ಅಂಜನಾದ್ರಿ: ಹನುಮಜಯಂತಿ, ಮಾಲೆ ವಿಸರ್ಜನೆಗೆ ಸಕಲ ಸಿದ್ಧತೆ

ಮಾಲಾಧಾರಿಗಳು ಸೇರಿ 40 ಸಾವಿರ ಹನುಮ ಭಕ್ತರ ಆಗಮನ ನಿರೀಕ್ಷೆ

Team Udayavani, Apr 15, 2022, 4:42 PM IST

24anjanadri

ಗಂಗಾವತಿ: ತಾಲೂಕಿನ ಇತಿಹಾಸ ಪ್ರಸಿದ್ಧ ಕಿಷ್ಕಿಂದಾ ಅಂಜನಾದ್ರಿಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಹನುಮಮಾಲಾಧಾರಿಗಳ ಮಾಲಾ ವಿಸರ್ಜನಾ ಕಾರ್ಯ ಏ.16 ರಂದು ಶನಿವಾರ ಜರುಗಲಿದೆ. ಮಾಲಾ ವಿಸರ್ಜನೆ ಮತ್ತು ಹನುಮ ಜಯಂತೋತ್ಸವಕ್ಕೆ ತಾಲೂಕು ಆಡಳಿತ ಸಕಲ ಸಿದ್ಧತೆಗಳನ್ನು ಕೈಗೊಂಡಿದೆ.

ರಾಜ್ಯದ ವಿವಿಧ ಸ್ಥಳಗಳಿಂದ ಹನುಮಮಾಲಾಧಾರಿಗಳು ಸೇರಿ 40 ಸಾವಿರ ಹನುಮ ಭಕ್ತರು ಅಂಜನಾದ್ರಿಗೆ ಆಗಮಿಸುವ ನಿರೀಕ್ಷೆ ಇದ್ದು, ವಾಹನಗಳ ಪಾರ್ಕಿಂಗ್ ಹಾಗೂ ಆಗಮಿಸುವವರಿಗೆ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ. ಹನುಮಮಾಲಾಧಾರಿಗಳು ಹನುಮನಹಳ್ಳಿ ಋಷಿಮುಖ ಪರ್ವತದ ಹತ್ತಿರ ತುಂಗಭದ್ರಾ ನದಿ ಮತ್ತು ವಿಜಯನಗರ ಕಾಲುವೆಯಲ್ಲಿ ಸ್ನಾನ ಮಾಡಲು ವ್ಯವಸ್ಥೆ ಮಾಡಲಾಗಿದ್ದು, ಅಲ್ಲಿಂದ ಅಂಜನಾದ್ರಿಗೆ ಬರಲು ಸ್ವಾಗತ ಕಮಾನು ನಿರ್ಮಿಸಲಾಗಿದೆ.

ಅಂಜನಾದ್ರಿಯಲ್ಲಿ ಏಕ ಮುಖ (ಒನ್ ವೇ) ಸಂಚಾರದ ವ್ಯವಸ್ಥೆ ಮಾಡಲಾಗಿದ್ದು, ಬಲ ಭಾಗದಿಂದ ಹತ್ತಿ ಎಡಭಾಗದಿಂದ ಇಳಿದು ಸಂಸ್ಕೃತ ಪಾಠ ಶಾಲೆಯ ಆವರಣದಲ್ಲಿ ಅನ್ನ ಪ್ರಸಾದ ಸ್ವೀಕಾರ ಮಾಡುವ ವ್ಯವಸ್ಥೆ ಮಾಡಲಾಗಿದೆ.

ಈಗಾಗಲೇ ಆನೆಗೊಂದಿ ಸರಕಾರಿ ಪ್ರೌಢಶಾಲೆ, ಉತ್ಸವ ಜಾಗ, ಚಿಕ್ಕರಾಂಪೂರದ ಕಟಾವಾಗಿರುವ ಭತ್ತದ ಗದ್ದೆಗಳು ಮತ್ತು ಹನುಮನಹಳ್ಳಿಯ ಸುತ್ತಲೂ ವಾಹನ ನಿಲುಗಡೆಗಾಗಿ ಪೊಲೀಸ್ ಇಲಾಖೆ ಸ್ಥಳ ನಿಗದಿ ಮಾಡಿದೆ. ಬೆಟ್ಟ ಹತ್ತುವ ಭಕ್ತರಿಗೆ ಶುದ್ಧ ಕುಡಿಯುವ ನೀರಿನ್ನು ಒದಗಿಸಲಾಗುತ್ತದೆ. ತಾತ್ಕಲಿಕ ಆಸ್ಪತ್ರೆಯನ್ನು ಬೆಟ್ಟದ ಎರಡು ಕಡೆ ನಿಗದಿ ಮಾಡಿ ಆರೋಗ್ಯ ಇಲಾಖೆಯ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗಿದೆ.

