲೇ ಸರಕಾರ ಅಬಕಾರಿ ಸುಂಕವನ್ನು ಹೆಚ್ಚಿಸಿತ್ತು. ಕುಸಿದ ಬೇಡಿಕೆಯನ್ನು ಹೊಂದಿಸಲು ಈ ನಡೆ ಎಂದು ಸಮಜಾಯಿಷಿ ನೀಡಿತ್ತು. ಆದರೆ ಬಳಿಕ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಕಡಿಮೆಯಾ ದಾಗ ಸರಕಾರ ಸುಂಕ ಕಡಿತ ಮಾಡಿರಲಿಲ್ಲ.

ಯಾವಾಗ ಜಾರಿ?
ಮಾರ್ಚ್‌ 15ರೊಳಗೆ ಕೇಂದ್ರ ಸರಕಾರ ಅಬಕಾರಿ ಸುಂಕವನ್ನು ಕಡಿಮೆ ಮಾಡುವ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಹೇಳಲಾಗುತ್ತಿದೆ. ಸರಕಾರದ ಮೂಲಗಳ ಪ್ರಕಾರ, ಶೀಘ್ರದಲ್ಲೇ ಇದನ್ನು ನಿರ್ಧರಿಸಲಾಗುತ್ತದೆ. ದೇಶದಲ್ಲಿ ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ಪ್ರಸ್ತುತ ಸರಾಸರಿ 92 ಮತ್ತು 86 ರೂ. ಇದೆ. ಇನ್ನೂ ಕೆಲವು ನಗರಗಳಲ್ಲಿ ಪೆಟ್ರೋಲ್‌ 100 ರೂಪಾಯಿಗಳನ್ನು ಮೀರಿದೆ. ಇಂತಹ ಪರಿಸ್ಥಿತಿಯಲ್ಲಿ ಸರಕಾರದ ಮೇಲೆ ಒತ್ತಡಗಳೂ ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಅಬಕಾರಿ ಸುಂಕವನ್ನು ಕಡಿಮೆ ಮಾಡಲು ಸರಕಾರ ಮುಂದಾಗಿದೆ.

ಎರಡು ಕಂಪೆನಿಗಳ ಪಾಲು ಶೇ. 90
ದೇಶದಲ್ಲಿ ಮಾರಾಟವಾಗುವ ಒಟ್ಟು ಇಂಧನ ದಲ್ಲಿ ಶೇ. 90ರಷ್ಟು ಪ್ರಮಾಣ ಎಚ್‌ಪಿಸಿಎಲ್‌ ಮತ್ತು ಬಿಪಿಸಿಎಲ್‌ನದ್ದಾಗಿದೆ. ವಿಶ್ವದ ಮೂರನೇ ಅತೀ ದೊಡ್ಡ ತೈಲ ಆಮದು ದೇಶವಾಗಿರುವ ಭಾರತದಲ್ಲಿ ತೈಲ ನಿಗಮಗಳ ಸೇವಾ ಕೇಂದ್ರಗಳ ಸಂಖ್ಯೆ ಜನವರಿಯಲ್ಲಿ ಶೇ. 26.8ರಷ್ಟು ಹೆಚ್ಚಳವಾಗಿದೆ.

ನಗರದಿಂದ ನಗರಕ್ಕೆ ಬೆಲೆ ಏಕೆ ಬದಲಾಗುತ್ತದೆ?
ಪೆಟ್ರೋಲ…-ಡೀಸೆಲ್‌ ಪೆಟ್ರೋಲ್‌ ಪಂಪ್‌ ಅನ್ನು ತಲುಪಿದಾಗ, ತೈಲ ಡಿಪೋದಿಂದ ಪೆಟ್ರೋಲ್‌ ಪಂಪ್‌ ಎಷ್ಟು ದೂರದಲ್ಲಿದೆ ಎಂಬುದನ್ನು ಆಧರಿಸಿ ಬೆಲೆಯನ್ನು ನಿಗದಿಗೊಳಿಸಲಾಗುತ್ತದೆ. ಈ ಕಾರಣದಿಂದಾಗಿ ತೈಲ ಸಾಗಣೆ ವೆಚ್ಚ ಹೆಚ್ಚಿದಂತೆ ತೈಲ ಬೆಲೆಯಲ್ಲಿ ವ್ಯತ್ಯಾಸವಾಗುತ್ತದೆ.

