ಪ್ರಗತಿ ಪಥಕ್ಕೆ ಮತ್ತಷ್ಟು ಕಾಸು : ಹೆದ್ದಾರಿ ಸಂಪರ್ಕ ಜಾಲಕ್ಕೆ ವಿಶೇಷ ಒತ್ತು

Team Udayavani, Feb 2, 2021, 12:45 AM IST

ಪ್ರಗತಿ ಪಥಕ್ಕೆ ಮತ್ತಷ್ಟು ಕಾಸು : ಹೆದ್ದಾರಿ ಸಂಪರ್ಕ ಜಾಲಕ್ಕೆ ವಿಶೇಷ ಒತ್ತು

ಬಜೆಟ್‌ನಲ್ಲಿ ಮೂಲ ಸೌಕರ್ಯಗಳಿಗಾಗಿ ದೇಶಾದ್ಯಂತ ಹೆದ್ದಾರಿ ಸಂಪರ್ಕ ಜಾಲಕ್ಕೆ ವಿಶೇಷ ಒತ್ತು, ವ್ಯಾಪಾರಿ ಹಡಗುಗಳ ಉತ್ತೇಜನಕ್ಕೆ ಯೋಜನೆ, “ಉಜ್ವಲಾ’ ಯೋಜನೆಗೆ ಇನ್ನೂ 1 ಕೋಟಿ ಕುಟುಂಬ ಸೇರ್ಪಡೆ, “ಗ್ರಾಹಕರು ತಮಗಿಷ್ಟದ ವಿದ್ಯುತ್‌ ಪ್ರಸರಣ ಕಂಪನಿಗಳನ್ನು ಆಯ್ಕೆ ಮಾಡಿಕೊಳ್ಳಲು ಯೋಜನೆ, ಪ್ರತ್ಯೇಕ “ಅಭಿ ವೃದ್ಧಿ ಹಣಕಾಸು ಸಂಸ್ಥೆ’ ರಚನೆ, “ಬೃಹತ್‌ ಹೂಡಿಕೆಯ ಜವಳಿ ಪಾರ್ಕ್‌’ (ಎಂಐಟಿಆರ್‌ಎ- ಮಿತ್ರ) ಯೋಜನೆ ಜಾರಿ ಮಾಡಿ ವಿಶೇಷ ಅನುದಾನ ಬಿಡುಗಡೆ ಮಾಡಿದೆ.

ದೇಶದ ಪ್ರಗತಿ ಜತೆಗೆ ಆರ್ಥಿಕತೆಗೆ ಬೆಳವಣಿಗೆ ಸಾರಿಗೆ- ಸಂಪರ್ಕ ಮೂಲ ಸೌಕರ್ಯ ಅಭಿವೃದ್ಧಿಯ ಮಹತ್ವವನ್ನು ಮನಗಂಡಿರುವ ಕೇಂದ್ರ ಸರ್ಕಾರ ಈ ಬಾರಿ ರಸ್ತೆ, ರೈಲು ಹಾಗೂ ಬಂದರು ಸಂಪರ್ಕ ಜಾಲ ನಿರ್ಮಾಣ, ಅಭಿವೃದ್ಧಿಗೆ ದೊಡ್ಡ ಮೊತ್ತದ ಅನುದಾನ ಘೋಷಿಸಿದೆ. ರಸ್ತೆ ಸಾರಿಗೆ ಮತ್ತು ಹೆದ್ದಾರಿ ನಿರ್ಮಾಣಕ್ಕಾಗಿ 1.18 ಲಕ್ಷ ಕೋಟಿ ರೂ. ಅನುದಾನ ಕಾಯ್ದಿರಿಸುವ ಮೂಲಕ ಇತಿಹಾಸದಲ್ಲೇ ಅತಿ ಹೆಚ್ಚು ಹಣ ಮೀಸಲಿಟ್ಟಂತಾಗಿದೆ.