ಇದನ್ನೂ ಓದಿ:ಐತಿಹಾಸಿಕ ಸ್ಮಾರಕ ರಕ್ಷಣೆಯಲ್ಲಿ ಜಿಲ್ಲಾಡಳಿತ ನಿರ್ಲಕ್ಷ್ಯ ಆರೋಪ

ಏ.15 ಮತ್ತು 16 ರಂದು ದಿನದ 24 ಗಂಟೆ ವಿದ್ಯುತ್ ಸರಬರಾಜು ಮಾಡಲು ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ. ಕಂದಾಯ, ಪೊಲೀಸ್, ಅರಣ್ಯ, ಜೆಸ್ಕಾಂ, ಆರೋಗ್ಯ ಇಲಾಖೆ ಅಧಿಕಾರಿಗಳು ನಿರಂತರವಾಗಿ ಅಂಜನಾದ್ರಿಯಲ್ಲಿದ್ದು ಆಗಮಿಸುವ ಭಕ್ತರಿಗೆ ಸೇವೆ ನೀಡಲಿದ್ದಾರೆ.  ಏ.16 ರಂದು ಒಂದು ದಿನದ ಮಟ್ಟಿಗೆ ಗಂಗಾವತಿ-ಮುನಿರಾಬಾದ(ಹುಲಿಗಿ) ನಿರಂತರ ಬಸ್ ಮಾರ್ಗವನ್ನು ವಾಯ ಜಂಗ್ಲಿ(ರಂಗಾಪೂರ) ಸಾಣಾಪೂರ ಮೂಲಕ ಸಂಚರಿಸುವ ವ್ಯವಸ್ಥೆ ಮಾಡಲಾಗಿದೆ.

ಪೊಲೀಸ್ ಬಂದೋಬಸ್ತ್ ಗಾಗಿ ಇಬ್ಬರು ಡಿಎಸ್ಪಿ, 05 ಜನ ಸಿಪಿಐ, 9 ಜನ ಪಿಎಸೈ, 200ಕ್ಕೂ ಹೆಚ್ಚು ಹೋಂಗಾರ್ಡ್ ಪೊಲೀಸರು ಸೇರಿ ಕೆಎಸ್‌ಆರ್‌ಪಿ ಡಿಎಆರ್ ಪೊಲೀಸ್ ತುಕಡಿಯ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.

ಟಾಪ್ ನ್ಯೂಸ್

Accident-logo

Kolluru: ಕಾಂತಾರ ಚಿತ್ರ ತಂಡದ ವಾಹನ ಅಪಘಾತ

1-reee

Chikkamagaluru: ದತ್ತಪೀಠದಲ್ಲಿ ಕುಂಕುಮ ಲೇಪಿಸಿ ಧಾರ್ಮಿಕ ಭಾವನೆಗೆ ಧಕ್ಕೆ: ಖಾದ್ರಿ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

3-tavaragera

Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್

4-gangavathi

Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Police

Karkala: ಎಸ್‌ಪಿ ಕಚೇರಿ ಮುತ್ತಿಗೆ ಹೇಳಿಕೆ ಆರೋಪ: ಪ್ರಕರಣ ದಾಖಲು

1-yadu

Hindutva; ಧರ್ಮದ ವಿರುದ್ಧ ಬಂದರೆ ಸುಮ್ಮನಿರೆವು: ಯದುವೀರ ಕೃಷ್ಣದತ್ತ ಒಡೆಯರ್‌

Accident-logo

Kolluru: ಕಾಂತಾರ ಚಿತ್ರ ತಂಡದ ವಾಹನ ಅಪಘಾತ

1-reee

Chikkamagaluru: ದತ್ತಪೀಠದಲ್ಲಿ ಕುಂಕುಮ ಲೇಪಿಸಿ ಧಾರ್ಮಿಕ ಭಾವನೆಗೆ ಧಕ್ಕೆ: ಖಾದ್ರಿ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.