ಡೀಸೆಲ್‌ ಬಳಕೆ ಹೆಚ್ಚು
ಡೀಸೆಲ್‌ ಭಾರತದಲ್ಲಿ ಹೆಚ್ಚು ಬಳಸುವ ಪೆಟ್ರೋಲಿಯಂ ಉತ್ಪನ್ನವಾಗಿದೆ. ಇದರ ಪ್ರಮಾಣ ಒಟ್ಟು ಇಂಧನ ಬಳಕೆಯ ಸುಮಾರು ಶೇ. 40ರಷ್ಟಿದೆ. ಸಾರಿಗೆಯ ಅನಂತರ ಡೀಸೆಲ್‌ ಅನ್ನು ಕೃಷಿ ಕ್ಷೇತ್ರದಲ್ಲಿ ಹೆಚ್ಚು ಬಳಸಲಾಗುತ್ತದೆ. ಕಳೆದ ಒಂದು ವರ್ಷದಲ್ಲಿ ಭಾರತ್‌ ಪೆಟ್ರೋಲಿಯಂ 2,212 ಮಳಿಗೆಗಳನ್ನು ತೆರೆದಿದ್ದು ಇವುಗಳಲ್ಲಿ ಮೂರನೇ ಎರಡರಷ್ಟು ಮಳಿಗೆಗಳು ಹಳ್ಳಿಯಲ್ಲಿವೆ.

ತೆರಿಗೆ ಇಳಿಸಿದ 5 ರಾಜ್ಯಗಳು
ಇಲ್ಲಿಯ ವರೆಗೆ 5 ರಾಜ್ಯಗಳು ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ತೆರಿಗೆಯನ್ನು ಕಡಿತಗೊಳಿ ಸಿವೆ. ರಾಜಸ್ಥಾನ, ಪಶ್ಚಿಮ ಬಂಗಾಲ, ಅಸ್ಸಾಂ, ಮೇಘಾಲಯ ಮತ್ತು ನಾಗಾಲ್ಯಾಂಡ್‌ ಸರಕಾರಗಳು ವ್ಯಾಟ್‌ನ್ನು ಕಡಿತಗೊಳಿಸುವ ಮೂಲಕ ತೈಲ ಗ್ರಾಹಕರ ಮೇಲಣ ಹೊರೆಯನ್ನು ಕೊಂಚ ಕಡಿಮೆ ಮಾಡಿವೆ.

ತೈಲ ಕಂಪೆ‌ನಿಗಳ ಹಳ್ಳಿ ನಡಿಗೆ
ತೈಲ ಕಂಪೆ‌ನಿಗಳು ಪ್ರಸ್ತುತ ಹಳ್ಳಿಗಳತ್ತ ಹೆಚ್ಚು ಗಮನ ಹರಿಸುತ್ತಿವೆ. ಸಣ್ಣ ಪಟ್ಟಣಗಳು ಮತ್ತು ಹಳ್ಳಿಗಳು ಕೋವಿಡ್‌ನಿಂದ ಕಡಿಮೆ ತೊಂದರೆ ಅನುಭವಿಸಿದ್ದವು. ವರ್ಕ್‌ ಫ್ರಮ್‌ ಹೋಂ ಸಹಿತ ಇತರ ಕಾರಣಗಳಿಂದ ಗ್ರಾಮೀಣ ಭಾಗದಲ್ಲಿ ಚಟುವಟಿಕೆಗಳು ಹೆಚ್ಚಾಗಿ, ಇಂಧನ ಬೇಡಿಕೆಯೂ ಹೆಚ್ಚಿದೆ. ಈ ನಿಟ್ಟಿನಲ್ಲಿ ತೈಲ ಕಂಪೆನಿಗಳು ಅಲ್ಲಿ ತೈಲ ಕೇಂದ್ರಗಳನ್ನು ತೆರೆಯುವ ಯೋಜನೆಗಳತ್ತ ಹೆಚ್ಚು ಗಮನ ಹರಿಸುತ್ತಿವೆ. ಭಾರತೀಯ ತೈಲ ನಿಗಮ ನಿಯಮಿತ(ಐಒಸಿಎಲ್‌)ಭಾರತ್‌ ಪೆಟ್ರೋಲಿಯಂ ನಿಗಮ ನಿಯಮಿತ (ಬಿಪಿಸಿಎಲ್) ಮತ್ತು ಹಿಂದೂಸ್ಥಾನ್‌ ಪೆಟ್ರೋಲಿಯಂ ನಿಗಮ ನಿಯಮಿತ (ಎಚ್‌ಪಿಸಿಎಲ್) ಈ ವರ್ಷ ಗ್ರಾಮೀಣ ಪ್ರದೇಶಗಳಲ್ಲಿನ ಮಳಿಗೆಗಳನ್ನು ಹೆಚ್ಚಿಸಲು ಯೋಜಿಸಿದೆ. ಇವು ದೇಶದ ಮೂರು ದೊಡ್ಡ ತೈಲ ಕಂಪೆನಿಗಳಾಗಿವೆ.

