ಟೆಸ್ಟ್‌ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ ದಕ್ಷಿಣ ಆಫ್ರಿಕಾ ತಂಡದ ಡು ಪ್ಲೆಸಿಸ್


Team Udayavani, Feb 17, 2021, 10:46 PM IST

ಟೆಸ್ಟ್‌ ಕ್ರಿಕೆಟಿಗೆ ದಕ್ಷಿಣ ಆಫ್ರಿಕಾ ತಂಡದ ಆಟಗಾರ ಡು ಪ್ಲೆಸಿಸ್‌ ವಿದಾಯ

ಜೊಹಾನ್ಸ್‌ಬರ್ಗ್: ಸೀಮಿತ ಓವರ್‌ಗಳ ಕ್ರಿಕೆಟ್‌ನತ್ತ ಹೆಚ್ಚು ಗಮನ ಹರಿಸುವ ನಿಟ್ಟಿನಲ್ಲಿ ದಕ್ಷಿಣ ಆಫ್ರಿಕಾ ಕ್ರಿಕೆಟ್‌ ತಂಡದ ಅನುಭವಿ ಆಟಗಾರ ಫಾ ಡು ಪ್ಲೆಸಿಸ್‌ ಬುಧವಾರ ಟೆಸ್ಟ್‌ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದರು.

“ಈ ವರ್ಷ ಎಲ್ಲರಿಗೂ ಬಹಳ ಕಠಿನ ಹಾಗೂ ಸವಾಲಿನದಾಗಿತ್ತು. ಅನೇಕ ಗೊಂದಲ ಕಾಡಿದ್ದು ನಿಜ. ಆದರೆ ನನಗಂತೂ ಹಲವು ವಿಚಾರಗಳಲ್ಲಿ ಸ್ಪಷ್ಟತೆ ಸಿಕ್ಕಿದೆ. ನನ್ನ ಮನಸ್ಸು ನಿರಾಳವಾಗಿದ್ದು, ವೃತ್ತಿ ಬದುಕಿನಲ್ಲಿ ಹೊಸ ಅಧ್ಯಾಯ ಬರೆಯಲು ಇದು ಸೂಕ್ತ ಸಮಯ. ಎಲ್ಲ ಮಾದರಿಯ ಕ್ರಿಕೆಟ್‌ನಲ್ಲಿ ದೇಶದ ಪರ ಆಡುವ ಅವಕಾಶ ಸಿಕ್ಕಿದ್ದು ಬಹು ದೊಡ್ಡ ಗೌರವ. ಆದರೆ ನನ್ನ ಸಮಯ ಬಂದಾಗಿದೆ. ಟೆಸ್ಟ್‌ ಕ್ರಿಕೆಟಿಗೆ ವಿದಾಯ ಹೇಳುತ್ತಿದ್ದೇನೆ’ ಎಂದು ಡು ಪ್ಲೆಸಿಸ್‌ ತಮ್ಮ ಇನ್‌ಸ್ಟಾಮ್‌ ಖಾತೆಯಲ್ಲಿ ಪತ್ರವೊಂದನ್ನು ಪೋಸ್ಟ್‌ ಮಾಡಿ ನಿವೃತ್ತಿ ಸಾರಿದ್ದಾರೆ.