ದೇಶಾದ್ಯಂತ ಹೆದ್ದಾರಿ ಸಂಪರ್ಕ ಜಾಲಕ್ಕೆ ವಿಶೇಷ ಒತ್ತು ನೀಡಲಾಗಿದೆ. “ಭಾರತ ಮಾಲಾ ಪರಿಯೋಜನೆ’ಯಡಿ ಒಟ್ಟು 5.35 ಲಕ್ಷ ಕೋಟಿ ರೂ. ವೆಚ್ಚದಲ್ಲಿ 13,000 ಕಿ.ಮೀ. ಉದ್ದದ ಹೆದ್ದಾರಿ ನಿರ್ಮಾಣಕ್ಕೆ ಹಿಂದೆಯೇ ಚಾಲನೆ ದೊರಕಿದ್ದು, ಈವರೆಗೆ 3,800 ಕಿ.ಮೀ. ಉದ್ದದ ಮಾರ್ಗ ನಿರ್ಮಾಣಗೊಂಡಿದೆ. 2022ರ ಮಾರ್ಚ್‌ನೊಳಗೆ 8,500 ಕಿ.ಮೀ. ಉದ್ದದ ಮಾರ್ಗ ನಿರ್ಮಾಣಕ್ಕೆ ಅನುಮತಿ ನೀಡಲಾಗುವುದು ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಪ್ರಕಟಿಸಿದ್ದಾರೆ.

ಇದನ್ನೂ ಓದಿ:ಆರೋಗ್ಯಾಧಾರ ಸ್ತಂಭ: ಕೋವಿಡ್ ಕಲಿಸಿದ ಪಾಠ

ತಮಿಳುನಾಡಿನಲ್ಲಿ ಮಧುರೈ- ಕೊಲ್ಲಂ ಕಾರಿಡಾರ್‌, ಚಿತ್ತೂರು- ತಟೂcರ್‌ ಕಾರಿಡಾರ್‌ ಸೇರಿದಂತೆ ಒಟ್ಟು 1.03 ಲಕ್ಷ ಕೋಟಿ ರೂ. ವೆಚ್ಚದಲ್ಲಿ 3,500 ಕಿ.ಮೀ. ಉದ್ದದ ಹೆದ್ದಾರಿ ಕಾಮಗಾರಿಯನ್ನು ಘೋಷಿಸಿದ್ದು, ಮುಂದಿನ ವರ್ಷ ಅಂದರೆ 2022-23ನೇ ಸಾಲಿನಲ್ಲಿ ಇವು ಕಾರ್ಯಾರಂಭವಾಗಲಿವೆ.

ನೆರೆಯ ಕೇರಳ ರಾಜ್ಯದಲ್ಲಿ ಮುಂಬೈ- ಕನ್ಯಾಕುಮಾರಿ ಕಾರಿಡಾರ್‌ನಡಿ 600 ಕಿ.ಮೀ. ಉದ್ದದ ಹೆದ್ದಾರಿ ಸೇರಿದಂತೆ ಒಟ್ಟು 65,000 ಕೋಟಿ ರೂ. ವೆಚ್ಚದಲ್ಲಿ 1,100 ಕಿ.ಮೀ. ಉದ್ದದ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ. ಪಶ್ಚಿಮ ಬಂಗಾಳದಲ್ಲಿ ಕೊಲ್ಕತ್ತಾ- ಸಿಲಿಗುರಿ ಹೆದ್ದಾರಿ ಮೇಲ್ದರ್ಜೆ ಕಾಮಗಾರಿ ಸೇರಿದಂತೆ 675 ಕಿ.ಮೀ. ಉದ್ದದ ಹೆದ್ದಾರಿ ನಿರ್ಮಾಣಕ್ಕಾಗಿ 25,000 ಕೋಟಿ ರೂ. ಅನುದಾನ ಘೋಷಿಸ ಲಾಗಿದೆ. ಅಸ್ಸಾಂನಲ್ಲಿ ಪ್ರಗತಿ ಯಲ್ಲಿರುವ ಹೆದ್ದಾರಿ ಕಾಮಗಾರಿ ಗಳಿಗೆ 19,000 ಕೋಟಿ ರೂ. ಅನುದಾನ ಒದಗಿಸಲಾಗಿದೆ. ಮುಂದಿನ ಮೂರು ವರ್ಷಗಳಲ್ಲಿ 1,300 ಕಿ.ಮೀ. ಉದ್ದದ ರಾಷ್ಟ್ರೀಯ ಹೆದ್ದಾರಿ ನಿರ್ಮಾಣವನ್ನು 34,000 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳುವ ಭರವಸೆ ನೀಡಲಾಗಿದೆ.