ಹಳ್ಳಿಗಳಿಂದ ಬೇಡಿಕೆ ಹೆಚ್ಚು!
ಮೊದಲ ಹಂತದ ನಗರಗಳಲ್ಲಿ ತೈಲೋತ್ಪನ್ನಗಳಿಗೆ ಬೇಡಿಕೆ ಸ್ಥಿರವಾಗಿದ್ದರೂ ಗ್ರಾಮೀಣ ಪ್ರದೇಶಗಳಲ್ಲಿ ಇದರ ಬೇಡಿಕೆ ಹೆಚ್ಚಿದೆ. 1950ರಿಂದೀಚೆಗೆ ಉಂಟಾದ ಭೀಕರ ಆರ್ಥಿಕ ಹಿಂಜರಿತವನ್ನು ನಿವಾರಿಸುವ ಭರವಸೆಯೊಂದಿಗೆ ಭಾರತವು ಕೃಷಿ ಕ್ಷೇತ್ರವನ್ನು ಎದುರು ನೋಡುತ್ತಿದೆ. ಹೀಗಾಗಿ ಗ್ರಾಮಿಣ ಭಾಗಗಳಲ್ಲಿ ಹೆಚ್ಚು ಚಟುವಟಿಕೆಗಳು ನಡೆಯುತ್ತಲಿವೆ. ಗ್ರಾಮೀಣ ಭಾಗದಲ್ಲಿ ಭಾರೀ ಪ್ರಮಾಣದಲ್ಲಿ ಟ್ರ್ಯಾಕ್ಟರ್‌ಗಳು ಮಾರಾಟವಾಗಿವೆ. ಈ ಎಲ್ಲ ಕಾರಣಗಳಿಂದಾಗಿ ಹಳ್ಳಿಗಳಲ್ಲಿ ತೈಲೋತ್ಪನ್ನಗಳಿಗೆ ಬೇಡಿಕೆ ಹೆಚ್ಚಾಗಿದೆ.

ಟಾಪ್ ನ್ಯೂಸ್

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya :ಗಂಡ ಗದ್ಯ, ಹೆಂಡತಿ ಪದ್ಯ ಮಕ್ಕಳು ರಗಳೆ: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

Mandya Sahitya Sammelana: ಅಕ್ಷರ ಜಾತ್ರೆಯಲ್ಲಿ “ಹವಾ’ ಎಬ್ಬಿಸಿದ ತೊಟ್ಟಿ ಮನೆ..!

Mandya Sahitya Sammelana: ಅಕ್ಷರ ಜಾತ್ರೆಯಲ್ಲಿ “ಹವಾ’ ಎಬ್ಬಿಸಿದ ತೊಟ್ಟಿ ಮನೆ..!

Mandya: ನುಡಿ ಹಬ್ಬದ ಔತಣ ಸವಿಯಲು ಜನವೋ ಜನ- ವೃದ್ಧರಿಗೆ ವಿಶೇಷ ಕೌಂಟರ್‌

Mandya: ನುಡಿ ಹಬ್ಬದ ಔತಣ ಸವಿಯಲು ಜನವೋ ಜನ- ವೃದ್ಧರಿಗೆ ವಿಶೇಷ ಕೌಂಟರ್‌

ravishankar-guruji

World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ

1-dhyan

Meditation; ಮಾನಸಿಕ ಆರೋಗ್ಯಕ್ಕೆ ದಿವ್ಯೌಷಧ: ಡಿ.21ರಂದೇ ಏಕೆ ಧ್ಯಾನ ದಿನ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

1-max

Max; ಟ್ರೈಲರ್ ಬಿಡುಗಡೆ: ಭರ್ಜರಿ ಲುಕ್ ನಲ್ಲಿ ಕಿಚ್ಚ!

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.