ಇದನ್ನೂ ಓದಿ:ಹಳ್ಳಿ ದತ್ತು ಪಡೆದು ಗ್ರಾಮಾಭಿವೃದ್ಧಿಗೆ ಹೊಸ ಹೆಜ್ಜೆ ಇಟ್ಟ ಕಿಚ್ಚ ಸುದೀಪ್

ಟಿ20ಗೆ ಮೊದಲ ಆದ್ಯತೆ
“ಮುಂದಿನ ಎರಡೂ ವರ್ಷಗಳಲ್ಲಿ ಐಸಿಸಿ ವಿಶ್ವಕಪ್‌ ಟೂರ್ನಿಗಳು ನಡೆಯಲಿವೆ. ಹೀಗಾಗಿ ಚುಟುಕು ಮಾದರಿಯ ಕ್ರಿಕೆಟ್‌ ಕಡೆಗೆ ಹೆಚ್ಚಿನ ಗಮನ ನೀಡಲಿದ್ದೇನೆ. ಚುಟುಕು ಮಾದರಿಯಲ್ಲಿ ತಂಡಕ್ಕೆ ಹೆಚ್ಚಿನ ಸೇವೆ ಒದಗಿಸಬಲ್ಲ ಸಾಮರ್ಥ್ಯ ನನ್ನಲ್ಲಿ ಇನ್ನೂ ಇದೆ. ಇದರರ್ಥ ಏಕದಿನ ಕ್ರಿಕೆಟ್‌ನಿಂದ ದೂರ ಉಳಿಯಲಿದ್ದೇನೆ ಎಂದಲ್ಲ. ಸದ್ಯಕ್ಕೆ ಟಿ20 ಕ್ರಿಕೆಟ್‌ಗೆ ಮೊದಲ ಆದ್ಯತೆ ನೀಡಿದ್ದೇನೆ’ ಎಂದು ಡು ಪ್ಲೆಸಿಸ್‌ ಹೇಳಿದರು.

36ರ ಹರೆಯದ ಡು ಪ್ಲೆಸಿಸ್‌ ದಕ್ಷಿಣ ಆಫ್ರಿಕಾ ಪರ 69 ಟೆಸ್ಟ್‌ ಪಂದ್ಯಗಳನ್ನಾಡಿ 4,163 ರನ್‌ ಬಾರಿಸಿದ್ದಾರೆ. ಇದರಲ್ಲಿ 10 ಶತಕ ಸೇರಿದೆ. 190 ರನ್‌ ಅತ್ಯುತ್ತಮ ಸಾಧನೆ. ನಾಯಕನಾಗಿ 36 ಪಂದ್ಯಗಳನ್ನು ಮುನ್ನಡೆಸಿದ್ದು, 18 ಪಂದ್ಯಗಳಲ್ಲಿ ತಂಡ ಗೆಲುವು ಕಂಡಿದೆ.

ಟಾಪ್ ನ್ಯೂಸ್

Shiggvi-Yatnal

Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್‌

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Stock-market-Exchange

NSE, BSE; ಷೇರು ಮಾರುಕಟ್ಟೆಗೆ ನವೆಂಬರ್‌ 20 ರಂದು ರಜೆ ಘೋಷಣೆ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KL Rahul and Athiya Shetty to welcome their first child in 2025

Our beautiful blessing..; ಚೊಚ್ಚಲ ಮಗುವಿನ ಖುಷಿ ಹಂಚಿಕೊಂಡ ರಾಹುಲ್‌ – ಅಥಿಯಾ ಶೆಟ್ಟಿ

Cricket: ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ

Cricket: ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

ಇಂದಿನಿಂದ 4 ಪಂದ್ಯಗಳ ಟಿ20 ಸರಣಿ; ಸೂರ್ಯ ಪಡೆಗೆ ಸೌತ್‌ ಆಫ್ರಿಕಾ ಸವಾಲು

IND Vs SA: ಇಂದಿನಿಂದ 4 ಪಂದ್ಯಗಳ ಟಿ20 ಸರಣಿ; ಸೂರ್ಯ ಪಡೆಗೆ ಸೌತ್‌ ಆಫ್ರಿಕಾ ಸವಾಲು

Pro Kabaddi 2024: ಗೆಲುವಿನ ಹಳಿ ಏರಿದ ದಬಾಂಗ್‌ ಡೆಲ್ಲಿ

Pro Kabaddi 2024: ಗೆಲುವಿನ ಹಳಿ ಏರಿದ ದಬಾಂಗ್‌ ಡೆಲ್ಲಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

16

Mangaluru: ನಿಯಮ ಉಲ್ಲಂಘನೆ; ಖಾಸಗಿ ಬಸ್‌ಗೆ ದಂಡ

Shiggvi-Yatnal

Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್‌

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

4

Mangaluru: ಗಾಂಜಾ ಮಾರಾಟ; ಇಬ್ಬರು ಯುವಕರ ಬಂಧನ

3

Uppinangady: ಕಬ್ಬಿಣದ ರಾಡಿನಿಂದ ಹಲ್ಲೆ; ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.