2021-22ರಲ್ಲಿ ಕಾಮಗಾರಿಗೆ ಚಾಲನೆ
– ದೆಹಲಿ- ಮುಂಬೈ ಎಕ್ಸ್‌ಪ್ರೆಸ್‌ ವೇ: 260 ಕಿ.ಮೀ. ಉದ್ದದ ಕಾಮಗಾರಿಗೆ ಎರಡು ತಿಂಗಳಲ್ಲಿ ಮಂಜೂರಾತಿ
– ಬೆಂಗಳೂರು- ಚೆನ್ನೈ ಎಕ್ಸ್‌ಪ್ರೆಸ್‌ ವೇ: 278 ಕಿ.ಮೀ. ಉದ್ದದ ಮಾರ್ಗ ನಿರ್ಮಾಣಕ್ಕೆ ಚಾಲನೆ
– ದೆಹಲಿ- ಡೆಹ್ರಡೂನ್‌ ಎಕನಾಮಿಕ್‌ ಕಾರಿಡಾರ್‌: 210 ಕಿ.ಮೀ. ಉದ್ದದ ಕಾರಿಡಾರ್‌ಗೆ ಹಸಿರು ನಿಶಾನೆ
– ಕಾನ್ಪುರ- ಲಕ್ನೋ ಎಕ್ಸ್‌ಪ್ರೆಸ್‌ ವೇ: ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 27ಕ್ಕೆ ಪರ್ಯಾಯವಾಗಿ 63 ಕಿ.ಮೀ. ಉದ್ದದ ಎಕ್ಸ್‌ಪ್ರೆಸ್‌ ನಿರ್ಮಾಣ ಕಾರ್ಯ ಚಾಲನೆ
– ಚೆನ್ನೆ- ಸೇಲಂ ಕಾರಿಡಾರ್‌: 277 ಕಿ.ಮೀ. ಉದ್ದದ ಎಕ್ಸ್‌ಪ್ರೆಸ್‌ ಮಾರ್ಗಕ್ಕೆ ಮಂಜೂರಾತಿ- ನಿರ್ಮಾಣಕ್ಕೆ ಚಾಲನೆ
– ರಾಯಪುರ- ವಿಶಾಖಪಟ್ಟಣಂ: ಛತ್ತೀಸ್‌ಗಡ, ಒಡಿಶಾ ಹಾಗೂ ಉತ್ತಮ ಆಂಧ್ರ ಪ್ರದೇಶದಲ್ಲಿ ಹಾದು ಹೋಗುವ 464 ಕಿ.ಮೀ. ಉದ್ದದ ಮಾರ್ಗ ನಿರ್ಮಾಣ ಕಾರ್ಯಾರಂಭ.

ಟಾಪ್ ನ್ಯೂಸ್

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

tirupati

Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ

ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ

Team India; Bumrah meets Kiwi surgeon: Doubts over Champions Trophy?

Team India; ಕಿವೀಸ್‌ ಸರ್ಜನ್‌ ಭೇಟಿಯಾದ ಬುಮ್ರಾ: ಚಾಂಪಿಯನ್ಸ್‌ ಟ್ರೋಫಿಗೆ ಅನುಮಾನ?

Tirupati Tragedy: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

Tirupati Tragedy: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tirupati

Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು

ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ

ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ

Tirupati Tragedy: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

Tirupati Tragedy: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

Bhopal: ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ… ಹೈ ಅಲರ್ಟ್

Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…

18ನೇ ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೆ ಚಾಲನೆ

Odisha: ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೂ ಚಾಲನೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

tirupati

Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

13-frndshp

Friendship: ಸ್ನೇಹವೇ ಸಂಪತ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.